Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:43 - ಪರಿಶುದ್ದ ಬೈಬಲ್‌

43 “ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಸಭಾಮಂದಿರಗಳಲ್ಲಿ ಉನ್ನತಪೀಠಗಳನ್ನೂ ಮಾರುಕಟ್ಟೆಗಳಲ್ಲಿ ಜನರಿಂದ ಗೌರವವನ್ನೂ ಆಶಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 “ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಉನ್ನತ ಸ್ಥಾನಗಳನ್ನೂ ಅಂಗಡಿ ಬೀದಿಗಳಲ್ಲಿ ವಂದನೆಗಳನ್ನೂ ನೀವು ಬಯಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 “ಫರಿಸಾಯರೇ ನಿಮಗೆ ಧಿಕ್ಕಾರ! ಪ್ರಾರ್ಥನಾ ಮಂದಿರಗಳಲ್ಲಿ ಪ್ರಧಾನ ಆಸನಗಳನ್ನೂ ಪೇಟೆಬೀದಿಗಳಲ್ಲಿ ವಂದನೋಪಚಾರಗಳನ್ನೂ ಅಪೇಕ್ಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳೂ ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳೂ ನಿಮಗೆ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 “ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ ಇಷ್ಟಪಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 “ಫಾರಿಜೆವಾನೊ ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ಸಿನಾಗೊಗಾತ್ನಿ ಬರ್‍ಯಾ ಬರ್‍ಯಾ ಜಾಗ್ಯಾವೈನಿ ಬಸ್ತಲಿ, ತುಮ್ಕಾ ಲೈ ಕುಶಿ. ಅನಿ ಬಾಜಾರಾತ್, ವನಿಯಾತ್ನಿ, ಲೊಕಾನಿ ತುಮ್ಕಾ ನಮಸ್ಕಾರ್ ಕರ್ಲ್ಯಾರ್, ತುಮ್ಕಾ ಲೈ ಕುಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:43
10 ತಿಳಿವುಗಳ ಹೋಲಿಕೆ  

“ಧರ್ಮೋಪದೇಶಕರ ಕುರಿತು ಎಚ್ಚರಿಕೆಯಾಗಿರಿ. ಅವರು ಪ್ರಾಮುಖ್ಯ ವ್ಯಕ್ತಿಗಳಂತೆ ಬಟ್ಟೆ ಧರಿಸಿಕೊಂಡು ತಿರುಗಾಡುತ್ತಾರೆ. ಮಾರುಕಟ್ಟೆಗಳಲ್ಲಿ ಜನರಿಂದ ಗೌರವ ಹೊಂದಲು ಆಶಿಸುತ್ತಾರೆ. ಸಭಾಮಂದಿರಗಳಲ್ಲಿ ಮತ್ತು ಔತಣಕೂಟಗಳಲ್ಲಿ ಉನ್ನತವಾದ ಆಸನಗಳನ್ನು ಆಶಿಸುತ್ತಾರೆ.


ನಾನು ಸಭೆಗೆ ಒಂದು ಪತ್ರವನ್ನು ಬರೆದೆನು. ಆದರೆ ನಾವು ಹೇಳಿದುದನ್ನು ದಿಯೊತ್ರೇಫನು ಕೇಳುವುದಿಲ್ಲ. ಅವನು ತಾನೇ ಅವರ ನಾಯಕನಾಗಿರಬೇಕೆಂದು ಯಾವಾಗಲೂ ಇಚ್ಛಿಸುತ್ತಾನೆ.


ನೀವು ಯಾವುದನ್ನೇ ಮಾಡುವಾಗ, ಸ್ವಾರ್ಥವಾಗಲಿ ಅಹಂಕಾರವಾಗಲಿ ನಿಮಗೆ ಮಾರ್ಗದರ್ಶಕವಾಗದಂತೆ ನೋಡಿಕೊಳ್ಳಿರಿ. ದೀನಭಾವವುಳ್ಳವರಾಗಿದ್ದು ನಿಮಗಿಂತಲೂ ಹೆಚ್ಚಾಗಿ ಬೇರೆಯವರಿಗೆ ಗೌರವವನ್ನು ಕೊಡಿರಿ.


ಸಹೋದರ ಸಹೋದರಿಯರೆಂಬ ಅನ್ಯೋನ್ಯಭಾವದಿಂದ ಒಬ್ಬರನ್ನೊಬ್ಬರು ಪ್ರೀತಿಸಿರಿ. ನೀವು ನಿಮಗೋಸ್ಕರ ಬಯಸುವ ಮರ್ಯಾದೆಗಿಂತಲೂ ಹೆಚ್ಚು ಮರ್ಯಾದೆಯನ್ನು ನಿಮ್ಮ ಸಹೋದರ ಸಹೋದರಿಯರಿಗೆ ಕೊಡಿರಿ.


ಅಹಂಕಾರಿಯು ನಾಶನದ ಅಪಾಯದಲ್ಲಿದ್ದಾನೆ. ದುರಾಭಿಮಾನಿಯು ಸೋಲಿನ ಅಪಾಯದಲ್ಲಿದ್ದಾನೆ.


“ಈ ಕಾಲದ ಜನರನ್ನು ಕುರಿತು ನಾನು ಏನು ಹೇಳಲಿ? ಅವರು ಯಾವ ರೀತಿ ಇದ್ದಾರೆ? ಈ ಕಾಲದ ಜನರು ಮಾರುಕಟ್ಟೆಯಲ್ಲಿ ಕುಳಿತುಕೊಂಡಿರುವ ಮಕ್ಕಳಂತಿದ್ದಾರೆ. ಒಂದು ಗುಂಪಿನ ಮಕ್ಕಳು ಮತ್ತೊಂದು ಗುಂಪಿನ ಮಕ್ಕಳಿಗೆ ಹೀಗೆನ್ನುತ್ತಾರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು