ಲೂಕ 11:45 - ಪರಿಶುದ್ದ ಬೈಬಲ್45 ಧರ್ಮೋಪದೇಶಕನೊಬ್ಬನು ಯೇಸುವಿಗೆ, “ಬೋಧಕನೇ, ನೀನು ಫರಿಸಾಯರ ಕುರಿತಾಗಿ ಈ ಸಂಗತಿಗಳನ್ನು ಹೇಳಿದಾಗ ನಮ್ಮನ್ನು ಸಹ ಖಂಡಿಸಿದಂತಾಯಿತು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಇದನ್ನು ಕೇಳಿ ಒಬ್ಬ ಧರ್ಮೋಪದೇಶಕನು ಯೇಸುವಿಗೆ, “ಬೋಧಕನೇ, ಈ ಮಾತುಗಳನ್ನು ಹೇಳುವುದರಿಂದ ನಮ್ಮನ್ನೂ ನಿಂದಿಸಿದ ಹಾಗಾಯಿತು” ಎಂದು ಹೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಇದನ್ನು ಕೇಳಿದ ಒಬ್ಬ ಧರ್ಮಶಾಸ್ತ್ರಜ್ಞನು, “ಬೋಧಕರೇ, ನೀವು ಹೀಗೆ ಮಾತನಾಡುವುದರಿಂದ ನಮ್ಮನ್ನೂ ಖಂಡಿಸಿದಂತಾಯಿತು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಇದನ್ನು ಕೇಳಿ ಒಬ್ಬ ಧರ್ಮೋಪದೇಶಕನು ಆತನಿಗೆ - ಬೋಧಕನೇ, ಈ ಮಾತುಗಳನ್ನು ಹೇಳುವದರಿಂದ ನಮ್ಮನ್ನೂ ನಿಂದಿಸಿದ ಹಾಗಾಯಿತು ಎಂದು ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ನಿಯಮ ಬೋಧಕ ಒಬ್ಬನು ಯೇಸುವಿಗೆ, “ಬೋಧಕರೇ, ನೀವು ಇವುಗಳನ್ನು ಹೇಳುವುದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀರಿ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ತನ್ನಾ ಎಕ್ಲೊ ಖಾಯ್ದೆ ಶಿಕ್ವುತಲೊ, ಜೆಜುಕ್ “ಗುರುಜಿ, ಹೆ ಸಗ್ಳೆ ಸಾಂಗುನ್ ತಿಯಾ ಅಮ್ಚಿ ಮರ್‍ಯಾದ್ ಕಾಡುಲೆ?” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.