Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:46 - ಪರಿಶುದ್ದ ಬೈಬಲ್‌

46 ಅದಕ್ಕೆ ಯೇಸು, “ಧರ್ಮೋಪದೇಶಕರೇ, ನಿಮ್ಮ ಗತಿಯನ್ನು ಏನು ಹೇಳಲಿ! ಜನರು ಅನುಸರಿಸಲಾಗದ ನಿಯಮಗಳನ್ನು ನೀವು ಮಾಡುತ್ತೀರಿ. ಆ ನಿಯಮಗಳಿಗೆ ವಿಧೇಯರಾಗುವಂತೆ ಬೇರೆಯವರಿಗೆ ಬಲವಂತ ಮಾಡುತ್ತೀರಿ. ಆದರೆ ಆ ನಿಯಮಗಳಲ್ಲಿ ಒಂದನ್ನಾದರೂ ಪಾಲಿಸಲು ನೀವು ಪ್ರಯತ್ನಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಆತನು, “ಧರ್ಮೋಪದೇಶಕರೇ, ನಿಮ್ಮ ಗತಿಯನ್ನೂ ಏನು ಹೇಳಲಿ? ನೀವು ಜನರ ಮೇಲೆ ಹೊರಲಾರದ ಹೊರೆಗಳನ್ನು ಹೊರಿಸುತ್ತೀರಿ, ನೀವಾದರೋ ಆ ಹೊರೆಗಳನ್ನು ಒಂದು ಬೆರಳಿನಿಂದಲೂ ಮುಟ್ಟುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಅದಕ್ಕೆ ಯೇಸು, “ಶಾಸ್ತ್ರಜ್ಞರೇ, ನಿಮಗೂ ಧಿಕ್ಕಾರ! ಹೊರಲಾಗದ ಹೊರೆಗಳನ್ನು ನೀವು ಜನರ ಮೇಲೆ ಹೇರುತ್ತೀರಿ; ನೀವಾದರೋ ನಿಮ್ಮ ಕಿರುಬೆರಳಿನಿಂದ ಕೂಡ ಅವುಗಳನ್ನು ಮುಟ್ಟುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಆತನು - ಧರ್ಮೋಪದೇಶಕರೇ, ನಿಮ್ಮ ಗತಿಯನ್ನೂ ಏನು ಹೇಳಲಿ? ನೀವು ಜನರ ಮೇಲೆ ಹೊರಲಾರದ ಹೊರೆಗಳನ್ನು ಹೊರಿಸುತ್ತೀರಿ; ನೀವಾದರೋ ಆ ಹೊರೆಗಳನ್ನು ಒಂದು ಬೆರಳಿನಿಂದಲೂ ಮುಟ್ಟುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಅದಕ್ಕೆ ಯೇಸು, “ನಿಯಮ ಪಂಡಿತರೇ, ನಿಮಗೂ ಕಷ್ಟ, ಏಕೆಂದರೆ ಹೊರಲಾಗದ ಹೊರೆಗಳನ್ನು ಮನುಷ್ಯರ ಮೇಲೆ ಹೊರಿಸುತ್ತೀರಿ, ನೀವಾದರೋ ಈ ಹೊರೆಗಳನ್ನು ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ಮುಟ್ಟುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ತನ್ನಾ ಜೆಜುನ್ “ಖಾಯ್ದೆ ಶಿಕ್ವುತಲ್ಯಾನು ತುಮಿ ಕವ್ಡೆ ಭಯಂಕರ್! ತುಮಿ ವಾವುನ್ ಘೆವ್ನ್ ಜಾವ್ಕ್ ಹೊವ್‍ ನ್ಹಯ್ ತವ್ಡೆ ಮೊಟೆ ವಜ್ಜೆ, ಲೊಕಾಂಚ್ಯಾ ವರ್‍ತಿ ವಾವ್ತ್ಯಾಶಿ. ಖರೆ ತೆ, ವಜ್ಜೆ ವಾವುಕ್ ಮಜತ್ ಕರುಕ್ ಮನುನ್ ಹಾತ್ ಫಿಡೆ ಕರುನ್ ಎಕ್ ಬೊಟ್ ಸೈತ್ ತ್ಯಾ ವಜ್ಜ್ಯಾಕ್ ಲಾವಿನ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:46
7 ತಿಳಿವುಗಳ ಹೋಲಿಕೆ  

“ಧರ್ಮೋಪದೇಶಕರೇ, ನಿಮ್ಮ ಗತಿಯನ್ನು ಏನು ಹೇಳಲಿ! ದೇವರ ಕುರಿತಾಗಿ ಕಲಿಯಲು ಸಾಧನವಾಗಿರುವ ಬೀಗದ ಕೈಯನ್ನು ನೀವು ಬಚ್ಚಿಟ್ಟಿದ್ದೀರಿ. ನೀವೂ ಕಲಿಯುವುದಿಲ್ಲ, ಬೇರೆಯವರಿಗೂ ಕಲಿಯಲು ಬಿಡುವುದಿಲ್ಲ” ಎಂದು ಹೇಳಿದನು.


ಸುನ್ನತಿ ಮಾಡಿಸಿಕೊಂಡಿರುವ ಅವರೇ ಧರ್ಮಶಾಸ್ತ್ರಕ್ಕೆ ವಿಧೇಯರಾಗುತ್ತಿಲ್ಲ. ಆದರೆ ನಿಮಗೂ ಸುನ್ನತಿ ಮಾಡಿಸಿ ಅದರ ಬಗ್ಗೆ ಹೆಚ್ಚಳಪಡಬೇಕೆಂಬುದೇ ಅವರ ಆಸೆ.


ಕೆಟ್ಟ ನಿಯಮವನ್ನು ಬರೆಯುವ ನ್ಯಾಯಶಾಸ್ತ್ರಿಗಳನ್ನು ನೋಡಿರಿ. ಆ ನ್ಯಾಯಶಾಸ್ತ್ರಿಗಳು ಜನರಿಗೆ ಕಷ್ಟವಾಗಿರುವ ನಿಯಮಗಳನ್ನೇ ಮಾಡುತ್ತಾರೆ.


ಧರ್ಮೋಪದೇಶಕನೊಬ್ಬನು ಯೇಸುವಿಗೆ, “ಬೋಧಕನೇ, ನೀನು ಫರಿಸಾಯರ ಕುರಿತಾಗಿ ಈ ಸಂಗತಿಗಳನ್ನು ಹೇಳಿದಾಗ ನಮ್ಮನ್ನು ಸಹ ಖಂಡಿಸಿದಂತಾಯಿತು” ಎಂದು ಹೇಳಿದನು.


“ನನಗೆ ಬೇಕಾಗಿರುವ ವಿಶೇಷ ದಿವಸ ಯಾವುದೆಂದು ನಾನು ಹೇಳುತ್ತೇನೆ. ಅದು ಜನರನ್ನು ಸ್ವತಂತ್ರರನ್ನಾಗಿ ಮಾಡುವ ದಿವಸ, ಜನರಿಂದ ಅವರ ಭಾರವನ್ನು ತೆಗೆದುಹಾಕುವ ದಿವಸ; ತೊಂದರೆಗೀಡಾಗಿರುವ ಜನರನ್ನು ವಿಮುಕ್ತರನ್ನಾಗಿ ಮಾಡುವ ದಿವಸ; ಅವರ ಹೆಗಲಿನಿಂದ ಭಾರದ ಹೊರೆಯನ್ನು ಇಳಿಸುವ ದಿವಸ.


ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವೀಣನಾಗಿದ್ದ ಫರಿಸಾಯನೊಬ್ಬನು ಯೇಸುವನ್ನು ಪರೀಕ್ಷಿಸಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು