51 ಹೇಬೆಲನನ್ನು ಕೊಂದದ್ದಕ್ಕಾಗಿಯೂ ಜಕರೀಯನನ್ನು ಕೊಂದದ್ದಕ್ಕಾಗಿಯೂ ನಿಮಗೆ ದಂಡನೆಯಾಗುವುದು. ಜಕರೀಯನನ್ನು ಯಜ್ಞವೇದಿ ಮತ್ತು ದೇವಾಲಯದ ನಡುವೆ ಕೊಲ್ಲಲಾಯಿತು. ಹೌದು, ಅವರೆಲ್ಲರ ಕೊಲೆಗಳಿಗಾಗಿ ಈಗ ಜೀವಿಸುತ್ತಿರುವ ನಿಮಗೆ ದಂಡನೆ ಆಗುವುದು.
51 ಹೇಬೆಲನ ರಕ್ತ ಮೊದಲುಗೊಂಡು ಬಲಿಪೀಠಕ್ಕೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು. ಹೌದು, ಈ ಸಂತತಿಯವರೇ ಇದಕ್ಕೆಲ್ಲಾ ಉತ್ತರಕೊಡಬೇಕೆಂದು, ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.
“ಆದ್ದರಿಂದ ಭೂಮಿಯ ಮೇಲೆ ಕೊಲ್ಲಲ್ಪಟ್ಟ ಎಲ್ಲಾ ಸತ್ಪುರುಷರ ಕೊಲೆಯ ಅಪರಾಧಕ್ಕೆ ನೀವು ಗುರಿಯಾಗುವಿರಿ. ಸತ್ಪುರುಷನಾದ ಹೇಬೆಲನನ್ನು ಮೊದಲುಗೊಂಡು ಬರಕೀಯನ ಮಗನಾದ ಜಕರೀಯನನ್ನು ಕೊಂದದ್ದಕ್ಕೆ ನೀವು ಅಪರಾಧಿಗಳಾಗುವಿರಿ. ಜಕರೀಯನು ದೇವಾಲಯಕ್ಕೂ ಯಜ್ಞವೇದಿಕೆಗೂ ನಡುವೆ ಕೊಲ್ಲಲ್ಪಟ್ಟನು.
ನೀವು ಕಾಯಿನನಂತಿರಬೇಡಿ. ಅವನು ಕೆಡುಕನಿಗೆ ಸೇರಿದವನಾಗಿದ್ದನು. ಅವನು ತನ್ನ ತಮ್ಮನನ್ನು (ಹೇಬೆಲ) ಕೊಂದುಹಾಕಿದನು. ಅವನು ತನ್ನ ತಮ್ಮನನ್ನು ಕೊಂದದ್ದೇಕೆ? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ಒಳ್ಳೆಯವುಗಳೂ ಆಗಿದ್ದರಿಂದಲೇ.
ಪರ್ಶಿಯಾದಲ್ಲಿ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಬೆರೆಕ್ಯನ ಮಗನಾದ ಜೆಕರ್ಯನಿಗೆ ಯೆಹೋವನಿಂದ ಸಂದೇಶವು ದೊರಕಿತು. ಬೆರೆಕ್ಯನು ಪ್ರವಾದಿಯಾದ ಇದ್ದೋವಿನ ಮಗನು. ಇದು ಆತನ ಸಂದೇಶ:
ಆದ್ದರಿಂದ ನೀನು ಅವರಿಗೆ ಹೀಗೆ ಹೇಳಬೇಕು: ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸದ ಜನಾಂಗವಿದು. ಈ ಜನರು ದೇವರ ಧರ್ಮೋಪದೇಶವನ್ನು ಕೇಳಲಿಲ್ಲ. ಈ ಜನರಿಗೆ ನಿಜವಾದ ಧರ್ಮೋಪದೇಶ ಗೊತ್ತಿಲ್ಲ.