Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:8 - ಪರಿಶುದ್ದ ಬೈಬಲ್‌

8 ಕೇವಲ ಸ್ನೇಹವೊಂದೇ ಅವನನ್ನು ಏಳಿಸಿ ರೊಟ್ಟಿ ಕೊಡುವಂತೆ ಮಾಡಲಾರದೆಂದು ನಾನು ನಿಮಗೆ ಹೇಳುತ್ತೇನೆ. ಆದರೆ ಅವನು ಎಡಬಿಡದೆ ಕೇಳುತ್ತಲೇ ಇದ್ದರೆ, ಅವನು ಎದ್ದು ತನ್ನ ಸ್ನೇಹಿತನಿಗೆ ಬೇಕಾಗಿರುವ ರೊಟ್ಟಿಯನ್ನು ಖಂಡಿತವಾಗಿ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೂ, ಸ್ನೇಹದ ನಿಮಿತ್ತವಾಗಿ ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟು ರೊಟ್ಟಿಗಳನ್ನು ಕೊಡುತಾನೆಂಬುದು ನಿಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೂ, ತನ್ನ ಗೆಳೆಯ ಇವನು ಎಂದು ಎದ್ದುಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದುಬಂದು ಕೇಳಿದಷ್ಟನ್ನು ಕೊಡುತ್ತಾನೆಂಬುದು ನಿಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಸ್ನೇಹದ ನಿವಿುತ್ತವಾಗಿ ಎದ್ದು ಕೊಡದೆ ಇದ್ದರೂ ಅವನ ಕಾಟದ ದೆಸೆಯಿಂದ ಎದ್ದು ಬಂದು ಕೇಳಿದಷ್ಟು ಅವನಿಗೆ ಕೊಡುವನೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ನಾನು ನಿಮಗೆ ಹೇಳುವುದೇನೆಂದರೆ, ಅವನು ಸ್ನೇಹಿತನಾಗಿರುವುದರಿಂದ ಎದ್ದು ಇವನಿಗೆ ಕೊಡದೆಹೋದರೂ ಮೇಲಿಂದ ಮೇಲೆ ನಾಚಿಕೆಪಡದೆ ಬೇಡುವುದರಿಂದ ಎದ್ದು ಇವನಿಗೆ ಬೇಕಾದಷ್ಟು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಬರೆ ತರ್, ಮಾನಾ ಕಾಯ್ ಹೊತಾ? ಖರೆ, ಮಿಯಾ ತುಮ್ಕಾ ಸಾಂಗ್ತಾ ತೆಕಾ ಉಟುಕ್ ಹೊಯ್ನಸ್ಲ್ಯಾರ್‍ಬಿ ಉಟುನ್ ತೊ ತುಮ್ಕಾ ಕಾಯ್ ಪಾಜೆ ತೆ ದಿತಾ. ಕಶ್ಯಾಕ್ ಮಟ್ಲ್ಯಾರ್, ಲಜಿನಸ್ತಾನಾ ತುಮಿ ಇಚಾರ್ಲ್ಯಾಶಿ, ಮನುನ್ ತೊ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:8
10 ತಿಳಿವುಗಳ ಹೋಲಿಕೆ  

ಆ ಪುರುಷನು ಯಾಕೋಬನಿಗೆ, “ನನ್ನನ್ನು ಬಿಡು, ಸೂರ್ಯೋದಯವಾಗುತ್ತಿದೆ” ಎಂದು ಹೇಳಿದನು. ಆದರೆ ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನು ಬಿಡುವುದಿಲ್ಲ” ಎಂದು ಹೇಳಿದನು.


ಎಪಫ್ರನು ಸಹ ವಂದನೆ ತಿಳಿಸಿದ್ದಾನೆ. ಅವನು ಯೇಸು ಕ್ರಿಸ್ತನ ಸೇವಕನು. ಅವನು ನಿಮ್ಮವರಲ್ಲಿ ಒಬ್ಬನಾಗಿದ್ದಾನೆ. ಅವನು ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತಾನೆ. ನೀವು ಆತ್ಮಿಕತೆಯಲ್ಲಿ ಬೆಳೆಯುತ್ತಾ ಸಂಪೂರ್ಣತೆಯನ್ನು ಮುಟ್ಟಬೇಕೆಂತಲೂ ದೇವರ ಚಿತ್ತವನ್ನು ಪೂರ್ಣವಾಗಿ ತಿಳಿದುಕೊಂಡು ದೃಢವಾಗಿರಬೇಕೆಂತಲೂ ಪ್ರಾರ್ಥಿಸುತ್ತಾನೆ.


ಸಹೋದರ ಸಹೋದರಿಯರೇ, ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸುವುದರ ಮೂಲಕ ನನ್ನ ಸೇವೆಗೆ ಸಹಾಯ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಮ್ಮ ಪ್ರಭುವಾದ ಯೇಸುವಿನ ನಿಮಿತ್ತವಾಗಿಯೂ ಪವಿತ್ರಾತ್ಮನು ನಮಗೆ ಕೊಡುವ ಪ್ರೀತಿಯ ನಿಮಿತ್ತವಾಗಿಯೂ ನೀವು ಪ್ರಾರ್ಥಿಸಿರಿ.


ನಿಮಗೆ ಸಹಾಯ ಮಾಡಲು ನಾನು ಬಹಳವಾಗಿ ಮಾಡುತ್ತಿರುವ ಪ್ರಯತ್ನ ನಿಮಗೆ ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ ಇದಲ್ಲದೆ ಲವೊದಿಕೀಯದಲ್ಲಿರುವವರಿಗೆ ಮತ್ತು ನನ್ನನ್ನು ಎಂದೂ ನೋಡಿಲ್ಲದವರಿಗೆ ಸಹ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದೇನೆ.


ನನ್ನಿಂದ ಅದನ್ನು ತೆಗೆದುಹಾಕಬೇಕೆಂದು ನಾನು ಮೂರು ಸಲ ಪ್ರಭುವನ್ನು ಬೇಡಿಕೊಂಡೆನು.


ಮನೆಯೊಳಗಿರುವ ಸ್ನೇಹಿತನು, ‘ಹೊರಟುಹೋಗು! ನನಗೆ ತೊಂದರೆ ಕೊಡಬೇಡ! ಬಾಗಿಲು ಮುಚ್ಚಿದೆ! ನಾನು ಮತ್ತು ನನ್ನ ಮಕ್ಕಳು ಮಲಗಿದ್ದೇವೆ. ಈಗ ಎದ್ದು ನಿನಗೆ ರೊಟ್ಟಿ ಕೊಡಲಾರೆ’ ಎಂದು ಉತ್ತರಕೊಡುತ್ತಾನೆ.


ಸಂಸೋನನ ಹೆಂಡತಿಯು ಔತಣದ ಏಳು ದಿನಗಳೆಲ್ಲಾ ಅಳುತ್ತಿದ್ದಳು. ಆದ್ದರಿಂದ ಏಳನೆಯ ದಿನ ಅವನು ಒಗಟಿನ ಅರ್ಥವನ್ನು ಅವಳಿಗೆ ಹೇಳಿದನು. ಅವಳು ಪೀಡಿಸಿದ್ದರಿಂದ ಅವನು ಹೇಳಿದನು. ಆಗ ಅವಳು ತನ್ನ ಜನರಲ್ಲಿಗೆ ಹೋಗಿ ಆ ಒಗಟಿನ ಅರ್ಥವನ್ನು ತಿಳಿಸಿದಳು.


ಹನ್ನಳು ಬಹಳ ಹೊತ್ತಿನವರೆಗೆ ಯೆಹೋವನಿಗೆ ಪ್ರಾರ್ಥನೆ ಮಾಡಿದಳು. ಅವಳು ಪ್ರಾರ್ಥನೆ ಮಾಡುತ್ತಿದ್ದಾಗ ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು