ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.
ಮೊದಲು, ನಾನು ಕ್ರಿಸ್ತನ ವಿರುದ್ಧ ಮಾತನಾಡಿದ್ದೆನು. ಆತನನ್ನು ಹಿಂಸಿಸಿದ್ದೆನು. ಆತನಿಗೆ ನೋವಾಗುವಂಥ ಕಾರ್ಯಗಳನ್ನು ಮಾಡಿದ್ದೆನು. ಆದರೆ ನಾನೇನು ಮಾಡುತ್ತಿದ್ದೇನೆಂಬುದು ನನಗೆ ತಿಳಿದಿರಲಿಲ್ಲವಾದ್ದರಿಂದ ದೇವರು ನನಗೆ ಕರುಣೆ ತೋರಿದನು. ನಂಬದಿರುವಾಗ ನಾನು ಅವುಗಳನ್ನು ಮಾಡಿದೆನು.
ಯೇಸು, “ತಂದೆಯೇ, ಇವರನ್ನು ಕ್ಷಮಿಸು. ಇವರಿಗೆ ತಾವು ಮಾಡುತ್ತಿರುವುದು ತಿಳಿದಿಲ್ಲ” ಎಂದು ಪ್ರಾರ್ಥಿಸಿದನು. ಸೈನಿಕರು ಚೀಟುಹಾಕಿ ಯೇಸುವಿನ ಬಟ್ಟೆಗಳು ಯಾರಿಗೆ ಸೇರಬೇಕೆಂದು ತೀರ್ಮಾನಿಸಿದರು.