Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:11 - ಪರಿಶುದ್ದ ಬೈಬಲ್‌

11 “ಜನರು ನಿಮ್ಮನ್ನು ಸಭಾಮಂದಿರಗಳಿಗೂ ನ್ಯಾಯಾಧಿಪತಿಗಳ ಮತ್ತು ದೇಶಾಧಿಕಾರಿಗಳ ಬಳಿಗೂ ಎಳೆದೊಯ್ಯುವಾಗ ಅವರಿಗೆ ಏನು ಹೇಳಬೇಕೆಂದು ಚಿಂತೆ ಮಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಪ್ರಾರ್ಥನಾಮಂದಿರಗಳಿಗೆ ಮತ್ತು ನ್ಯಾಯಾಧಿಪತಿಗಳ ಹಾಗೂ ದೇಶಾಧಿಕಾರಿಗಳ ಮುಂದೆ ನಿಮ್ಮನ್ನು ಎಳೆದೊಯ್ಯುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ನಿಮ್ಮನ್ನು ಸಭಾಮಂದಿರಗಳ ಅಧ್ಯಕ್ಷರ ಮುಂದಕ್ಕೂ ಅಧಿಕಾರಿಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ಹಿಡುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರಕೊಡಬೇಕು? ಏನು ಹೇಳಬೇಕು ಎಂದು ಚಿಂತೆಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಜನರು ನಿಮ್ಮನ್ನು ಸಭಾಮಂದಿರಗಳಿಗೂ ಆಳುವವರ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವುದನ್ನು ಕುರಿತು ಉತ್ತರಕೊಡಬೇಕೆಂದು, ಇಲ್ಲವೆ ಏನು ಹೇಳಬೇಕೆಂದು ಚಿಂತಿಸಬೇಡಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆನಿ ತುಮ್ಚಿ ಇಚಾರ್‍ನಿ ಕರುಕ್ ಮನುನ್, ಸಿನಾಗೊಗಾತ್ನಿ, ಅನಿ ಅದಿಕಾರ್‍ಯಾಂಚ್ಯಾ ಇದ್ರಾಕ್ ಹಾನ್ತಾನಾ, ತುಮಿ ,ತುಮ್ಕಾಚ್ ಕಶೆ ಕರುನ್ ರಾಕುನ್ ಘೆತಲೆ, ಅನಿ ಕಾಯ್ ಬೊಲ್ತಲೆ ಮನುನ್ಬಿ ಯವ್ಜುನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:11
14 ತಿಳಿವುಗಳ ಹೋಲಿಕೆ  

ಯೇಸು ತನ್ನ ಶಿಷ್ಯರಿಗೆ ಹೀಗೆ ಹೇಳಿದನು: “ಈ ಕಾರಣದಿಂದ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಪ್ರಾಣಧಾರಣೆಗೆ ಬೇಕಾದ ಊಟಕ್ಕಾಗಿ ಮತ್ತು ತೊಟ್ಟುಕೊಳ್ಳಲು ಬೇಕಾದ ಬಟ್ಟೆಗಾಗಿ ಚಿಂತಿಸಬೇಡಿರಿ.


ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಉಪದೇಶಕರನ್ನೂ ಕಳುಹಿಸುತ್ತೇನೆ. ನೀವು ಅವರಲ್ಲಿ ಕೆಲವರನ್ನು ಕೊಲ್ಲುವಿರಿ; ಇನ್ನು ಕೆಲವರನ್ನು ಶಿಲುಬೆಗೇರಿಸುವಿರಿ; ಇತರ ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಹೊಡೆಯುವಿರಿ; ನೀವು ಅವರನ್ನು ಊರಿಂದ ಊರಿಗೆ ಅಟ್ಟಿಬಿಡುವಿರಿ.


ಈಗ ಹೋಗು. ನೀನು ಮಾತಾಡುವಾಗ ನಾನೇ ನಿನ್ನೊಂದಿಗಿರುವೆನು. ನೀನು ಹೇಳಬೇಕಾದ ಮಾತುಗಳನ್ನು ನಾನು ನಿನಗೆ ಕೊಡುವೆನು” ಎಂದು ಹೇಳಿದನು.


“ಆದ್ದರಿಂದ ನಿಮ್ಮ ಪ್ರಾಣಧಾರಣೆಗೆ ಬೇಕಾದ ಆಹಾರಕ್ಕಾಗಲಿ ದೇಹಕ್ಕೆ ಬೇಕಾದ ಬಟ್ಟೆಗಾಗಲಿ ನೀವು ಚಿಂತಿಸಬಾರದು. ಪ್ರಾಣವು ಆಹಾರಕ್ಕಿಂತಲೂ ದೇಹವು ಬಟ್ಟೆಗಿಂತಲೂ ಬಹಳ ಮುಖ್ಯವಾದದ್ದೆಂದು ನಾನು ನಿಮಗೆ ಹೇಳುತ್ತೇನೆ.


ನೀವು ಚಿಂತಿಸುವುದರಿಂದ ನಿಮ್ಮ ಆಯುಷ್ಯು ಹೆಚ್ಚೇನೂ ಆಗುವುದಿಲ್ಲ.


“ಬಟ್ಟೆಗಾಗಿ ಚಿಂತಿಸುವುದೇಕೆ? ಹೊಲದಲ್ಲಿರುವ ಹೂವುಗಳನ್ನು ನೋಡಿ. ಅವು ಬೆಳೆಯುವ ಬಗೆಯನ್ನು ಗಮನಿಸಿ. ಅವು ದುಡಿಯುವುದಿಲ್ಲ ಅಥವಾ ತಮಗಾಗಿ ಬಟ್ಟೆಗಳನ್ನು ನೇಯುವುದಿಲ್ಲ.


“‘ನಾವು ಏನು ತಿನ್ನಬೇಕು? ಏನು ಕುಡಿಯಬೇಕು? ಏನನ್ನು ಧರಿಸಬೇಕು?’ ಎಂದು ಚಿಂತಿಸಬೇಡಿ.


ಆದ್ದರಿಂದ ನಾಳೆಗಾಗಿ ಚಿಂತಿಸಬೇಡಿ. ಪ್ರತಿದಿನವು ತನ್ನದೇ ಆದ ಎಷ್ಟೋ ಕಷ್ಟಗಳನ್ನು ಹೊಂದಿರುತ್ತದೆ. ನಾಳೆಯು ಸಹ ತನ್ನದೇ ಆದ ಚಿಂತೆಗಳನ್ನು ಹೊಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು