Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:15 - ಪರಿಶುದ್ದ ಬೈಬಲ್‌

15 ಬಳಿಕ ಯೇಸು ನೆರೆದಿದ್ದ ಜನರಿಗೆ, “ಎಚ್ಚರಿಕೆ, ಯಾವ ವಿಧವಾದ ಸ್ವಾರ್ಥಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಒಬ್ಬನಿಗೆ ಎಷ್ಟೇ ಆಸ್ತಿಯಿದ್ದರೂ ಅದರಿಂದ ಅವನು ಜೀವವನ್ನು ಪಡೆದುಕೊಳ್ಳಲಾರನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಜನರಿಗೆ - ಎಲ್ಲಾ ಲೋಭಕ್ಕೂ ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವದಿಲ್ಲ ಎಂದು ಹೇಳಿ ಒಂದು ಸಾಮ್ಯವನ್ನು ಹೇಳಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅನಂತರ ಯೇಸು ಜನರಿಗೆ, “ಎಚ್ಚರಿಕೆ! ನೀವು ಎಲ್ಲಾ ಲೋಭದಿಂದ ನಿಮ್ಮನ್ನು ಕಾಪಾಡಿಕೊಳ್ಳಿರಿ; ಏಕೆಂದರೆ ಜೀವನವು ಸಮೃದ್ಧಿಯಾದ ಆಸ್ತಿಗೆ ಆಧಾರವಾದದ್ದಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅನಿ ಥೈ ಹೊತ್ತ್ಯಾ ಸಗ್ಳ್ಯಾಕ್ನಿ ತೊ “ಸಗ್ಳ್ಯಾ ರಿತಿಚ್ಯಾ ಹವ್ರೆಪಾನಾನಿತ್ನಾ ತುಮ್ಕಾಚ್ ತುಮಿ ರಾಕುನ್ ಘೆವಾ, ಕಶ್ಯಾಕ್ ಮಟ್ಲ್ಯಾರ್, ಎಕ್ ಮಾನ್ಸಾನ್ ಜಿವ್ ಕಮ್ವುನ್ ಘೆತಲೆ, ತೆನಿ ಕಾಯ್ ಕಮ್ವುಲ್ಯಾನಾಯ್, ಅನಿ ತೆಚಿ ಕವ್ಡಿ ಸಾವ್ಕಾರ್ಕಿ ಹಾಯ್, ತೆಚೆ ವರ್‍ತಿ ಹೊಂದುನ್ ನಾ”, ಮನುನ್ ಸಾಂಗುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:15
34 ತಿಳಿವುಗಳ ಹೋಲಿಕೆ  

ಹಣದ ಮೇಲೆ ನಿಮಗಿರುವ ವ್ಯಾಮೋಹವನ್ನು ದೂರತಳ್ಳಿರಿ. ನಿಮ್ಮಲ್ಲಿರುವ ವಸ್ತುಗಳಲ್ಲಿ ತೃಪ್ತಿಯಿಂದಿರಿ. ದೇವರು ಹೀಗೆ ಹೇಳಿದ್ದಾನೆ: “ನಾನು ನಿಮ್ಮನ್ನು ಎಂದೆಂದಿಗೂ ಕೈಬಿಡುವುದಿಲ್ಲ. ನಾನು ನಿಮ್ಮನ್ನು ಎಂದೆಂದಿಗೂ ತೊರೆದುಬಿಡುವುದಿಲ್ಲ.”


ಬಹಳ ಐಶ್ವರ್ಯವನ್ನು ಹೊಂದಿದ್ದು ಸಮಾಧಾನವಿಲ್ಲದೆ ಇರುವುದಕ್ಕಿಂತ ಸ್ವಲ್ಪ ಐಶ್ವರ್ಯವನ್ನು ಹೊಂದಿದ್ದು ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಮೇಲು.


ಜ್ಞಾನ ಸಂಪಾದನೆಯು ಬಂಗಾರ ಸಂಪಾದನೆಗಿಂತಲೂ ಶ್ರೇಷ್ಠ. ವಿವೇಕ ಸಂಪಾದನೆಯು ಬೆಳ್ಳಿ ಸಂಪಾದನೆಗಿಂತಲೂ ಉತ್ತಮ.


ಆ ಕಾಲದಲ್ಲಿ ಜನರು ಸ್ವಾರ್ಥಿಗಳಾಗಿರುತ್ತಾರೆ, ಹಣದಾಸೆ ಉಳ್ಳವರಾಗಿರುತ್ತಾರೆ; ಬಡಾಯಿಕೊಚ್ಚುವವರಾಗಿರುತ್ತಾರೆ; ಗರ್ವಿಷ್ಠರಾಗಿರುತ್ತಾರೆ; ಚಾಡಿಕೋರರಾಗಿರುತ್ತಾರೆ; ತಂದೆತಾಯಿಗಳಿಗೆ ಅವಿಧೇಯರಾಗಿರುತ್ತಾರೆ; ಕೃತಜ್ಞತೆಯಿಲ್ಲದವರಾಗಿರುತ್ತಾರೆ; ಅಪವಿತ್ರರಾಗಿರುತ್ತಾರೆ;


ಫರಿಸಾಯರು ಈ ಎಲ್ಲಾ ಸಂಗತಿಗಳನ್ನು ಕೇಳುತ್ತಿದ್ದರು. ಫರಿಸಾಯರೆಲ್ಲರು ಹಣದಾಸೆ ಉಳ್ಳವರಾಗಿದ್ದರಿಂದ ಅವರು ಯೇಸುವನ್ನು ಟೀಕಿಸಿದರು.


ಆದ್ದರಿಂದ ದುಷ್ಕೃತ್ಯಗಳಾದ ಲೈಂಗಿಕ ಪಾಪ, ದುರಾಚಾರ, ಕಾಮಾಭಿಲಾಷೆ, ದುರಾಶೆ ಮತ್ತು ಸ್ವಾರ್ಥತೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಸ್ವಾರ್ಥವು ವಿಗ್ರಹಾರಾಧನೆಗೆ ಸಮವಾಗಿದೆ.


“ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಲೋಕದ ಚಿಂತೆಗಳಿಗೂ ಐಶ್ವರ್ಯಗಳಿಗೂ ಭೋಗಗಳಿಗೂ ಅವರು ಅವಕಾಶಕೊಡುವುದರಿಂದ ಅವರು ಬೆಳೆಯಲಾರರು; ಎಂದಿಗೂ ಒಳ್ಳೆಯ ಫಲವನ್ನು ಕೊಡಲಾರರು.


ಅನ್ಯಾಯದಿಂದ ಸಂಪಾದಿಸಿದ್ದರಲ್ಲಿ ನಂಬಿಕೆ ಇಡಬೇಡಿ. ಕದ್ದವಸ್ತುಗಳಲ್ಲಿ ಜಂಬಪಡಬೇಡಿ. ಐಶ್ವರ್ಯವು ಅಧಿಕವಾಗುತ್ತಿದ್ದರೂ ಅದರಲ್ಲಿ ಮನಸ್ಸಿಡಬೇಡಿ.


ದುಷ್ಟನ ಶ್ರೀಮಂತಿಕೆಗಿಂತಲೂ ನೀತಿವಂತನ ಬಡತನವೇ ಮೇಲು.


ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.


ವ್ಯಭಿಚಾರ, ಹಣದಾಶೆ, ಕೆಡುಕುತನ, ಭಂಡತನ, ಅಸೂಯೆ, ಚಾಡಿಕೋರತನ, ಅಹಂಕಾರ ಮತ್ತು ಬುದ್ಧಿಗೇಡಿತನ.


“ಹೌದು, ಕೆಟ್ಟದ್ದನ್ನು ಮಾಡಿ ಧನಿಕನಾದವನಿಗೆ ಬಹಳ ಕೇಡಾಗುವುದು. ಆ ಮನುಷ್ಯನು ಒಂದು ಸುರಕ್ಷಿತವಾದ ಸ್ಥಳದಲ್ಲಿ ವಾಸಿಸಲು ಇದನ್ನೆಲ್ಲಾ ಮಾಡುತ್ತಾನೆ. ಹಾಗೆ ಮಾಡುವದರಿಂದ ಬೇರೆ ಜನರು ಅವನಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲವೆಂದು ಅವನು ತಿಳಿಯುತ್ತಾನೆ. ಆದರೆ ಕೆಟ್ಟ ಸಂಗತಿಗಳು ಅವನಿಗೆ ಸಂಭವಿಸುವವು.


ಕೆಡುಕರು ತಮ್ಮ ಇಷ್ಟವಾದ ವಸ್ತುಗಳ ಬಗ್ಗೆ ಕೊಚ್ಚಿಕೊಳ್ಳುವರು. ದುರಾಶೆಯುಳ್ಳ ಅವರು ದೇವರನ್ನು ಶಪಿಸುತ್ತಾ ಆತನ ಮೇಲೆ ತಮಗಿರುವ ದ್ವೇಷವನ್ನು ತೋರ್ಪಡಿಸಿಕೊಳ್ಳುವರು.


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ! ಎಂಬಂತೆ ಮನುಷ್ಯನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ತನ್ನ ಸರ್ವಸ್ವವನ್ನೂ ಕೊಡುವನು.


ನಾವು ಜೆರಿಕೊ ನಗರವನ್ನು ಮತ್ತು ಅದರಲ್ಲಿದ್ದ ಎಲ್ಲ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಕೊಳ್ಳೆ ಹೊಡೆಯುತ್ತಿದ್ದಾಗ, ಬಾಬಿಲೋನಿನ ಒಂದು ಸುಂದರವಾದ ನಿಲುವಂಗಿಯನ್ನೂ ಸುಮಾರು ಐದು ಪೌಂಡಿನಷ್ಟು ಬೆಳ್ಳಿಯನ್ನೂ ಒಂದು ಪೌಂಡಿಗಿಂತಲೂ ಹೆಚ್ಚು ಬಂಗಾರವನ್ನೂ ಕಂಡೆನು. ಈ ವಸ್ತುಗಳನ್ನು ನನಗಾಗಿ ಇಟ್ಟುಕೊಳ್ಳಬೇಕೆಂದು ತುಂಬ ಆಶೆಯಾಯಿತು. ಅದಕ್ಕಾಗಿ ನಾನು ಅವುಗಳನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದಲ್ಲಿ ಹುಗಿದಿಟ್ಟಿದ್ದೇನೆ. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇದೆ” ಎಂದು ಒಪ್ಪಿಕೊಂಡನು.


“ಎಚ್ಚರಿಕೆ! ತಿನ್ನುವುದರಲ್ಲಿಯೂ ಕುಡಿದು ಮತ್ತರಾಗುವುದರಲ್ಲಿಯೂ ಪ್ರಾಪಂಚಿಕ ಚಿಂತೆಗಳಲ್ಲಿಯೂ ಮಗ್ನರಾಗಿರಬೇಡಿರಿ. ಇಲ್ಲವಾದರೆ, ನಿಮ್ಮ ಹೃದಯಗಳು ಭಾರವಾಗಿರುವಾಗಲೇ ಅಂತ್ಯವು ಫಕ್ಕನೆ ಬಂದೀತು.


ಅವರಿಗೆ ಹೊಲಗದ್ದೆಗಳು ಬೇಕು, ಅದನ್ನು ಅವರು ತೆಗೆದುಕೊಳ್ಳುವರು. ಅವರಿಗೆ ಮನೆಮಠಗಳು ಬೇಕು, ಅದನ್ನು ಅವರು ತೆಗೆದುಕೊಳ್ಳುವರು. ಒಬ್ಬನಿಗೆ ಮೋಸಮಾಡಿ ಅವನ ಮನೆಯನ್ನು ಕಿತ್ತುಕೊಳ್ಳುವರು. ಇನ್ನೊಬ್ಬನಿಗೆ ಮೋಸಮಾಡಿ ಅವನ ಹೊಲಗದ್ದೆಗಳನ್ನು ಕಿತ್ತುಕೊಳ್ಳುವರು.


“ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಲಾಭಕ್ಕಾಗಿ ಆಸೆಪಡುತ್ತಾರೆ. ಪ್ರವಾದಿಗಳು ಮತ್ತು ಯಾಜಕರು ಸಹ ಮೋಸಗಾರರಾಗಿದ್ದಾರೆ.


ವಿವೇಕವಿಲ್ಲದ ಅಧಿಪತಿ ತನ್ನ ಅಧೀನದಲ್ಲಿರುವವರಿಗೆ ಕೇಡುಮಾಡುವನು. ಅನ್ಯಾಯದ ಹಣವನ್ನು ತೆಗೆದುಕೊಳ್ಳದ ಅಧಿಪತಿ ಬಹುಕಾಲ ಆಳುವನು.


ಅವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರಾಗಿದ್ದಾರೆ. ಅವರು ದುರ್ಬಲರನ್ನು ಪಾಪವೆಂಬ ಉರುಲಿನಲ್ಲಿ ಬೀಳಿಸುತ್ತಾರೆ. ಅವರು ತಮ್ಮ ಹೃದಯಗಳಿಗೆ ಸ್ವಾರ್ಥವನ್ನೇ ಕಲಿಸಿದ್ದಾರೆ. ಅವರು ಶಾಪಗ್ರಸ್ತರಾಗಿದ್ದಾರೆ.


ಎಂದು ಹೇಳುತ್ತಾ ನಿನ್ನ ಬಳಿಗೆ ನನ್ನ ಜನರಂತೆ ಬರುವರು. ನನ್ನ ಜನರಂತೆ ನಿನ್ನ ಎದುರಿನಲ್ಲಿ ಬಂದು ಕುಳಿತುಕೊಳ್ಳುವರು. ನಿನ್ನ ಮಾತುಗಳನ್ನು ಅವರು ಕೇಳಿದರೂ ಅವುಗಳಿಗೆ ವಿಧೇಯರಾಗದೆ ಇಷ್ಟಪಡುವದನ್ನೆ ಮಾಡುವರು. ಇತರರಿಗೆ ಮೋಸ ಮಾಡಿ ಹಣಗಳಿಸುವದೇ ಅವರ ಕೆಲಸ.


ಬಳಿಕ ಯೇಸು ಈ ಸಾಮ್ಯವನ್ನು ಹೇಳಿದನು: “ಒಬ್ಬ ಐಶ್ವರ್ಯವಂತನಿದ್ದನು. ಅವನಿಗೆ ಬಹಳ ಜಮೀನಿತ್ತು. ಒಮ್ಮೆ ಅವನ ಜಮೀನಿನಲ್ಲಿ ಸಮೃದ್ಧಿಯಾದ ಬೆಳೆ ಆಯಿತು.


ಆದ್ದರಿಂದ ಶಿಮ್ಮಿಯು ತಡಿಯನ್ನು ತನ್ನ ಕತ್ತೆಯ ಮೇಲೆ ಹಾಕಿಕೊಂಡು, ಗತ್‌ನ ರಾಜನಾದ ಆಕೀಷನ ಬಳಿಗೆ ಹೋದನು. ಅವನು ತನ್ನ ಗುಲಾಮರನ್ನು ಅಲ್ಲಿ ಕಂಡುಹಿಡಿದು ತನ್ನ ಮನೆಗೆ ಮತ್ತೆ ಕರೆದುಕೊಂಡು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು