Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:18 - ಪರಿಶುದ್ದ ಬೈಬಲ್‌

18 “ಬಳಿಕ ಅವನು, ‘ನಾನೇನು ಮಾಡಬೇಕೆಂಬುದು ನನಗೆ ತಿಳಿದದೆ. ನನ್ನ ಕಣಜಗಳನ್ನು ಕೆಡವಿ, ದೊಡ್ಡ ಕಣಜಗಳನ್ನು ಕಟ್ಟುವೆನು! ನನ್ನ ಹೊಸ ಕಣಜಗಳಲ್ಲಿ ಗೋಧಿಯನ್ನೂ ಒಳ್ಳೆಯ ಪದಾರ್ಥಗಳನ್ನೂ ತುಂಬಿಸಿಡುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ‘ಒಂದು ಕೆಲಸ ಮಾಡುತ್ತೇನೆ. ನನ್ನ ಕಣಜಗಳನ್ನು ಕೆಡವಿ ಅವುಗಳಿಗಿಂತ ದೊಡ್ಡ ಕಣಜಗಳನ್ನು ಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನು ತುಂಬಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ‘ಹೌದು, ಹೀಗೆ ಮಾಡುತ್ತೇನೆ: ಇರುವ ಕಣಜಗಳನ್ನು ಕಿತ್ತುಹಾಕಿಸಿ, ಇನ್ನೂ ದೊಡ್ಡವುಗಳನ್ನು ಕಟ್ಟಿಸುತ್ತೇನೆ. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಸಾಮಗ್ರಿಗಳನ್ನೂ ತುಂಬಿಸಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನ ಕಣಜಗಳನ್ನು ಕೀಳಿಸಿ ಅವುಗಳಿಗಿಂತ ದೊಡ್ಡ ಕಣಜಗಳನ್ನು ಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನೂ ತುಂಬಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ನಾನು ಹೀಗೆ ಮಾಡುತ್ತೇನೆ, ‘ನನ್ನ ಕಣಜಗಳನ್ನು ಮುರಿದು ಹಾಕಿಸಿ ಇನ್ನೂ ದೊಡ್ಡದಾಗಿ ಕಟ್ಟಿಸುತ್ತೇನೆ, ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನೂ ಕೂಡಿಸಿಟ್ಟುಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಾನಾ ತೊ, “ಮಿಯಾ ಅಶೆ ಕರ್‍ತಾ;” ಅತ್ತಾ ಹೊತ್ತಿ ಮಾಜಿ ಗುಡಾನಾ ಮಿಯಾ ಮೊಡುನ್ ಮೊಟಿ ಕರುನ್ ಭಾಂದ್ತಾ, ತನ್ನಾ ಮಿಯಾ ಮಾಜೆ ಸಗ್ಳೆ ಪಿಕ್, ಅನಿ ಕಾಯ್ ಹಾಯ್, ತೆ, ತ್ಯಾತುರ್‍ನಿ ಭರುನ್ ಥವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:18
11 ತಿಳಿವುಗಳ ಹೋಲಿಕೆ  

ಇಂಥ “ಜ್ಞಾನ”ವು ದೇವರಿಂದ ಬರದೆ ಲೋಕದಿಂದ ಬರುತ್ತದೆ. ಅದು ಆತ್ಮ ಸಂಬಂಧವಾದುದಲ್ಲ. ಅದು ದೆವ್ವಗಳಿಂದ ಬಂದುದು.


ಆದ್ದರಿಂದ, ನೀವು ಹೀಗೆ ಹೇಳಬೇಕು, “ಪ್ರಭುವು ಇಚ್ಛೆಪಟ್ಟರೆ, ನಾವು ಜೀವಿಸಿರುತ್ತೇವೆ. ಇಂಥಿಂಥದ್ದನ್ನು ಮಾಡುತ್ತೇವೆ.”


ಪ್ರಭುವು ಈ ಸಾಮ್ಯವನ್ನು ಹೇಳಿದ ಮೇಲೆ ತನ್ನ ಶಿಷ್ಯರಿಗೆ, “ಕೇಳಿರಿ! ಆ ಅನ್ಯಾಯಗಾರನಾದ ನ್ಯಾಯಾಧೀಶನು ಹೇಳಿದ್ದರಲ್ಲಿ ಅರ್ಥವಿದೆ.


“ತನಗೋಸ್ಕರ ಮಾತ್ರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳುವವನ ಗತಿ ಇದೇ. ದೇವರ ದೃಷ್ಟಿಯಲ್ಲಿ ಅವನು ಐಶ್ವರ್ಯವಂತನಲ್ಲ.”


ಆದರೆ ನ್ಯಾಯಾಧೀಶನು ಆ ಸ್ತ್ರೀಗೆ ಸಹಾಯಮಾಡಲು ಬಯಸಲಿಲ್ಲ. ಬಹಳ ಸಮಯದ ನಂತರ ಆ ನ್ಯಾಯಾಧೀಶನು ತನ್ನೊಳಗೆ, ‘ನನಗಂತೂ ದೇವರಲ್ಲಿ ಭಯಭಕ್ತಿಯಿಲ್ಲ. ಜನರು ನನ್ನ ಬಗ್ಗೆ ಏನು ಯೋಚಿಸುತ್ತಾರೆಂಬುದರ ಬಗ್ಗೆಯೂ ಗಮನವಿಲ್ಲ.


ಯೆಹೋವನೇ, ಈ ಲೋಕಕ್ಕಾಗಿಯೇ ಜೀವಿಸುವ ಜನರಿಂದ ನನ್ನನ್ನು ತಪ್ಪಿಸಿ ಕಾಪಾಡು. ನಿನ್ನ ಸಹಾಯಕ್ಕಾಗಿ ಮೊರೆಯಿಡುವ ಅನೇಕರು ಕೊರತೆಯಲ್ಲಿದ್ದಾರೆ. ಅವರಿಗೆ ಆಹಾರವನ್ನು ಹೇರಳವಾಗಿ ದಯಪಾಲಿಸು. ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಬೇಕಾದದ್ದನ್ನೆಲ್ಲಾ ಒದಗಿಸಿಕೊಡು.


ಪಕ್ಷಿಗಳ ಕಡೆಗೆ ನೋಡಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ ಇಲ್ಲವೇ ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ. ಆದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳಿಗೆ ಆಹಾರವನ್ನು ನೀಡುತ್ತಾನೆ. ನೀವು ಆ ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರೆಂಬುದು ನಿಮಗೆ ಗೊತ್ತಿದೆ.


ಆಗ ಐಶ್ವರ್ಯವಂತನು, ‘ನಾನೇನು ಮಾಡಲಿ? ನನ್ನ ಬೆಳೆಯನ್ನೆಲ್ಲಾ ತುಂಬಿಡಲು ನನಗೆ ಸ್ಥಳವಿಲ್ಲವಲ್ಲಾ!’ ಎಂದುಕೊಂಡನು.


ಆ ಬಳಿಕ ನಾನು ‘ನನಗೆ ಅನೇಕ ವರ್ಷಗಳವರೆಗೆ ಬೇಕಾದಷ್ಟು ಸರಕನ್ನು ಕೂಡಿಸಿಟ್ಟಿದ್ದೇನೆ. ವಿಶ್ರಮಿಸಿಕೊ, ತಿನ್ನು, ಕುಡಿ, ಸಂತೋಷಪಡು! ಎಂದು ಹೇಳಿಕೊಳ್ಳುವೆನು’ ಎಂಬುದಾಗಿ ಆಲೋಚಿಸಿಕೊಂಡನು.


ಪಕ್ಷಿಗಳನ್ನು ನೋಡಿರಿ. ಅವು ಬಿತ್ತುವುದೂ ಇಲ್ಲ, ಕೊಯ್ಯುವುದೂ ಇಲ್ಲ. ಅವು ಆಹಾರವನ್ನು ಮನೆಗಳಲ್ಲಾಗಲಿ ಕಣಜಗಳಲ್ಲಾಗಲಿ ತುಂಬಿಟ್ಟುಕೊಳ್ಳುವುದಿಲ್ಲ. ದೇವರೇ ಅವುಗಳನ್ನು ಪರಿಪಾಲಿಸುತ್ತಾನೆ. ನೀವು ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರಾಗಿದ್ದೀರಿ.


ನಿಮ್ಮಲ್ಲಿ ಕೆಲವರು, “ಈ ಹೊತ್ತು ಅಥವಾ ನಾಳೆ ನಗರಕ್ಕೆ ಹೋಗುತ್ತೇವೆ. ಅಲ್ಲಿ ಒಂದು ವರ್ಷವಿದ್ದು ವ್ಯಾಪಾರಮಾಡಿ ಹಣ ಸಂಪಾದಿಸುತ್ತೇವೆ” ಎಂದು ಹೇಳುವಿರಿ. ಆಲಿಸಿರಿ! ಇದರ ಬಗ್ಗೆ ಯೋಚಿಸಿರಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು