Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:2 - ಪರಿಶುದ್ದ ಬೈಬಲ್‌

2 ಮರೆಯಾದ ಪ್ರತಿಯೊಂದೂ ಬಯಲಾಗುವುದು. ಗುಪ್ತವಾಗಿರುವ ಪ್ರತಿಯೊಂದೂ ಪ್ರಕಟಿಸಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮರೆಯಾಗಿರುವಂಥದ್ದು ವ್ಯಕ್ತವಾಗುವುದು. ರಹಸ್ಯವಾಗಿರುವಂಥದ್ದು ಪ್ರಕಟವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮುಚ್ಚುಮರೆಯಾಗಿರುವುದೆಲ್ಲಾ ಬಟ್ಟಬಯಲಾಗುವುದು; ಗುಟ್ಟಾಗಿರುವುದೆಲ್ಲಾ ರಟ್ಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮರೆಯಾಗಿರುವ ಯಾವದೂ ವ್ಯಕ್ತವಾಗದೆ ಇರುವದಿಲ್ಲ; ಹೊರಪಡದ ರಹಸ್ಯವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಪ್ರಕಟವಾಗದಂತೆ ಯಾವುದೂ ಮರೆಯಾಗಿರುವುದಿಲ್ಲ, ತಿಳಿಯಲಾಗದಂತೆ ಯಾವುದೂ ಗುಪ್ತವಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಜೆ ಕಾಯ್ ಧಾಪುನ್ ಥವಲ್ಲೆ ಹಾಯ್, ತೆ ಉಗ್ಡುನ್ ಹೊತಾ. ಅನಿ ಸಗ್ಳೆ ಘುಟ್ ಮಾಳಾಕ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:2
10 ತಿಳಿವುಗಳ ಹೋಲಿಕೆ  

ಆಗ ಪ್ರತಿಯೊಂದೂ ಸ್ಪಷ್ಟವಾಗಿ ಗೋಚರವಾಗುವುದು. ರಹಸ್ಯವಾದ ಪ್ರತಿಯೊಂದೂ ಬಟ್ಟಬಯಲಾಗುವುದು.


ಬೆಳಕಿಗೆ ಬಾರದ ಯಾವ ರಹಸ್ಯವೂ ಇಲ್ಲ; ಬಯಲಿಗೆ ಬಾರದ ಯಾವ ಗುಟ್ಟೂ ಇಲ್ಲ.


ನಾವೆಲ್ಲರೂ ನ್ಯಾಯ ವಿಚಾರಣೆಗಾಗಿ ಕ್ರಿಸ್ತನ ಮುಂದೆ ನಿಂತುಕೊಳ್ಳಲೇಬೇಕು. ಪ್ರತಿಯೊಬ್ಬನು ಇಹಲೋಕದ ದೇಹದಲ್ಲಿ ವಾಸವಾಗಿದ್ದಾಗ ಮಾಡಿದ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಪ್ರತಿಫಲವನ್ನು ಹೊಂದುವನು.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


ಮನುಷ್ಯರ ಅಂತರಂಗದಲ್ಲಿರುವ ರಹಸ್ಯ ಸಂಗತಿಗಳಿಗೆ ದೇವರು ತೀರ್ಪುಮಾಡುವ ದಿನದಂದು ಇವುಗಳೆಲ್ಲಾ ನೆರವೇರುವವು. ದೇವರು ಯೇಸು ಕ್ರಿಸ್ತನ ಮೂಲಕ ಜನರಿಗೆ ತೀರ್ಪು ಮಾಡುತ್ತಾನೆ ಎಂಬುದಾಗಿ ಸುವಾರ್ತೆಯು ತಿಳಿಸುತ್ತದೆ. ನಾನು ಜನರಿಗೆ ತಿಳಿಸುವುದು ಆ ಸುವಾರ್ತೆಯನ್ನೇ.


ಅವರು ಮಾಡುವ ಪಾಪಕೃತ್ಯಗಳು ನನಗೆ ಕಾಣಿಸುತ್ತಿವೆ. ಯೆಹೂದದ ಜನರು ತಾವು ಮಾಡುವದನ್ನು ನನ್ನಿಂದ ಮುಚ್ಚಿಡಲು ಸಾಧ್ಯವಿಲ್ಲ. ಅವರ ಪಾಪವು ನನಗೆ ಗೊತ್ತಾಗುವುದು.


ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ. ಅವರು ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ. ಯೆಹೋವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ. ಅವರ ಪಾಪಗಳನ್ನು ತನ್ನ ನೆನಪಿಗೆ ತಂದು ಅವರನ್ನು ಶಿಕ್ಷಿಸುವನು. ಅವರು ಈಜಿಪ್ಟಿಗೆ ಸೆರೆಯಾಳುಗಳಾಗಿ ಒಯ್ಯಲ್ಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು