ಲೂಕ 12:24 - ಪರಿಶುದ್ದ ಬೈಬಲ್24 ಪಕ್ಷಿಗಳನ್ನು ನೋಡಿರಿ. ಅವು ಬಿತ್ತುವುದೂ ಇಲ್ಲ, ಕೊಯ್ಯುವುದೂ ಇಲ್ಲ. ಅವು ಆಹಾರವನ್ನು ಮನೆಗಳಲ್ಲಾಗಲಿ ಕಣಜಗಳಲ್ಲಾಗಲಿ ತುಂಬಿಟ್ಟುಕೊಳ್ಳುವುದಿಲ್ಲ. ದೇವರೇ ಅವುಗಳನ್ನು ಪರಿಪಾಲಿಸುತ್ತಾನೆ. ನೀವು ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರಾಗಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಕಾಗೆಗಳನ್ನು ಗಮನಿಸಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ. ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ. ಆದರೂ ದೇವರು ಅವುಗಳನ್ನು ಪೋಷಿಸುತ್ತಾರೆ. ಪಕ್ಷಿಗಳಿಗಿಂತ ನೀವು ಎಷ್ಟೋ ಮೇಲಾದವರು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಕಾಗೆಗಳನ್ನು ಲಕ್ಷ್ಯವಿಟ್ಟು ಯೋಚಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಕಾಗೆಗಳನ್ನು ಗಮನಿಸಿರಿ: ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವಾಗಲಿ ಕಣಜವಾಗಲಿ ಇಲ್ಲ, ಆದರೂ ದೇವರು ಅವುಗಳನ್ನು ಪೋಷಿಸುತ್ತಾರೆ. ನೀವು ಪಕ್ಷಿಗಳಿಗಿಂತ ಎಷ್ಟೋ ಮೌಲ್ಯವುಳ್ಳವರಾಗಿದ್ದೀರಲ್ಲಾ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಫಾಂಕ್ರಾಕ್ನಿ ಬಗಾ; ತೆನಿ ಭ್ಹಿಂಯ್ ಪೆರಿನ್ಯಾತ್, ನಾ ದಾನೆ ಗೊಳಾ ಕರುನ್ ಥವ್ನ್ ಘೆಯ್‌ನ್ಯಾತ್. ತೆಂಚಿ ದಾನೆ ಗೊಳಾ ಕರುನ್ ಥವ್ತಲಿ ಗುಡಾನಾ ನಾತ್, ದೆವ್ ತೆಂಕಾ ಜೆವಾನ್ ದಿತಾ. ಫಾಂಕ್ರಾಂಚ್ಯಾನ್ಕಿ ತುಮಿ ಲೈ ಕಿಮ್ತಿಚೆ. ಅಧ್ಯಾಯವನ್ನು ನೋಡಿ |