ಲೂಕ 12:32 - ಪರಿಶುದ್ದ ಬೈಬಲ್32 “ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 “ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 “ಚಿಕ್ಕ ಹಿಂಡೇ, ಭಯಪಡಬೇಡ, ಏಕೆಂದರೆ ನಿಮ್ಮ ತಂದೆಯು ತಮ್ಮ ರಾಜ್ಯವನ್ನು ನಿಮಗೆ ಕೊಡುವುದಕ್ಕೆ ಮೆಚ್ಚಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 “ಬಾರಿಕ್ಲ್ಯಾ ಹಿಂಡಾ ಭಿಂವ್‍ನಕೊ, ತುಜ್ಯಾ ಬಾಬಾಕ್ ಅಪ್ನಾಚೆ ರಾಜ್ ತುಕಾ ದಿವ್ಕ್ ಬರೆ ದಿಸ್ಲಾ. ಅಧ್ಯಾಯವನ್ನು ನೋಡಿ |
ಬಳಿಕ ಯೇಸು ಪವಿತ್ರಾತ್ಮನ ಮೂಲಕ ಬಹಳ ಸಂತೋಷಗೊಂಡು ಹೀಗೆ ಪ್ರಾರ್ಥಿಸಿದನು: “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಾನು ನಿನ್ನನ್ನು ಸ್ತುತಿಸುತ್ತೇನೆ. ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಸಂಗತಿಗಳನ್ನು ಮರೆಮಾಡಿದ್ದಕ್ಕಾಗಿ ನಾನು ನಿನ್ನನ್ನು ಸ್ತುತಿಸುತ್ತೇನೆ. ಆದರೆ ನೀನು ಚಿಕ್ಕಮಕ್ಕಳಂತಿರುವ ಜನರಿಗೆ ಈ ಸಂಗತಿಗಳನ್ನು ಪ್ರಕಟಮಾಡಿದೆ. ಹೌದು, ತಂದೆಯೇ, ಅದೇ ನಿನ್ನ ಅಪೇಕ್ಷೆಯಾಗಿತ್ತು.
ಆದಕಾರಣವೇ ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತೇವೆ. ಯಾವ ಒಳ್ಳೆಯ ಮಾರ್ಗದಲ್ಲಿ ನೀವು ಜೀವಿಸಬೇಕೆಂದು ದೇವರು ನಿಮ್ಮನ್ನು ಕರೆದನೋ, ಆ ಮಾರ್ಗದಲ್ಲೇ ನೀವು ಜೀವಿಸಲಿಕ್ಕಾಗುವಂತೆ ಪ್ರಾರ್ಥಿಸುತ್ತೇವೆ. ನಿಮ್ಮಲ್ಲಿರುವ ಒಳ್ಳೆಯ ತನವು ಒಳ್ಳೆಯದನ್ನು ಮಾಡುವಂತೆ ನಿಮ್ಮನ್ನು ಪ್ರೇರೇಪಿಸುತ್ತದೆ. ನಿಮ್ಮಲ್ಲಿರುವ ನಂಬಿಕೆಯು ನಿಮ್ಮಿಂದ ಕಾರ್ಯ ಸಾಧಿಸುತ್ತದೆ. ಈ ಕಾರ್ಯಗಳನ್ನು ನೀವು ಹೆಚ್ಚುಹೆಚ್ಚಾಗಿ ಮಾಡಲು ದೇವರು ತನ್ನ ಶಕ್ತಿಯಿಂದ ನಿಮಗೆ ಸಹಾಯ ಮಾಡಲೆಂದು ಬೇಡಿಕೊಳ್ಳುತ್ತೇವೆ.