Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:36 - ಪರಿಶುದ್ದ ಬೈಬಲ್‌

36 ಮದುವೆಯ ಔತಣದಿಂದ ಮನೆಗೆ ಮರಳಿಬರುವ ಯಜಮಾನನನ್ನು ಎದುರುನೋಡುತ್ತಿರುವ ಸೇವಕರಂತಿರಿ. ಯಜಮಾನನು ಬಂದು ಬಾಗಿಲನ್ನು ತಟ್ಟಿದಾಗ ಸೇವಕರು ಬಾಗಿಲನ್ನು ತೆರೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನೀವಂತೂ ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವಂಥ ಮತ್ತು ಆತನು ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವಂಥ ಆಳುಗಳಂತೆ ಇರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ತಟ್ಟಿದ ತಕ್ಷಣ ಯಜಮಾನನಿಗೆ ಬಾಗಿಲು ತೆರೆಯಲು ಸಿದ್ಧರಿರುವ ಸೇವಕರಂತೆ ಇರಿ. ತಮ್ಮ ಯಜಮಾನನು ಮದುವೆ ಔತಣ ಮುಗಿಸಿಕೊಂಡು ಯಾವಾಗ ಹಿಂದುರುಗುತ್ತಾನೋ, ಎಂದು ಅವರು ಎದುರು ನೋಡುತ್ತಾ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ನೀವಂತೂ ತಮ್ಮ ಯಜಮಾನನು ಬಂದು ತಟ್ಟಿದ ಕೂಡಲೆ ಕದವನ್ನು ತೆರೆಯುವದಕ್ಕೆ ಸಿದ್ಧವಾಗಿದ್ದು ಮದುವೇ ಊಟವನ್ನು ಯಾವಾಗ ತೀರಿಸಿಕೊಂಡು ಬರುವನೋ ಎಂದು ಅವನನ್ನು ಎದುರುನೋಡುತ್ತಿರುವ ಮನುಷ್ಯರಂತಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ನೀವಂತೂ ಮದುವೆಯ ಔತಣದಿಂದ ಹಿಂದಿರುಗುವ ತಮ್ಮ ಯಜಮಾನನಿಗಾಗಿ ಕಾಯುತ್ತಿದ್ದು, ಅವನು ಬಂದು ಬಾಗಿಲನ್ನು ತಟ್ಟಿದ ತಕ್ಷಣವೇ ಅವನಿಗಾಗಿ ತೆರೆಯುವ ಸೇವಕರಂತೆ ಇರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 “ಲಗ್ನಾಕ್ ಗೆಲ್ಲ್ಯಾ ಅಪ್ನಾಚ್ಯಾ ಮಾಲ್ಕಾಚಿ ವಾಟ್ ರಾಕುನ್ಗೆತ್ ರ್‍ಹಾತಲ್ಯಾ ಆಳಾ ಸರ್ಕೆ, ರಾಕುನ್ಗೆತ್ ರ್‍ಹಾವಾ. ಧನಿನ್ ಯೆವ್ನ್ ದಾರ್ ಬಡ್ವಲ್ಲ್ಯಾ ತನ್ನಾ, ತೆನಿ ತಾಬೊಡ್ತೊಬ್ ದಾರ್ ಕಾಡ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:36
16 ತಿಳಿವುಗಳ ಹೋಲಿಕೆ  

ಇಗೋ, ನಾನು ಬಾಗಿಲ ಬಳಿ ನಿಂತುಕೊಂಡು ತಟ್ಟುತ್ತಿದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ, ನಾನು ಒಳಗೆ ಬಂದು ಅವನೊಂದಿಗೆ ಊಟ ಮಾಡುತ್ತೇನೆ ಮತ್ತು ಅವನು ನನ್ನೊಂದಿಗೆ ಊಟ ಮಾಡುತ್ತಾನೆ.


ನಿನ್ನ ಜನರು ನಿನಗೆ ಕಿವಿಗೊಡಲಿಲ್ಲ. ನೀನು ಹೇಳಿದ್ದನ್ನು ನಿನ್ನ ಜನರು ನಿಜವಾಗಿಯೂ ಕೇಳಲಿಲ್ಲ. ನಿನ್ನಂಥ ದೇವರನ್ನು ಯಾರೂ ನೋಡಿಲ್ಲ. ನಿನ್ನ ಹೊರತು ಬೇರೆ ಯಾರೂ ದೇವರಿಲ್ಲ. ಜನರು ತಾಳ್ಮೆಯಿಂದಿದ್ದು ನಿನ್ನ ಸಹಾಯಕ್ಕಾಗಿ ಕಾದಿದ್ದರೆ ನೀನು ಅವರಿಗಾಗಿ ಮಹಾಕಾರ್ಯಗಳನ್ನು ಮಾಡುವೆ.


“ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಗಾಗಿ ನಾನು ಕಾಯುತ್ತಿದ್ದೇನೆ.”


“ಉಡುಪನ್ನು ಧರಿಸಿಕೊಂಡು ಪೂರ್ಣಸಿದ್ಧರಾಗಿರಿ! ನಿಮ್ಮ ದೀಪಗಳು ಉರಿಯುತ್ತಿರಲಿ.


ಆ ಸೇವಕರೇ ಧನ್ಯರು. ಏಕೆಂದರೆ, ಅವರು ಸಿದ್ಧರಾಗಿದ್ದು ತನಗೋಸ್ಕರ ಕಾಯುತ್ತಿದ್ದುದನ್ನು ಯಜಮಾನನು ನೋಡುತ್ತಾನೆ. ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ಆಗ ಯಜಮಾನನು ತಾನೇ ಸೇವಕರ ಉಡುಪನ್ನು ಧರಿಸಿಕೊಂಡು, ಆ ಸೇವಕರನ್ನು ಕುಳ್ಳಿರಿಸಿ, ಅವರಿಗೆ ಊಟ ಬಡಿಸುತ್ತಾನೆ.


ನಾವೆಲ್ಲರೂ ಆನಂದಿಸೋಣ ಮತ್ತು ಸಂತಸಪಡೋಣ! ದೇವರನ್ನು ಮಹಿಮೆಪಡಿಸೋಣ! ಕುರಿಮರಿಯಾದಾತನ (ಯೇಸು) ವಿವಾಹಕಾಲ ಬಂದಿರುವುದರಿಂದ ದೇವರನ್ನು ಘನಪಡಿಸೋಣ. ಕುರಿಮರಿಯಾದಾತನ ವಧು (ಸಭೆ) ತನ್ನನ್ನು ಸಿದ್ಧಪಡಿಸಿಕೊಂಡಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು