ಲೂಕ 12:37 - ಪರಿಶುದ್ದ ಬೈಬಲ್37 ಆ ಸೇವಕರೇ ಧನ್ಯರು. ಏಕೆಂದರೆ, ಅವರು ಸಿದ್ಧರಾಗಿದ್ದು ತನಗೋಸ್ಕರ ಕಾಯುತ್ತಿದ್ದುದನ್ನು ಯಜಮಾನನು ನೋಡುತ್ತಾನೆ. ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ಆಗ ಯಜಮಾನನು ತಾನೇ ಸೇವಕರ ಉಡುಪನ್ನು ಧರಿಸಿಕೊಂಡು, ಆ ಸೇವಕರನ್ನು ಕುಳ್ಳಿರಿಸಿ, ಅವರಿಗೆ ಊಟ ಬಡಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು. ಏಕೆಂದರೆ, ಯಜಮಾನನೇ ನಡುಕಟ್ಟಿನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಯಜಮಾನನು ಬಂದು ಯಾವ ಯಾವ ಆಳುಗಳು ಎಚ್ಚರವಾಗಿರುವದನ್ನು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಆತನೇ ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಹತ್ತಿರಕ್ಕೆ ಬಂದು ಅವರಿಗೆ ಸೇವೆಮಾಡುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಯಜಮಾನನು ಬಂದಾಗ ಯಾರು ಎಚ್ಚರವಾಗಿರುವುದನ್ನು ಅವನು ಕಾಣುವನೋ ಆ ಸೇವಕರು ಧನ್ಯರು. ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿ ನಿಂತು ಅವರನ್ನು ಊಟಕ್ಕೆ ಕೂರಿಸಿ, ಅವರಿಗೆ ತಾನೇ ಸೇವೆಮಾಡುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಧನಿ ಪರ್‍ತುನ್ ಯೆಲ್ಲ್ಯಾ ತನ್ನಾ ಜಾಗೆ ರ್‍ಹಾವ್ನ್, ತಯಾರ್ ಹೊತ್ತ್ಯಾ ಆಳಾಂಚೆ ಕವ್ಡೆ ಬರೆ! ಮಿಯಾ ತುಮ್ಕಾ ಖರೆಚ್ ಸಾಂಗ್ತಾ. ತೊ ಅಪ್ನಾಚಿ ವೈಲಿ ಆಂಗಿ ಕಾಡುನ್ ಥವ್ತಾ, ಅನಿ ತೆಂಕಾ ಬಸುಕ್ ಲಾವ್ತಾ. ಅನಿ ತೆಂಕಾ ಅಪ್ನಿಚ್ ಜೆವಾನ್ ವಾಡ್ತಾ. ಅಧ್ಯಾಯವನ್ನು ನೋಡಿ |