Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:43 - ಪರಿಶುದ್ದ ಬೈಬಲ್‌

43 ಆ ಸೇವಕನು ತನ್ನ ಕರ್ತವ್ಯವನ್ನು ನಿಷ್ಠೆಯಿಂದ ಮಾಡುತ್ತಿದ್ದರೆ, ಯಜಮಾನನು ಬಂದಾಗ ಅವನಿಗೆ ಬಹಳ ಸಂತೋಷವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಯಜಮಾನನು ಬಂದು ಯಾವ ಆಳು ಹೀಗೆ ಮಾಡುವುದನ್ನು ಕಾಣುವನೋ ಆ ಆಳು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಯಜಮಾನನು ಮನೆಗೆ ಹಿಂದಿರುಗಿ ಬಂದಾಗ ಆ ಸೇವಕನು ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಯಜಮಾನನು ಬಂದು ಯಾವ ಆಳು ಹೀಗೆ ಮಾಡುವದನ್ನು ಕಾಣುವನೋ ಆ ಆಳು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ತನ್ನ ಯಜಮಾನನು ಬಂದಾಗ ಯಾವ ಸೇವಕನು ಸೇವೆ ಮಾಡುವುದನ್ನು ಕಾಣುವನೋ ಆ ಸೇವಕನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಧನಿ ಯೆಲ್ಲ್ಯಾ ತನ್ನಾ ಅಪ್ನಾಚಿ ಸಗ್ಳಿ ಜವಾಬ್ದಾರಿ ಸಂಬಾಳುನ್ ಘೆವ್ನ್ ತೊ ಆಳ್ ರ್‍ಹಾಲ್ಯಾರ್ ತ್ಯಾ ಆಳಾಚೆ ಕವ್ಡೆ ಬರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:43
8 ತಿಳಿವುಗಳ ಹೋಲಿಕೆ  

ಪ್ರಭುವು ಹೀಗೆಂದನು: “ವಿವೇಕಿಯೂ ನಂಬಿಗಸ್ತನೂ ಆದ ಆಳು ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಿಸಲ್ಪಟ್ಟವನೇ.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಯಜಮಾನನು ಆ ಸೇವಕನನ್ನು ತನ್ನ ಆಸ್ತಿಗೆಲ್ಲಾ ಮೇಲ್ವಿಚಾರಕನನ್ನಾಗಿ ನೇಮಿಸುವನು.


ನಂಬಿಗಸ್ತರಿಗಾಗಿ ದೇಶದಲ್ಲೆಲ್ಲಾ ಹುಡುಕಿ ನೋಡುತ್ತೇನೆ. ನನ್ನ ಸೇವೆಗೆ ಅವರನ್ನೇ ನೇಮಿಸಿಕೊಳ್ಳುವೆನು. ಪರಿಶುದ್ಧರು ಮಾತ್ರ ನನ್ನ ಸೇವಕರಾಗಿರಲು ಸಾಧ್ಯ.


ಅಂಜೂರದ ಮರಗಳನ್ನು ನೋಡಿಕೊಳ್ಳುವವನು ಅವುಗಳ ಹಣ್ಣನ್ನು ತಿನ್ನುವನು; ಯಜಮಾನನನ್ನು ನೋಡಿಕೊಳ್ಳುವವನು ಪ್ರತಿಫಲವನ್ನು ಹೊಂದುವನು.


ಸಬ್ಬತ್ತಿನ ವಿಷಯದಲ್ಲಿ ದೇವರ ಕಟ್ಟಳೆಗಳನ್ನು ಅನುಸರಿಸುವವರು ಆಶೀರ್ವಾದ ಹೊಂದುವರು. ದುಷ್ಕೃತ್ಯಗಳನ್ನು ಮಾಡದವನು ಸಂತೋಷದಿಂದಿರುವನು.”


ತನಗೆ ಕೊಟ್ಟ ಕೆಲಸವನ್ನು ಮಾಡುತ್ತಿರುವಾಗ ಯಜಮಾನನು ಬಂದರೆ ಆ ಸೇವಕನಿಗೆ ಬಹಳ ಸಂತೋಷವಾಗುತ್ತದೆ.


ಆ ಸೇವಕರೇ ಧನ್ಯರು. ಏಕೆಂದರೆ, ಅವರು ಸಿದ್ಧರಾಗಿದ್ದು ತನಗೋಸ್ಕರ ಕಾಯುತ್ತಿದ್ದುದನ್ನು ಯಜಮಾನನು ನೋಡುತ್ತಾನೆ. ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ಆಗ ಯಜಮಾನನು ತಾನೇ ಸೇವಕರ ಉಡುಪನ್ನು ಧರಿಸಿಕೊಂಡು, ಆ ಸೇವಕರನ್ನು ಕುಳ್ಳಿರಿಸಿ, ಅವರಿಗೆ ಊಟ ಬಡಿಸುತ್ತಾನೆ.


ಪ್ರಿಯ ಸ್ನೇಹಿತರೇ, ಇವುಗಳಿಗಾಗಿಯೇ ನಾವು ಎದುರುನೋಡುತ್ತಿದ್ದೇವೆ. ಆದ್ದರಿಂದ ನೀವು ಪಾಪವಿಲ್ಲದವರಾಗಿರಲು ಮತ್ತು ತಪ್ಪಿಲ್ಲದವರಾಗಿರಲು ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಿಸಿರಿ. ದೇವರೊಂದಿಗೆ ಸಮಾಧಾನದಿಂದಿರಲು ಪ್ರಯತ್ನಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು