ಲೂಕ 12:45 - ಪರಿಶುದ್ದ ಬೈಬಲ್45 “ಆದರೆ ಆ ಸೇವಕನು ದುಷ್ಟನಾಗಿ ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದುಕೊಂಡರೆ ಏನಾಗುವುದು? ಆ ಸೇವಕನು ಯಜಮಾನನ ಇತರ ದಾಸದಾಸಿಯರನ್ನು ಹೊಡೆಯುವುದಕ್ಕೂ ತಿಂದುಕುಡಿದು ಮತ್ತನಾಗುವುದಕ್ಕೂ ತೊಡಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 “ಆದರೆ ಆ ಸೇವಕನು ತನ್ನಲ್ಲೇ, ‘ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ,’ ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಆದರೆ ಆ ಆಳು - ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಅಂತ ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವದಕ್ಕೂ ತಿಂದು ಕುಡಿದು ಅಮಲೇರುವದಕ್ಕೂ ತೊಡಗಿದರೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಆದರೆ ಆ ಸೇವಕನು, ‘ನನ್ನ ಯಜಮಾನನು ಬರುವುದಕ್ಕೆ ತಡಮಾಡುತ್ತಾನೆ,’ ಎಂದು ತನ್ನ ಹೃದಯದಲ್ಲಿ ಭಾವಿಸಿಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆದು, ತಿಂದು ಕುಡಿದು ಮತ್ತನಾಗುವುದಕ್ಕೆ ಆರಂಭಿಸಿದರೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ಖರೆ, ಜರ್ ತೊ ಆಳ್, ಅಪ್ನಾಚೊ ಧನಿ ಪರ್ತುನ್ ಯೌಕ್ ಲೈ ಎಳ್ ಹೊತಾ ಮನುನ್ ಯವ್ಜುನ್ ಘೆವ್ನ್, ಹುರಲ್ಲ್ಯಾ ಆಳಾಕ್ನಿ ಘೊಮನುಸ್ ಅನಿ ಬಾಯ್ಕೊಮನುಸ್ ಮನಿನಸ್ತಾನಾ ಮಾರ್‍ತಾ, ಅನಿ ಖಾತಾ, ಫಿತಾ, ಅನಿ ಫಿದೊಡೊ ಹೊವ್ನ್ ಪಡ್ತಾ. ಅಧ್ಯಾಯವನ್ನು ನೋಡಿ |
ಅವರಿಂದ ಅನೇಕ ಜನರು ಸಂಕಟಕ್ಕೆ ಒಳಗಾಗುವರು. ಅವರು ಮಾಡಿದ್ದಕ್ಕೆ ಅದೇ ಪ್ರತಿಫಲವಾಗಿರುವುದು. ಈ ಸುಳ್ಳುಬೋಧಕರು ಜನರೆಲ್ಲರ ಎದುರಿನಲ್ಲಿ ಕೆಟ್ಟದ್ದನ್ನು ಮಾಡಲು ಸಂತೋಷಿಸುತ್ತಾರೆ. ತಮ್ಮನ್ನು ಸಂತಸಗೊಳಿಸುವ ಕೆಟ್ಟಕಾರ್ಯಗಳಿಂದ ಅವರು ಆನಂದಿಸುತ್ತಾರೆ. ಅವರು ನಿಮ್ಮ ಮಧ್ಯದಲ್ಲಿ ಕೊಳಕಾದ ಕಲೆಗಳಂತಿದ್ದಾರೆ. ನೀವು ಒಟ್ಟಾಗಿ ಊಟ ಮಾಡುವಾಗ ಅವರು ನಿಮಗೆ ಅಪಮಾನಕರವಾಗಿದ್ದಾರೆ.