ಲೂಕ 12:7 - ಪರಿಶುದ್ದ ಬೈಬಲ್7 ಹೌದು, ನಿಮ್ಮ ತಲೆಯಲ್ಲಿ ಎಷ್ಟು ಕೂದಲುಗಳಿವೆ ಎಂಬುದು ಸಹ ದೇವರಿಗೆ ಗೊತ್ತಿದೆ. ಹೆದರಬೇಡಿರಿ. ನೀವು ಅನೇಕ ಗುಬ್ಬಿಗಳಿಗಿಂತ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅಷ್ಟುಮಾತ್ರವಲ್ಲ, ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿಮ್ಮ ತಲೇಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿಮ್ಮ ತಲೆಯ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿರಿ; ಅನೇಕ ಗುಬ್ಬಿಗಳಿಗಿಂತಲೂ ನೀವು ಎಷ್ಟೋ ಮೌಲ್ಯವುಳ್ಳವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತುಮ್ಚ್ಯಾ ಟಕ್ಲ್ಯಾಚಿ ಕೆಸಾ ಸೈತ್ ಮೆಜುನ್ ಥವಲ್ಲಿ ಹಾತ್, ತೆಚೆಸಾಟ್ನಿ ಭಿಂವ್ನಕಾಶಿ,ತುಮಿ ಗುಬ್‍ಯಾಂಚ್ಯಾನ್ಕಿ ಲೈ ಕಿಮ್ತಿಚೆ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಆ ಸ್ತ್ರೀಯು, “ಅವರು ನನಗೆ ತೊಂದರೆ ಕೊಡದಂತೆ ನೀನು ನೋಡಿಕೊಳ್ಳುವುದಾಗಿ ನಿನ್ನ ದೇವರಾದ ಯೆಹೋವನ ಮೇಲೆ ದಯವಿಟ್ಟು ಪ್ರಮಾಣ ಮಾಡು. ಆಗ ಕೊಲೆಗಾರರನ್ನು ದಂಡಿಸಲು ಇಚ್ಛಿಸುವ ಈ ಜನರು, ನನ್ನ ಮಗನನ್ನು ದಂಡಿಸುವುದಿಲ್ಲ” ಎಂದು ಹೇಳಿದಳು. ದಾವೀದನು, “ಯೆಹೋವನಾಣೆ, ನಿನ್ನ ಮಗನನ್ನು ಯಾವ ವ್ಯಕ್ತಿಯೂ ತೊಂದರೆಗೊಳಿಸುವುದಿಲ್ಲ. ನಿನ್ನ ಮಗನ ತಲೆಯ ಮೇಲಿನ ಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ” ಎಂದನು.
ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.