ಲೂಕ 13:11 - ಪರಿಶುದ್ದ ಬೈಬಲ್11 ದೆವ್ವದಿಂದ ಪೀಡಿತಳಾಗಿದ್ದ ಒಬ್ಬ ಸ್ತ್ರೀ ಅಲ್ಲಿದ್ದಳು. ಆ ದೆವ್ವದಿಂದಾಗಿ ಆಕೆಗೆ ಹದಿನೆಂಟು ವರ್ಷಗಳಿಂದ ನಡು ಬಗ್ಗಿಕೊಂಡಿತ್ತು. ನೆಟ್ಟಗೆ ನಿಂತುಕೊಳ್ಳಲು ಆಕೆಗೆ ಸಾಧ್ಯವಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಲ್ಲಿ ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ಬಾಧಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಂಗಸು ಇದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹದಿನೆಂಟು ವರ್ಷಗಳಿಂದ ದೆವ್ವಪೀಡಿತಳಾಗಿ ನರಳುತ್ತಿದ್ದ ಒಬ್ಬ ಮಹಿಳೆ ಅಲ್ಲಿದ್ದಳು. ಆಕೆ ಒಬ್ಬ ಗೂನಿ; ನೆಟ್ಟಗೆ ನಿಲ್ಲಲು ಸ್ವಲ್ಪವೂ ಆಗುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅಲ್ಲಿ ಹದಿನೆಂಟು ವರುಷಗಳಿಂದ ದೆವ್ವ ಬಡಿದು ಮೈಯಲ್ಲಿ ರೋಗವುಳ್ಳ ಒಬ್ಬ ಸ್ತ್ರೀಯು ಇದ್ದಳು. ಆಕೆಯು ನಡುಬೊಗ್ಗಿಹೋಗಿ ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ, ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು. ಆಕೆ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಎಕ್ ಗಿರೊಲಾಗಲ್ಲಿ ಬಾಯ್ಕೊಮನುಸ್ ಹೊತ್ತಿ, ತೆನಿ ತಿಕಾ ಅಟ್ರಾ ವರ್ಸಾ ಅರಾಮನತ್ತ್ಯಾ ಸಾರ್ಕೆ ಕರಲ್ಲ್ಯಾನ್, ತಿ ಬಾಗುನ್ ಗೆಲ್ಲಿ, ತಿಕಾ ವಟ್ಟೊಚ್ ಇಬೆ ರಾವ್ಕ್ ಹೊಯ್ನಶಿ. ಅಧ್ಯಾಯವನ್ನು ನೋಡಿ |