ಲೂಕ 13:14 - ಪರಿಶುದ್ದ ಬೈಬಲ್14 ಯೇಸು ಸಬ್ಬತ್‌ದಿನದಲ್ಲಿ ವಾಸಿಮಾಡಿದ್ದರಿಂದ ಸಭಾಮಂದಿರದ ಅಧಿಕಾರಿ ಕೋಪಗೊಂಡು ಜನರಿಗೆ, “ಕೆಲಸಕ್ಕಾಗಿ ವಾರದಲ್ಲಿ ಆರು ದಿನಗಳಿವೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ. ಸಬ್ಬತ್‌ದಿನದಲ್ಲಿ ವಾಸಿಮಾಡಿಸಿಕೊಳ್ಳಬಾರದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಯೇಸು ಸಬ್ಬತ್‍ದಿನದಲ್ಲಿ ಗುಣಮಾಡಿದ್ದನ್ನು ಕಂಡು, ಪ್ರಾರ್ಥನಾಮಂದಿರದ ಅಧಿಕಾರಿ ಕುಪಿತನಾದನು. ಕೂಡಿದ್ದ ಜನರನ್ನು ಉದ್ದೇಶಿಸಿ, “ಕೆಲಸ ಮಾಡಲು ಆರು ದಿನಗಳಿವೆ, ಆ ದಿನಗಳಲ್ಲಿ ಬಂದು ಗುಣಮಾಡಿಸಿಕೊಳ್ಳಿರಿ; ಸಬ್ಬತ್‍ದಿನದಲ್ಲಿ ಮಾತ್ರ ಕೂಡದು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ ಸಬ್ಬತ್‍ದಿನದಲ್ಲಿ ಯೇಸು ಸ್ವಸ್ಥಮಾಡಿದನಲ್ಲಾ ಎಂದು ರೋಷಗೊಂಡು ಜನರಿಗೆ - ಕೆಲಸಮಾಡುವದಕ್ಕೆ ಆರು ದಿವಸಗಳು ಅವೆಯಷ್ಟೆ; ಆ ದಿವಸಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್‍ದಿನದಲ್ಲಿ ಮಾತ್ರ ಬೇಡ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಮಾಡಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ, “ಆರು ದಿವಸಗಳಲ್ಲಿ ಮನುಷ್ಯರು ಕೆಲಸ ಮಾಡತಕ್ಕದ್ದು. ಆದ್ದರಿಂದ ಆ ದಿನಗಳಲ್ಲಿ ನೀವು ಬಂದು ಸ್ವಸ್ಥರಾಗಿರಿ, ಸಬ್ಬತ್ ದಿನದಲ್ಲಿ ಬೇಡ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಹ್ಯಾ ಬಾಯ್ಕೊಮನ್ಸಿಕ್ ಜೆಜುನ್ ಸಬ್ಬತಾಚ್ಯಾ ದಿಸಿ ಗುನ್ ಕರಲ್ಲೆ ಬಗುನ್ ಸಿನಾಗೊಗಾಚ್ಯಾ ಅದಿಕಾರ್‍ಯಾಕ್ ರಾಗ್ ಯೆಲೊ, ಅನಿ ತೊ ಲೊಕಾಕ್ನಿ “ಅಮ್ಕಾ ಕಾಮ್ ಕರುಕ್, ಸಾ ದಿಸಾ ಹಾತ್, ತ್ಯಾ ದಿಸಾತ್ನಿ ಯೆವಾ, ಅನಿ ತುಮ್ಕಾ ತುಮಿ ಗುನ್ ಕರುನ್ ಘೆವ್ನ್ ಜಾಂವಾ, ಸಾಬ್ಬಾತಾಚ್ಯಾ ದಿಸಿ ಯೌನಕಾಸಿ!” ಮನುನ್ ಸಾಂಗುಕ್‍ಲಾಲೊ. ಅಧ್ಯಾಯವನ್ನು ನೋಡಿ |