ಲೂಕ 13:19 - ಪರಿಶುದ್ದ ಬೈಬಲ್19 ದೇವರ ರಾಜ್ಯ ಸಾಸಿವೆಕಾಳಿನಂತಿದೆ. ಒಬ್ಬನು ತನ್ನ ತೋಟದಲ್ಲಿ ಈ ಬೀಜವನ್ನು ಹಾಕುತ್ತಾನೆ. ಅದು ಬೆಳೆದು ಮರವಾಗುತ್ತದೆ. ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡುಗಳನ್ನು ಕಟ್ಟಿಕೊಳ್ಳುತ್ತವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿದವು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದನ್ನು ಯಾವುದಕ್ಕೆ ಹೋಲಿಸಲಿ? ಅದು ಒಂದು ಸಾಸಿವೆಕಾಳಿನಂತೆ ಇದೆ. ಒಬ್ಬನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಬಿತ್ತಿದನು. ಅದು ಬೆಳೆದು ಮರವಾಯಿತು. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ರೆಂಬೆಗಳಲ್ಲಿ ಗೂಡುಕಟ್ಟಿ ವಾಸಮಾಡತೊಡಗಿದವು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅದನ್ನು ನಾನು ಯಾವದಕ್ಕೆ ಹೋಲಿಸಲಿ? ಅದು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡುಹೋಗಿ ತನ್ನ ತೋಟದಲ್ಲಿ ಹಾಕಿದನು; ಅದು ಬೆಳೆದು ಮರವಾಯಿತು; ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅದು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ತೆಗೆದುಕೊಂಡುಹೋಗಿ ತನ್ನ ತೋಟದಲ್ಲಿ ಬಿತ್ತಲು, ಅದು ಬೆಳೆದು ಒಂದು ದೊಡ್ಡ ಮರವಾಯಿತು. ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸಮಾಡಿದವು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತೆ ಕಶೆ ಮಟ್ಲ್ಯಾರ್, ಎಕ್ ಮಾನುಸ್ ಎಕ್ ಸಾಸಾವಾಚಿ ಭ್ಹಿಂಯ್ ಘೆತಾ, ಅನಿ ಅಪ್ನಾಚ್ಯಾ ಶೆತಾತ್ ಉಗಾತ್ ಘಾಲ್ತಾ, ತೆ ಝಾಡ್ ಮೊಟೆ ಹೊತಾ, ಅನಿ ಮೊಟೆ ಝಾಡ್ ಹೊತಾ, ಅನಿ ಫಾಂಕ್ರಾ ಯೆವ್ನ್ ತೆಚ್ಯಾ ಟಾಳಿಯಾಕ್ನಿ ಘಂಟೆ ಭಾಂದ್ತ್ಯಾತ್”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.