Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:29 - ಪರಿಶುದ್ದ ಬೈಬಲ್‌

29 ಜನರು ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣದಿಕ್ಕುಗಳಿಂದ ಬರುವರು. ಅವರು ದೇವರ ರಾಜ್ಯದಲ್ಲಿ ಊಟಕ್ಕೆ ಕುಳಿತುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಔತಣಕ್ಕೆ ಕುಳಿತುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಚತುರ್ದಿಕ್ಕುಗಳಿಂದಲೂ ಜನರು ಬಂದು, ದೇವರ ಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣ ದಿಕ್ಕುಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಊಟಕ್ಕೆ ಕೂಡ್ರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಜನರು ಬಂದು, ದೇವರ ರಾಜ್ಯದಲ್ಲಿ ಹಬ್ಬದ ಔತಣಕ್ಕೆ ಕುಳಿತುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ದಿಸ್ ಉಗಾವ್ತಲ್ಯಾ ಅನಿ, ದಿಸ್ ಬುಡ್ತಲ್ಯಾ ದಿಕ್ಕಾಕ್ನಾ, ಅನಿ ಉತ್ತರ್ ಅನಿ ದಕ್ಷಿನ್ ದಿಕ್ಕಾಕ್ನಾ ಲೊಕಾ ಯೆತ್ಯಾತ್, ಅನಿ ದೆವಾಚ್ಯಾ ರಾಜಾತ್ ಸನಾಚ್ಯಾ ಜೆವ್ನಾಕ್ ಬಸ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:29
14 ತಿಳಿವುಗಳ ಹೋಲಿಕೆ  

ಯೆಹೋವನು ನನಗೆ ಹೇಳಿದ್ದೇನೆಂದರೆ: “ನನ್ನ ಸೇವಕನಾದ ಯಾಕೋಬನ ಕುಲಗಳನ್ನು ಮೇಲೆತ್ತಿ ಇಸ್ರೇಲಿನ ಅಳಿದುಳಿದವರನ್ನು ಪುನಃಸ್ಥಾಪಿಸುವೆ. ಆದರೆ ನಿನಗೆ ಇನ್ನೊಂದು ಕೆಲಸವಿದೆ. ಅದು ಇದಕ್ಕಿಂತಲೂ ಮಹತ್ತಾದದ್ದು. ನಾನು ನಿನ್ನನ್ನು ಎಲ್ಲಾ ಜನಾಂಗಗಳಿಗೆ ಬೆಳಕನ್ನಾಗಿ ಮಾಡುವೆನು. ಲೋಕದ ಎಲ್ಲಾ ಜನರನ್ನು ರಕ್ಷಿಸಲು ನೀನು ನನ್ನ ಮಾರ್ಗವಾಗುವೆ.”


“ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ನಾನು ಉತ್ತರಕ್ಕೆ ‘ನನ್ನ ಜನರನ್ನು ಬಿಟ್ಟುಕೊಡು’ ಎಂದು ಹೇಳುವೆನು. ದಕ್ಷಿಣಕ್ಕೆ, ‘ನನ್ನ ಜನರನ್ನು ಸೆರೆಮನೆಯಲ್ಲಿರಿಸಬೇಡ’ ಎಂದು ಹೇಳುವೆನು. ಬಹುದೂರ ದೇಶಗಳಿಂದ ನನ್ನ ಮಕ್ಕಳನ್ನು ನನ್ನ ಬಳಿಗೆ ಕರೆದುಕೊಂಡು ಬಾ.


“ದೇವರು ತನ್ನ ರಕ್ಷಣೆಯನ್ನು ಯೆಹೂದ್ಯರಲ್ಲದವರಿಗೆ ಕಳುಹಿಸಿದ್ದಾನೆ. ಅವರು ಅದಕ್ಕೆ ಕಿವಿಗೊಡುವರು. ಯೆಹೂದ್ಯರಾದ ನಿಮಗೆ ಇದು ತಿಳಿದಿರಲಿ!”


ಭೂಮಿಯ ಮೇಲೆ ಧೂಳಿನ ಕಣಗಳಿರುವಂತೆ ನಿನಗೆ ಅನೇಕಾನೇಕ ಸಂತತಿಗಳಿರುವರು. ಅವರು ಪೂರ್ವಪಶ್ಚಿಮಗಳಿಗೂ ಉತ್ತರದಕ್ಷಿಣಗಳಿಗೂ ಹರಡಿಕೊಳ್ಳುವರು. ನಿನ್ನ ಮೂಲಕವೂ ನಿನ್ನ ಸಂತತಿಯವರ ಮೂಲಕವೂ ಭೂಮಿಯ ಮೇಲಿರುವ ಎಲ್ಲಾ ಕುಲಗಳವರು ಆಶೀರ್ವಾದ ಹೊಂದುವರು.


ನೀವು ಕೇಳಿದ ಸುವಾರ್ತೆಯ ಮೇಲೆ ನಿಮಗಿರುವ ನಂಬಿಕೆಯಲ್ಲಿ ದೃಢವಾಗಿ ನೆಲೆಗೊಂಡಿದ್ದು ಅದರಿಂದುಂಟಾಗುವ ನಿರೀಕ್ಷೆಯನ್ನು ಬಿಟ್ಟು ಹೋಗದಿದ್ದರೆ ಇದು ಸಾಧ್ಯ. ಈ ಸುವಾರ್ತೆಯನ್ನು ಪ್ರಪಂಚದ ಜನರಿಗೆಲ್ಲ ಸಾರಲಾಗಿದೆ. ಪೌಲನಾದ ನಾನು ಈ ಸುವಾರ್ತೆಯನ್ನು ಸಾರುವ ಸೇವಕನಾದೆನು.


ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸಿ ತಾನು ಆರಿಸಿಕೊಂಡ ಜನರನ್ನು ಭೂಮಿಯ ಕಟ್ಟಕಡೆಗಳಿಂದ ಒಟ್ಟುಗೂಡಿಸುವರು.


ಅನೇಕ ಜನರು ಪೂರ್ವ ಮತ್ತು ಪಶ್ಚಿಮ ದಿಕ್ಕುಗಳಿಂದ ಬರುತ್ತಾರೆ. ಅವರು ಪರಲೋಕರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂಗಡ ಕುಳಿತುಕೊಂಡು ಊಟಮಾಡುತ್ತಾರೆ.


ಇಗೋ, ಕಡೆಯವರಾಗಿರುವ ಕೆಲವರು ಮೊದಲಿನವರಾಗುವರು, ಮೊದಲಿನವರಾಗಿರುವ ಕೆಲವರು ಕಡೆಯವರಾಗುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು