Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:31 - ಪರಿಶುದ್ದ ಬೈಬಲ್‌

31 ಆ ಸಮಯದಲ್ಲಿ ಕೆಲವು ಫರಿಸಾಯರು ಯೇಸುವಿನ ಬಳಿಗೆ ಬಂದು, “ಇಲ್ಲಿಂದ ಹೋಗಿ ಅಡಗಿಕೊ! ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಯೇಸುವಿಗೆ, “ನೀನು ಇಲ್ಲಿಂದ ಹೊರಟು ಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅದೇ ಸಮಯಕ್ಕೆ ಸರಿಯಾಗಿ ಕೆಲವು ಮಂದಿ ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, “ಇಲ್ಲಿಂದ ಹೊರಟು ಹೋಗಿಬಿಡಿ, ಹೆರೋದನು ನಿಮ್ಮನ್ನು ಕೊಲ್ಲಬೇಕೆಂದಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಆತನಿಗೆ - ನೀನು ಇಲ್ಲಿಂದ ಹೊರಟುಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅದೇ ಸಮಯದಲ್ಲಿ ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು, “ನೀವು ಇಲ್ಲಿಂದ ಹೊರಟು ಹೋಗಿರಿ. ಹೆರೋದನು ನಿಮ್ಮನ್ನು ಕೊಲ್ಲಬೇಕೆಂದಿರುವನು,” ಎಂದು ಅವರಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತ್ಯಾಚ್ ಎಳಾರ್ ಉಲ್ಲೆ ಫಾರಿಜೆವ್ ಜೆಜುಕ್ಡೆ ಯೆಲೆ, ಅನಿ ತೆಕಾ “ತಿಯಾ ಹಿತ್ನಾ ಖೈ ತರ್ ಜಾ, ಹೆರೊದ್ ತುಕಾ ಜಿವಾನಿ ಮಾರುಕ್ ಬಗುಲಾ”, ಮನುನ್ ಸಾಂಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:31
9 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಹೆರೋದನು ಗಲಿಲಾಯದಲ್ಲಿ ಆಳುತ್ತಿದ್ದನು. ಜನರು ಯೇಸುವಿನ ಕುರಿತು ಹೇಳುತ್ತಿದ್ದ ಸಂಗತಿಗಳೆಲ್ಲ ಅವನಿಗೆ ತಿಳಿಯಿತು.


ಚಕ್ರವರ್ತಿಯಾದ ತಿಬೇರಿಯಸ್ ಸೀಸರನ ಆಳ್ವಿಕೆಯ ಹದಿನೈದನೇ ವರ್ಷ ಅದಾಗಿತ್ತು. ಆಗ, ಪೊಂತ್ಯ ಪಿಲಾತನು ಜುದೇಯ ಪ್ರಾಂತ್ಯಕ್ಕೂ ಹೆರೋದನು ಗಲಿಲಾಯಕ್ಕೂ ಹೆರೋದನ ಸಹೋದರನಾದ ಫಿಲಿಪ್ಪನು ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೂ ಲೂಸನ್ಯನು ಅಬಿಲೇನೆ ಪ್ರಾಂತ್ಯಕ್ಕೂ ಅಧಿಪತಿಯಾಗಿದ್ದರು.


ಈ ಸಮಯಕ್ಕೆ ಮೊದಲೇ ಹೆರೋದ್ಯಳ ನಿಮಿತ್ತವಾಗಿ ಹೆರೋದನು ಯೋಹಾನನನ್ನು ಸರಪಣಿಗಳಿಂದ ಬಂಧಿಸಿ, ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳು ಹೆರೋದನ ಸಹೋದರನಾದ ಫಿಲಿಪ್ಪನ ಹೆಂಡತಿ.


ಹೆರೋದನ ಹುಟ್ಟುಹಬ್ಬದ ದಿನದಂದು ಹೆರೋದ್ಯಳ ಮಗಳು ಹೆರೋದನ ಮತ್ತು ಅವನ ಅತಿಥಿಗಳ ಮುಂದೆ ನರ್ತಿಸಿದಳು. ಹೆರೋದನು ಅವಳನ್ನು ಬಹಳ ಮೆಚ್ಚಿಕೊಂಡನು.


ನಡೆಯುತ್ತಿದ್ದ ಎಲ್ಲಾ ಸಂಗತಿಗಳ ಬಗ್ಗೆ ರಾಜ್ಯಪಾಲ ಹೆರೋದನು ಕೇಳಿ ಗಲಿಬಿಲಿಗೊಂಡನು. ಏಕೆಂದರೆ, “ಸ್ನಾನಿಕ ಯೋಹಾನನೇ ಸತ್ತವರೊಳಗಿಂದ ಎದ್ದಿದ್ದಾನೆ” ಎಂದು ಕೆಲವರು ಹೇಳುತ್ತಿದ್ದರು.


ಯೇಸು ಹೆರೋದನ ಅಧಿಕಾರಕ್ಕೊಳಪಟ್ಟವನೆಂದು ಪಿಲಾತನಿಗೆ ತಿಳಿಯಿತು. ಆ ಸಮಯದಲ್ಲಿ ಹೆರೋದನು ಜೆರುಸಲೇಮಿನಲ್ಲಿದ್ದನು. ಆದ್ದರಿಂದ ಪಿಲಾತನು ಯೇಸುವನ್ನು ಅವನ ಬಳಿಗೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು