32 ಯೇಸು ಅವರಿಗೆ, “ನೀವು ಹೋಗಿ ಆ ನರಿಗೆ (ಹೆರೋದನಿಗೆ), ‘ಈ ದಿನ ಮತ್ತು ನಾಳೆ ನಾನು ಜನರನ್ನು ದೆವ್ವಗಳಿಂದ ಬಿಡಿಸುತ್ತೇನೆ ಮತ್ತು ರೋಗಿಗಳನ್ನು ಗುಣಪಡಿಸುವ ಕಾರ್ಯವನ್ನು ಪೂರ್ಣಗೊಳಿಸುತ್ತೇನೆ. ನಾಳಿದ್ದು, ನನ್ನ ಕಾರ್ಯವೆಲ್ಲಾ ಸಂಪೂರ್ಣ ಮುಕ್ತಾಯವಾಗುವುದು’ ಎಂದು ಹೇಳಿರಿ.
32 ಆತನು ಅವರಿಗೆ, “ನೀವು ಹೋಗಿ ‘ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಿಗಳನ್ನು ವಾಸಿಮಾಡುತ್ತಾ ಇದ್ದು, ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ’ ಎಂದು ಆ ನರಿಗೆ ಹೇಳಿರಿ.
32 ಅದಕ್ಕೆ ಯೇಸು, “ನೀವು ಹೋಗಿ ಆ ನರಿಗೆ ಹೀಗೆಂದು ತಿಳಿಸಿರಿ: ಇಂದು ಮತ್ತು ನಾಳೆ ದೆವ್ವಗಳನ್ನು ಬಿಡಿಸುತ್ತೇನೆ, ರೋಗಿಗಳನ್ನು ಗುಣಪಡಿಸುತ್ತೇನೆ, ಮೂರನೆಯ ದಿನ ನನ್ನ ಕಾರ್ಯಸಿದ್ಧಿಗೆ ಬರುವುದು.
32 ಆತನು ಅವರಿಗೆ - ನೀವು ಹೋಗಿ - ಇಗೋ ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಗಳನ್ನು ವಾಸಿಮಾಡುತ್ತಾ ಇದ್ದು ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ ಎಂದು ಆ ನರಿಗೆ ಹೇಳಿರಿ.
32 ಅದಕ್ಕೆ ಯೇಸು ಅವರಿಗೆ, “ಇಗೋ, ‘ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಓಡಿಸುತ್ತೇನೆ ಸ್ವಸ್ಥಮಾಡುತ್ತೇನೆ, ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ,’ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.
ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.
ಧರ್ಮಶಾಸ್ತ್ರವು ಮನುಷ್ಯರೊಳಗಿಂದ ಪ್ರಧಾನ ಯಾಜಕರನ್ನು ಆರಿಸುತ್ತದೆ. ಆರಿಸಲ್ಪಟ್ಟ ಈ ಜನರು ಮಾನವ ದೌರ್ಬಲ್ಯಗಳನ್ನು ಹೊಂದಿದವರಾಗಿದ್ದಾರೆ. ಆದರೆ ದೇವರು ಧರ್ಮಶಾಸ್ತ್ರದ ನಂತರ ಮಾಡಿದ ವಾಗ್ದಾನ ದೇವರ ಮಗನನ್ನು ಪ್ರಧಾನ ಯಾಜಕನನ್ನಾಗಿ ಮಾಡಿತು. ಆ ಮಗನು ಎಂದೆಂದಿಗೂ ಸರ್ವಸಂಪೂರ್ಣನಾಗಿ ಮಾಡಲ್ಪಟ್ಟಿದ್ದಾನೆ.
ಆದರೆ ಯೇಸು ಅವರಿಗೆ, “ನಾನು ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದ್ದೇನೆ. ನೀವು ಆ ಕಾರ್ಯಗಳನ್ನು ನೋಡಿದ್ದೀರಿ. ಆ ಒಳ್ಳೆಯ ಕಾರ್ಯಗಳಲ್ಲಿ ಯಾವುದರ ನಿಮಿತ್ತ ನೀವು ನನ್ನನ್ನು ಕೊಲ್ಲಬೇಕೆಂದಿದ್ದೀರಿ?” ಎಂದು ಹೇಳಿದನು.
ಯೇಸು ಪ್ರಸಿದ್ಧನಾಗಿದ್ದುದರಿಂದ ರಾಜನಾದ ಹೆರೋದನಿಗೆ ಯೇಸುವಿನ ವಿಷಯ ತಿಳಿಯಿತು. ಕೆಲವು ಜನರು, “ಇವನು (ಯೇಸು) ಸ್ನಾನಿಕನಾದ ಯೋಹಾನ. ಇವನು ಮತ್ತೆ ಬದುಕಿಬಂದಿದ್ದಾನೆ. ಆದಕಾರಣವೇ ಈ ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದರು.