ಲೂಕ 13:7 - ಪರಿಶುದ್ದ ಬೈಬಲ್7 ಅವನು ತನ್ನ ತೋಟವನ್ನು ನೋಡಿಕೊಳ್ಳುವುದಕ್ಕಾಗಿ ಒಬ್ಬ ತೋಟಗಾರನನ್ನೂ ನೇಮಿಸಿದ್ದನು. ಅವನು ತನ್ನ ಆ ಸೇವಕನಿಗೆ, ‘ಈ ಮರವು ಹಣ್ಣು ಬಿಡಬಹುದೆಂದು ನಾನು ಮೂರು ವರ್ಷದಿಂದ ಕಾಯುತ್ತಿದ್ದೇನೆ. ಆದರೆ ಇದು ಹಣ್ಣನ್ನು ಬಿಡಲೇ ಇಲ್ಲ. ಇದನ್ನು ಕತ್ತರಿಸಿಹಾಕು! ಇದು ಭೂಮಿಯ ಸಾರವನ್ನೇಕೆ ವ್ಯರ್ಥಗೊಳಿಸಬೇಕು?’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಬಳಿಕ ಅವನು ತೋಟಗಾರನಿಗೆ, ‘ನೋಡು, ನಾನು ಮೂರು ವರ್ಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತೋಟಗಾರನನ್ನು ಕರೆದು, ‘ನೋಡು, ಮೂರು ವರ್ಷಗಳಿಂದ ಈ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಇದ್ದೇನೆ. ಒಂದಾದರೂ ಕಂಡುಬರಲಿಲ್ಲ. ಇನ್ನು ಇದನ್ನು ಕಡಿದುಹಾಕು. ಭೂಮಿಗೆ ಭಾರವಾಗಿ ಅದರ ಸಾರವನ್ನು ಇದೇಕೆ ವ್ಯರ್ಥ ಮಾಡಬೇಕು?’ ಎಂದು ಹೇಳಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಬಳಿಕ ಅವನು ತೋಟ ಮಾಡುವವನಿಗೆ - ನೋಡು, ನಾನು ಮೂರು ವರುಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು; ಇದರಿಂದ ಭೂವಿುಯೂ ಯಾಕೆ ಬಂಜೆಯಾಗಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಅವನು ತನ್ನ ದ್ರಾಕ್ಷಿಯ ತೋಟ ಮಾಡುವವನಿಗೆ, ‘ನೋಡು, ಮೂರು ವರ್ಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕುತ್ತಾ ಬಂದಿದ್ದೇನೆ, ಆದರೆ ಏನೂ ಸಿಕ್ಕಲಿಲ್ಲ. ಇದನ್ನು ಕಡಿದುಹಾಕು! ಇದು ಏಕೆ ನೆಲವನ್ನು ಕೆಡಿಸಬೇಕು?’ ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತಸೆ ಮನುನ್ ತೆನಿ ಅಪ್ನಾಚ್ಯಾ ಮಳ್ಯಾತ್ ಕಾಮ್ ಕರ್‍ತಲ್ಯಾಕ್ “ಬಗ್, ತಿನ್ ವರ್ಸಾಕ್ನಾ ಮಿಯಾ ಹ್ಯಾ ಝಾಡಾಚಿ ಫಳಾ ಹುಡ್ಕುಕ್ ಯೆವ್ಲಾ, ಖರೆ ಮಾಕಾ ಎಕ್ ಸೈತ್ ಅಂಜುರಾಚೆ ಫಳ್ ಗಾವಿನಾ ಹೊಲಾ. ಜಿಮ್ನಿಕ್ ವಜ್ಜೆ ಹೊವ್ನ್ ಕಶ್ಯಾಕ್ ರ್‍ಹಾತಲೆ ತೆ,ತೊಡುನ್ ಟಾಕ್!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |