Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:22 - ಪರಿಶುದ್ದ ಬೈಬಲ್‌

22 “ತರುವಾಯ ಆ ಸೇವಕನು ಬಂದು, ‘ಸ್ವಾಮೀ, ನೀನು ಹೇಳಿದಂತೆಯೇ ಮಾಡಿದೆನು. ಆದರೆ ನಮ್ಮಲ್ಲಿ ಇನ್ನೂ ಹೆಚ್ಚು ಜನರಿಗೆ ಸ್ಥಳವಿದೆ.’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಬಳಿಕ ಆ ಆಳು, ‘ಅಯ್ಯಾ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾಯಿತು. ಆದರೂ ಇನ್ನೂ ಸ್ಥಳ ಉಳಿದಿದೆ’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇದನ್ನು ಕೇಳಿ ಯಜಮಾನನಿಗೆ ರೋಷಬಂದಿತು. ಅವನು ಸೇವಕನಿಗೆ, ‘ಪಟ್ಟಣದ ಹಾದಿಬೀದಿಗಳಿಗೂ ಸಂದುಗೊಂದುಗಳಿಗೂ ಹೋಗಿ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆದುಕೊಂಡು ಬಾ,’ ಎಂದು ಆಜ್ಞೆಮಾಡಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬಳಿಕ ಆ ಆಳು - ಅಯ್ಯಾ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾಯಿತು; ಆದರೂ ಇನ್ನೂ ಸ್ಥಳವದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಆ ಸೇವಕನು, ‘ಸ್ವಾಮಿ, ನೀನು ಅಪ್ಪಣೆ ಕೊಟ್ಟಂತೆ ಮಾಡಿದ್ದಾಯಿತು, ಆದರೂ ಸ್ಥಳವಿದೆ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತನ್ನಾ ಆಳಾನ್ ತಾಬೊಡ್ತೊಬ್, “ಧನಿಯಾ, ತುಮಿ ಹುಕುಮ್ ದಿಲ್ಲ್ಯಾ ಸರ್ಕೆಚ್ ಮಿಯಾ ಕರ್‍ಲೊ, ಖರೆ ತುಮ್ಚ್ಯಾ ಘರಾತ್ ಅನಿ ಲೈ ಜಾಗೊ ಹುರಲ್ಲೊ ಹಾಯ್”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:22
11 ತಿಳಿವುಗಳ ಹೋಲಿಕೆ  

ನನ್ನ ತಂದೆಯ ಮನೆಯಲ್ಲಿ ಅನೇಕ ಕೋಣೆಗಳಿವೆ. ಅದು ಸತ್ಯವಲ್ಲದಿದ್ದರೆ, ನಾನು ನಿಮಗೆ ಹೇಳುತ್ತಿರಲಿಲ್ಲ. ನಾನು ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಲು ಅಲ್ಲಿಗೆ ಹೋಗುತ್ತಿದ್ದೇನೆ.


ನಮ್ಮ ಪಾಪಗಳ ನಿವಾರಣೆಗೂ ಎಲ್ಲಾ ಜನರ ಪಾಪಗಳ ನಿವಾರಣೆಗೂ ಯೇಸುವೇ ಮಾರ್ಗವಾಗಿದ್ದಾನೆ.


ದೇವರ ಸರ್ವಸಂಪೂರ್ಣತೆಯು ಕ್ರಿಸ್ತನಲ್ಲಿ ನೆಲೆಗೊಂಡಿದೆ. (ಕ್ರಿಸ್ತನು ಈ ಲೋಕದಲ್ಲಿದ್ದಾಗಲೂ ಸಹ ನೆಲೆಗೊಂಡಿತ್ತು.)


ದೇವಜನರಲ್ಲಿ ನಾನೇ ಅತ್ಯಲ್ಪನು. ಕ್ರಿಸ್ತನ ಐಶ್ವರ್ಯವನ್ನು ಕುರಿತಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂದು ದೇವರು ನನಗೆ ಈ ಕೃಪಾವರವನ್ನು ಕೊಟ್ಟನು. ಆ ಐಶ್ವರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ.


ಇಸ್ರೇಲೇ, ಯೆಹೋವನಲ್ಲಿ ಭರವಸವಿಡು. ಆತನಲ್ಲಿ ಮಾತ್ರ ನಿಜವಾದ ಪ್ರೀತಿಯಿದೆ. ಆತನು ನಮ್ಮನ್ನು ಯಾವಾಗಲೂ ರಕ್ಷಿಸುವನು.


ಯೆಹೋವನು ನೀತಿವಂತನಾಗಿದ್ದಾನೆ. ಕುಗ್ಗಿಹೋದವರಿಗೆ ಆತನು ನ್ಯಾಯ ದೊರಕಿಸುವನು.


“ಆದ್ದರಿಂದ ಆ ಸೇವಕನು ಹಿಂತಿರುಗಿ ಹೋಗಿ ಅವರು ಹೇಳಿದ್ದನ್ನೆಲ್ಲ ತನ್ನ ಯಜಮಾನನಿಗೆ ತಿಳಿಸಿದನು. ಆಗ ಯಜಮಾನನು ಬಹಳ ಕೋಪಗೊಂಡು ಆ ಸೇವಕನಿಗೆ, ‘ಈ ಊರಿನ ಬೀದಿಗಳಿಗೂ ಸಂದಿಗಳಿಗೂ ಬೇಗನೆ ಹೋಗಿ ಬಡವರನ್ನೂ ಅಂಗವಿಕಲರನ್ನೂ ಕುರುಡರನ್ನೂ ಕುಂಟರನ್ನೂ ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು.


ಆಗ ಯಜಮಾನನು ಆ ಸೇವಕನಿಗೆ, ‘ಹೆದ್ದಾರಿಗಳಿಗೂ ರಸ್ತೆಗಳಿಗೂ ಹೋಗಿ, ಅಲ್ಲಿರುವ ಜನರನ್ನೆಲ್ಲಾ ಆಮಂತ್ರಿಸು. ನನ್ನ ಮನೆಯು ಜನರಿಂದ ತುಂಬಿಹೋಗಬೇಕೆಂಬುದೇ ನನ್ನ ಅಪೇಕ್ಷೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು