Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:27 - ಪರಿಶುದ್ದ ಬೈಬಲ್‌

27 ನನ್ನನ್ನು ಹಿಂಬಾಲಿಸುವವನು ತನಗೆ ಕೊಡಲ್ಪಟ್ಟಿರುವ ಶಿಲುಬೆಯನ್ನು (ಶ್ರಮೆ) ಹೊತ್ತುಕೊಂಡು ಹೋಗದಿದ್ದರೆ, ಅವನು ನನ್ನ ಶಿಷ್ಯನಾಗಿರಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ತನ್ನ ಶಿಲುಬೆಯನ್ನು ಹೊತ್ತು ನನ್ನ ಹಿಂದೆ ಬರದವನು ನನ್ನ ಶಿಷ್ಯನಾಗಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬಂದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯಾರಾದರೂ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸದವರು ನನ್ನ ಶಿಷ್ಯರಾಗಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಜೆ ಕೊನ್ ಅಪ್ನಾಚೊ ಕುರಿಸ್ ವಾವುನ್ ಘೆವ್ನ್ ಮಾಜ್ಯಾ ಫಾಟ್ನಾ ಯೆಯ್ನಾ, ತೊ ಮಾಜೊ ಶಿಸ್ ಹೊವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:27
12 ತಿಳಿವುಗಳ ಹೋಲಿಕೆ  

ಯಾವನಾದರೂ ನನ್ನನ್ನು ಹಿಂಬಾಲಿಸುವಾಗ ಅವನಿಗೆ ಕೊಡುವಂಥ ಶಿಲುಬೆಯನ್ನು (ಸಂಕಟವನ್ನು) ಅಂಗೀಕರಿಸದಿದ್ದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ.


ಯೇಸು ಆ ಮನುಷ್ಯನನ್ನು ಪ್ರೀತಿಯಿಂದ ದೃಷ್ಟಿಸಿನೋಡಿ, “ನೀನು ಮಾಡಬೇಕಾದ ಕಾರ್ಯವೊಂದಿದೆ. ಹೋಗಿ, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ಇರುವುದು. ನಂತರ ಬಂದು, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ಕ್ರಿಸ್ತ ಯೇಸುವಿನಲ್ಲಿ ದೇವರ ಚಿತ್ತಕ್ಕನುಸಾರವಾಗಿ ಜೀವಿಸುವ ಪ್ರತಿಯೊಬ್ಬರೂ ಹಿಂಸೆಗೆ ಒಳಗಾಗುವರು.


ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.


ಆದರೆ ಆ ಮನುಷ್ಯನು ಬೋಧನೆಯನ್ನು ತನ್ನ ಜೀವಿತದಲ್ಲಿ ಬೇರೂರಿಸಿಕೊಳ್ಳುವುದಿಲ್ಲ. ಅವನು ಆ ಬೋಧನೆಯನ್ನು ಸ್ವಲ್ಪಕಾಲ ಮಾತ್ರ ಅನುಸರಿಸುವನು. ಆ ಬೋಧನೆಯನ್ನು ಅಂಗೀಕರಿಸಿದ್ದರಿಂದ ತನಗೆ ಕಷ್ಟವಾಗಲಿ ಹಿಂಸೆಯಾಗಲಿ ಬಂದಾಗ ಅದನ್ನು ಬೇಗನೆ ಬಿಟ್ಟುಬಿಡುವನು.


ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು.


ಯೇಸು ತನ್ನ ಸ್ವಂತ ಶಿಲುಬೆಯನ್ನು ಹೊತ್ತುಕೊಂಡು, “ಕಪಾಲ” ಎಂಬ ಸ್ಥಳಕ್ಕೆ ಹೊರಟನು. (ಯೆಹೂದ್ಯರ ಭಾಷೆಯಲ್ಲಿ ಈ ಸ್ಥಳದ ಹೆಸರು “ಗೊಲ್ಗೊಥಾ.”)


ಆಗ ಸಿರೇನ್ ಪಟ್ಟಣದ ಸಿಮೋನ ಎಂಬವನು ಹೊಲದಿಂದ ಬರುತ್ತಿದ್ದನು. ಅವನು ಅಲೆಕ್ಸಾಂಡರ್ ಮತ್ತು ರೂಫಸ್ ಎಂಬವರ ತಂದೆ. ಸೈನಿಕರು ಯೇಸುವಿನ ಶಿಲುಬೆಯನ್ನು ಹೊರುವಂತೆ ಸಿಮೋನನನ್ನು ಬಲವಂತ ಮಾಡಿದರು.


“ನೀನು ಒಂದು ಕಟ್ಟಡವನ್ನು ಕಟ್ಟಬೇಕೆಂದಿದ್ದರೆ ಮೊದಲು ನೀನು ಕುಳಿತುಕೊಂಡು ಅದಕ್ಕೆ ಎಷ್ಟು ಖರ್ಚಾಗುತ್ತದೆ ಎಂಬುದನ್ನು ಆಲೋಚಿಸು. ಆ ಕಟ್ಟಡವನ್ನು ಪೂರೈಸಲು ನಿನ್ನಲ್ಲಿ ಸಾಕಷ್ಟು ಹಣವಿದೆಯೋ ಎಂದು ಲೆಕ್ಕಹಾಕಿ ನೋಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು