Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:3 - ಪರಿಶುದ್ದ ಬೈಬಲ್‌

3 ಯೇಸು ಫರಿಸಾಯರಿಗೂ ಧರ್ಮೋಪದೇಶಕರಿಗೂ, “ಸಬ್ಬತ್‌ದಿನದಲ್ಲಿ ವಾಸಿಮಾಡುವುದು ಸರಿಯೋ? ತಪ್ಪೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಸರಿಯೋ ಅಥವಾ ಸರಿಯಲ್ಲವೋ?” ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಸಬ್ಬತ್‍ದಿನ ಗುಣಪಡಿಸುವುದು ಸರಿಯೋ ತಪ್ಪೋ?” ಎಂದು ಯೇಸು ಫರಿಸಾಯರನ್ನೂ ಶಾಸ್ತ್ರಜ್ಞರನ್ನೂ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸಬ್ಬತ್‍ದಿನದಲ್ಲಿ ಸ್ವಸ್ಥಮಾಡುವದು ಸರಿಯೋ? ಸರಿಯಲ್ಲವೋ ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೇಸು ನಿಯಮ ಪಂಡಿತರಿಗೂ ಫರಿಸಾಯರಿಗೂ, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಮೋಶೆಯ ನಿಯಮದ ಪ್ರಕಾರವೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ಜೆಜುನ್ ಖಾಯ್ದೆ ಶಿಕ್ವುತಲ್ಯಾಕ್ನಿ, ಅನಿ ಫಾರಿಜೆವಾಕ್ನಿ “ಅಮ್ಚೊ ಖಾಯ್ದೊ ಸಬ್ಬತಾಚ್ಯಾ ದಿಸಿ ಗುನ್ ಕರುಕ್ ಪರ್ವಾನ್ಗಿ ದಿತಾ ಕಾಯ್, ನಾ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:3
10 ತಿಳಿವುಗಳ ಹೋಲಿಕೆ  

ಆ ಸಭಾಮಂದಿರದಲ್ಲಿ ಒಬ್ಬನ ಕೈ ಊನವಾಗಿತ್ತು. ಯೆಹೂದ್ಯರಲ್ಲಿ ಕೆಲವರು ಯೇಸುವಿನ ಮೇಲೆ ತಪ್ಪು ಹೊರಿಸುವುದಕ್ಕಾಗಿ ಕಾರಣ ಹುಡುಕುತ್ತಿದ್ದರು. ಆದ್ದರಿಂದ ಅವರು ಯೇಸುವಿಗೆ “ಸಬ್ಬತ್‌ದಿನದಲ್ಲಿ ಗುಣಪಡಿಸುವುದು ಸರಿಯೇ?” ಎಂದು ಕೇಳಿದರು.


ಆಗ ಯೇಸು ಅವರಿಗೆ, “ಸಬ್ಬತ್‌ದಿನದಲ್ಲಿ ಯಾವ ಕಾರ್ಯವನ್ನು ಮಾಡುವುದು ಸರಿ? ಒಳ್ಳೆಯ ಕಾರ್ಯವನ್ನೋ ಅಥವಾ ಕೆಟ್ಟಕಾರ್ಯವನ್ನೋ? ಜೀವವನ್ನು ಉಳಿಸುವುದೋ? ಅಥವಾ ನಾಶಮಾಡುವುದೋ?” ಎಂದು ಕೇಳಿದನು.


ನಂತರ ಯೇಸು ಜನರಿಗೆ, “ಸಬ್ಬತ್‌ದಿನದಂದು ಯಾವ ಕಾರ್ಯಗಳನ್ನು ಮಾಡಬೇಕು? ಒಳ್ಳೆಯ ಕಾರ್ಯವನ್ನೇ? ಕೆಟ್ಟಕಾರ್ಯವನ್ನೇ? ಒಂದು ಜೀವವನ್ನು ರಕ್ಷಿಸಬೇಕೇ? ಅಥವಾ ನಾಶಪಡಿಸಬೇಕೇ?” ಎಂದು ಕೇಳಿದನು. ಆಗ ಅವರು ಏನೂ ಉತ್ತರ ಕೊಡಲಾರದೆ ಮೌನವಾಗಿದ್ದರು.


ಒಬ್ಬ ವ್ಯಕ್ತಿಯು ಮೋಶೆಯ ಕಟ್ಟಳೆಗೆ ವಿಧೇಯನಾಗುವುದಕ್ಕಾಗಿ ಸಬ್ಬತ್‌ದಿನದಂದು ಸುನ್ನತಿ ಮಾಡಬಹುದು ಎಂಬುದನ್ನು ಇದು ತೋರಿಸುತ್ತದೆ. ಹೀಗಿರುವಲ್ಲಿ, ಸಬ್ಬತ್‌ದಿನದಂದು ಒಬ್ಬನ ಇಡೀ ದೇಹವನ್ನು ಗುಣಪಡಿಸಿದ್ದಕ್ಕೋಸ್ಕರ ನೀವು ಏಕೆ ಕೋಪಗೊಂಡಿದ್ದೀರಿ?


ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವೀಣನಾಗಿದ್ದ ಫರಿಸಾಯನೊಬ್ಬನು ಯೇಸುವನ್ನು ಪರೀಕ್ಷಿಸಲು,


ಇದನ್ನು ಕಂಡ ಫರಿಸಾಯರು ಯೇಸುವಿಗೆ, “ನೋಡು! ಸಬ್ಬತ್‌ದಿನದಂದು ಮಾಡತಕ್ಕ ಕಾರ್ಯಗಳನ್ನು ಕುರಿತು ಯೆಹೂದ್ಯರ ಧರ್ಮಶಾಸ್ತ್ರದಲ್ಲಿ ವಿಧಿಸಿರುವ ನಿಯಮಗಳಿಗೆ ವಿರುದ್ಧವಾಗಿ ನಿನ್ನ ಶಿಷ್ಯರು ಮಾಡುತ್ತಿದ್ದಾರೆ” ಎಂದು ಹೇಳಿದರು.


ಯೇಸುವಿನ ಎದುರಿನಲ್ಲಿಯೇ ಜಲೋದರ ರೋಗವುಳ್ಳ ಒಬ್ಬನನ್ನು ಇರಿಸಿದ್ದರು.


ಅವರು ಉತ್ತರಕೊಡಲಿಲ್ಲ. ಆಗ ಯೇಸು ಆ ಮನುಷ್ಯನ ಕೈಮುಟ್ಟಿ ವಾಸಿಮಾಡಿ ಅವನನ್ನು ಕಳುಹಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು