ಲೂಕ 15:2 - ಪರಿಶುದ್ದ ಬೈಬಲ್2 ಆಗ ಫರಿಸಾಯರು ಮತ್ತು ಧರ್ಮೋಪದೇಶಕರು, “ನೋಡಿರಿ! ಈ ಮನುಷ್ಯನು (ಯೇಸು) ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರ ಜೊತೆಯಲ್ಲಿ ಊಟಮಾಡುತ್ತಾನೆ!” ಎಂದು ದೂರು ಹೇಳತೊಡಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಫರಿಸಾಯರೂ ಶಾಸ್ತ್ರಿಗಳೂ, “ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ” ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,” ಎಂದು ಗೊಣಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆತನ ಬಳಿಗೆ ಬರುತ್ತಾ ಇರಲು ಫರಿಸಾಯರೂ ಶಾಸ್ತ್ರಿಗಳೂ - ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ ಎಂದು ಹೇಳಿಕೊಂಡು ಗುಣುಗುಟ್ಟುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಫರಿಸಾಯರು ಮತ್ತು ನಿಯಮ ಬೋಧಕರು, “ಈತನು ಪಾಪಿಗಳನ್ನು ಸ್ವೀಕರಿಸಿ ಅವರೊಂದಿಗೆ ಊಟಮಾಡುತ್ತಾನೆ,” ಎಂದು ಗೊಣಗುಟ್ಟಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತನ್ನಾ ಫಾರಿಜೆವಾ ಅನಿ ಖಾಯ್ದೆ ಶಿಕ್ವುತಲಿ ಲೊಕಾ, ಹೆ ಬಗುನ್ “ಹ್ಯೊ ಮಾನುಸ್ ಪಾಪಿ ಲೊಕಾಂಚ್ಯಾ ವಾಂಗ್ಡಾ ರ್‍ಹಾತಾ, ಅನಿ ತೆಂಚ್ಯಾ ವಾಂಗ್ಡಾ ಜೆವಾನ್‍ಬಿ ಕರ್‍ತಾ” ಮನುನ್ ಬೊಲುಲಾಗಲ್ಲಿ. ಅಧ್ಯಾಯವನ್ನು ನೋಡಿ |
ನಡೆದ ಸಂಗತಿ ಏನೆಂದರೆ: ಪೇತ್ರನು ಮೊದಲು ಅಂತಿಯೋಕ್ಯಕ್ಕೆ ಬಂದಾಗ ಅವನು ಯೆಹೂದ್ಯರಲ್ಲದವರೊಂದಿಗೆ ಊಟಮಾಡಿದನು ಮತ್ತು ಅನ್ಯೋನ್ಯತೆಯಿಂದಿದ್ದನು. ಆ ಬಳಿಕ ಯಾಕೋಬನಿಂದ ಕಳುಹಿಸಲ್ಪಟ್ಟಿದ್ದ ಕೆಲವು ಯೆಹೂದ್ಯರು ಬಂದರು. ಆಗ, ಪೇತ್ರನು ಯೆಹೂದ್ಯರಲ್ಲದವರೊಂದಿಗೆ ಊಟಮಾಡುವುದನ್ನು ನಿಲ್ಲಿಸಿದನು. ಪೇತ್ರನು ತನ್ನನ್ನು ಯೆಹೂದ್ಯರಲ್ಲದವರಿಂದ ಬೇರ್ಪಡಿಸಿಕೊಂಡನು. ಯೆಹೂದ್ಯರಲ್ಲದವರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಂಬಿಕೊಂಡಿದ್ದ ಯೆಹೂದ್ಯರಿಗೆ ಅವನು ಹೆದರಿಕೊಂಡನು.