Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:21 - ಪರಿಶುದ್ದ ಬೈಬಲ್‌

21 ಮಗನು ತನ್ನ ತಂದೆಗೆ, ‘ಅಪ್ಪಾ, ನಾನು ದೇವರಿಗೆ ವಿರೋಧವಾಗಿಯೂ ನಿನಗೆ ವಿರೋಧವಾಗಿಯೂ ಪಾಪಮಾಡಿದ್ದೇನೆ. ನಿನ್ನ ಮಗನೆಂದು ಕರೆಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೂ ಮಗನು ಅವನಿಗೆ, ‘ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆದರೂ ಮಗನು, ‘ಅಪ್ಪಾ, ದೇವರಿಗೂ ನಿಮಗೂ ವಿರುದ್ಧವಾಗಿ ಪಾಪಮಾಡಿದ್ದೇನೆ; ನಿಮ್ಮ ಮಗನೆನಿಸಿಕೊಳ್ಳುವ ಯೋಗ್ಯತೆಯೂ ನನಗಿಲ್ಲ’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದರೂ ಮಗನು ಅವನಿಗೆ - ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಆದರೂ ಮಗನು ತಂದೆಗೆ, ‘ಅಪ್ಪಾ, ನಾನು ಪರಲೋಕಕ್ಕೆ ವಿರೋಧವಾಗಿಯೂ ನಿಮ್ಮ ಮುಂದೆಯೂ ಪಾಪಮಾಡಿದ್ದೇನೆ. ಇನ್ನೆಂದಿಗೂ ನಾನು ನಿಮ್ಮ ಮಗನೆಂದು ಕರೆಯಿಸಿಕೊಳ್ಳಲು ಯೋಗ್ಯನಲ್ಲ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತನ್ನಾ ಲೆಕಾನ್ “ಬಾಬಾ, ದೆವಾಚ್ಯಾ, ಅನಿ ತುಜ್ಯಾ ವಾಟೆಕ್ ಅಡ್ವೆ ಜಾವ್ನ್, ಮಿಯಾ ಪಾಪ್ ಕರ್‍ಲೊ,ತುಜೊ ಲೆಕ್ ಮನುನ್ ಘೆತಲಿ ಮರ್‍ಯಾದ್ ಮಾಕಾ ನಾ”, ಮಟ್ಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:21
10 ತಿಳಿವುಗಳ ಹೋಲಿಕೆ  

ನಿನ್ನ ದೃಷ್ಟಿಗೆ ಕೆಟ್ಟದ್ದಾಗಿದ್ದನ್ನೇ ಮಾಡಿದ್ದೇನೆ. ಹೌದು, ನಾನು ಪಾಪ ಮಾಡಿದ್ದು ನಿನಗೇ. ನಾನು ತಪ್ಪಿತಸ್ಥನೆಂತಲೂ ನೀನು ನೀತಿವಂತನೆಂತಲೂ ಜನರಿಗೆ ಗೊತ್ತಾಗಲೆಂದೇ ಇವುಗಳನ್ನು ಅರಿಕೆಮಾಡಿಕೊಳ್ಳುತ್ತಿದ್ದೇನೆ. ನಿನ್ನ ತೀರ್ಪುಗಳು ನ್ಯಾಯಬದ್ಧವಾಗಿವೆ.


‘ನೀವು ನಿಮ್ಮ ಪಾಪವನ್ನು ಅರಿತುಕೊಂಡರೆ ಸಾಕು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧ ತಿರುಗಿದಿರಿ, ಅದೇ ನಿಮ್ಮ ಪಾಪ. ನೀವು ಬೇರೆ ರಾಷ್ಟ್ರದವರ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ಪ್ರತಿಯೊಂದು ಹಸಿರು ಮರದ ಕೆಳಗೆ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ನನ್ನ ಆಜ್ಞೆಯನ್ನು ಪರಿಪಾಲಿಸಲಿಲ್ಲ’” ಇದು ಯೆಹೋವನ ನುಡಿಯಾಗಿತ್ತು.


ಹೀಗೆ ನಿಮ್ಮ ಸಹೋದರ ಸಹೋದರಿಯರಿಗೆ ವಿರೋಧವಾಗಿ ಪಾಪ ಮಾಡುವಾಗ ಮತ್ತು ಅವರು ತಪ್ಪೆಂದು ಭಾವಿಸುವ ಕಾರ್ಯಗಳನ್ನು ಮಾಡುವಂತೆ ಅವರನ್ನು ಪ್ರೋತ್ಸಾಹಿಸಿ ಅವರಿಗೆ ಕೇಡನ್ನು ಉಂಟುಮಾಡುವಾಗ ನೀವು ಕ್ರಿಸ್ತನಿಗೆ ವಿರೋಧವಾಗಿಯೂ ಪಾಪ ಮಾಡುವವರಾಗಿದ್ದೀರಿ.


ದೇವರು ನಿಮ್ಮ ವಿಷಯದಲ್ಲಿ ಬಹು ಕನಿಕರ ಉಳ್ಳವನಾಗಿದ್ದಾನೆ; ತಾಳ್ಮೆ ಉಳ್ಳವನಾಗಿದ್ದಾನೆ. ನೀವು ಮಾರ್ಪಾಟಾಗಬೇಕೆಂದು ದೇವರು ನಿಮಗಾಗಿ ಕಾದುಕೊಂಡಿದ್ದಾನೆ. ಆದರೆ ನೀವು ಆತನ ಕರುಣೆಯ ಬಗ್ಗೆ ಆಲೋಚಿಸುವುದೇ ಇಲ್ಲ. ನೀವು ನಿಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳಬೇಕಾಗುತ್ತದೆಯೆಂದು ದೇವರ ಕನಿಕರವನ್ನು ಅರ್ಥಮಾಡಿಕೊಳ್ಳದೆ ಇದ್ದೀರಿ.


ನಿನ್ನ ಸೇವಕನಾದ ನನಗೆ ತೀರ್ಪುಮಾಡಬೇಡ. ನನ್ನ ಇಡೀ ಜೀವಮಾನದಲ್ಲಿ ನಿರಪರಾಧಿಯೆಂಬ ತೀರ್ಪನ್ನು ಹೊಂದಲು ನನಗೆ ಸಾಧ್ಯವೇ ಇಲ್ಲ.


ಹೀಗಿರಲು, ನಿನ್ನ ಕಾರ್ಯಗಳನ್ನೆಲ್ಲಾ ನಾನು ಕ್ಷಮಿಸುವಾಗ, ನೀನು ಅವುಗಳನ್ನು ಜ್ಞಾಪಿಸಿಕೊಂಡು ನಾಚಿಕೆಪಡುವೆ. ಅಹಂಕಾರದಿಂದ ಮಾತನಾಡಲು ಮತ್ತೊಮ್ಮೆ ಬಾಯಿ ತೆರೆಯಲಾಗದಂತೆ ನೀನು ಬಹಳವಾಗಿ ಅವಮಾನಿತಳಾಗುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ಬಳಿಕ ಅವನು ಜನರ ಮುಂದೆ ನಿಂತುಕೊಂಡು, ‘ನಾನು ಪಾಪಮಾಡಿದೆನು; ಒಳ್ಳೆಯದನ್ನು ಕೆಟ್ಟದ್ದನ್ನಾಗಿ ಮಾಡಿದೆನು. ಆದರೆ ದೇವರು ಅದಕ್ಕೆ ತಕ್ಕಂತೆ ನನ್ನನ್ನು ದಂಡಿಸಲಿಲ್ಲ!


ಅಂತೆಯೇ ಅವನು ಹೊರಟು ತನ್ನ ತಂದೆಯ ಬಳಿಗೆ ಹೋದನು. “ಮಗನು ಇನ್ನೂ ಬಹುದೂರದಲ್ಲಿ ಬರುತ್ತಿರುವಾಗಲೇ ತಂದೆಯು ಅವನನ್ನು ಗುರುತಿಸಿ ಕನಿಕರದಿಂದ ಅವನ ಬಳಿಗೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು.


“ಆದರೆ ತಂದೆಯು ತನ್ನ ಸೇವಕರಿಗೆ, ‘ತ್ವರೆಮಾಡಿರಿ! ಉತ್ತಮವಾದ ಉಡುಪುಗಳನ್ನು ತಂದು ಇವನಿಗೆ ತೊಡಿಸಿರಿ. ಇವನ ಬೆರಳಿಗೆ ಉಂಗುರವನ್ನು ಹಾಕಿರಿ. ಪಾದಗಳಿಗೆ ಒಳ್ಳೆಯ ಪಾದರಕ್ಷೆಗಳನ್ನು ತೊಡಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು