Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:22 - ಪರಿಶುದ್ದ ಬೈಬಲ್‌

22 “ಆದರೆ ತಂದೆಯು ತನ್ನ ಸೇವಕರಿಗೆ, ‘ತ್ವರೆಮಾಡಿರಿ! ಉತ್ತಮವಾದ ಉಡುಪುಗಳನ್ನು ತಂದು ಇವನಿಗೆ ತೊಡಿಸಿರಿ. ಇವನ ಬೆರಳಿಗೆ ಉಂಗುರವನ್ನು ಹಾಕಿರಿ. ಪಾದಗಳಿಗೆ ಒಳ್ಳೆಯ ಪಾದರಕ್ಷೆಗಳನ್ನು ತೊಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ತಂದೆಯಾದರೋ ಆಳುಗಳನ್ನು ಕರೆದು, 'ಅತ್ಯುತ್ತಮವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಬೆರಳಿಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಪಾದರಕ್ಷೆಯನ್ನು ಮೆಟ್ಟಿಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ತಂದೆಯು ತನ್ನ ಆಳುಗಳಿಗೆ - ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನು ಇಡಿರಿ; ಕಾಲಿಗೆ ಜೋಡು ಮೆಡಿಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಆದರೆ ತಂದೆಯು ತನ್ನ ಸೇವಕರಿಗೆ, ‘ಶ್ರೇಷ್ಠವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಇವನ ಬೆರಳಿಗೆ ಉಂಗುರವನ್ನು ತೊಡಿಸಿರಿ, ಪಾದಗಳಿಗೆ ಪಾದರಕ್ಷೆಗಳನ್ನೂ ಮೆಟ್ಟಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಖರೆ ಬಾಬಾನ್ ಆಳಾಕ್ನಿ ಬಲ್ವುನ್ “ಲಗ್ಗುನಾ, ಜಾವ್ನ್ ಬರ್‍ಯಾತ್ಲೆ ಬರೆ ಕಪ್ಡೆ ಹಾನಾ ಅನಿ ತೆಕಾ ನೆಸ್ವಾ. ಬೊಟಾಕ್ ಮುದ್ದಿ ಘಾಲಾ ಅನಿ ತೆಚ್ಯಾ ಪಾಯಾತ್ನಿ ಹೊನಾಯಾ ಘಾಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:22
30 ತಿಳಿವುಗಳ ಹೋಲಿಕೆ  

ಆ ಆತ್ಮಗಳಲ್ಲಿ ಪ್ರತಿಯೊಂದಕ್ಕೂ ಒಂದೊಂದು ಬಿಳಿ ನಿಲುವಂಗಿಯನ್ನು ಕೊಡಲಾಯಿತು. ಇನ್ನೂ ಸ್ವಲ್ಪಕಾಲ ಕಾಯುವಂತೆ ಅವುಗಳಿಗೆ ತಿಳಿಸಲಾಯಿತು. ಅವರ ಸಹೋದರರಲ್ಲಿ ಕೆಲವರು ಇನ್ನೂ ಕ್ರಿಸ್ತನ ಸೇವೆಯಲ್ಲಿದ್ದಾರೆ. ಅವರೂ ಕೊಲ್ಲಲ್ಪಡಬೇಕು. ಈ ಕೊಲೆಗಳೆಲ್ಲಾ ಮುಗಿಯುವ ತನಕ ಕಾಯಬೇಕೆಂದು ಆ ಆತ್ಮಗಳಿಗೆ ಹೇಳಲಾಯಿತು.


ಹಾಮಾನನಿಂದ ತಿರಿಗಿ ಪಡೆದುಕೊಂಡಿದ್ದ ತನ್ನ ಮುದ್ರೆಯುಂಗುರವನ್ನು ರಾಜನು ಮೊರ್ದೆಕೈಗೆ ಕೊಟ್ಟನು. ಎಸ್ತೇರ್ ರಾಣಿಯು ಹಾಮಾನನ ಮನೆಯ ಆಡಳಿತವನ್ನು ಮೊರ್ದೆಕೈಗೆ ಕೊಡಿಸಿದಳು.


ರಾಜಮುದ್ರೆಯನ್ನು ಹೊಂದಿದ್ದ ತನ್ನ ಉಂಗುರವನ್ನು ಕೊಟ್ಟನು; ಧರಿಸಿಕೊಳ್ಳಲು ಒಳ್ಳೆಯ ನಾರುಬಟ್ಟೆಯ ನಿಲುವಂಗಿಯನ್ನು ಕೊಟ್ಟನು; ಕೊರಳಿಗೆ ಚಿನ್ನದ ಸರವನ್ನು ಹಾಕಿದನು.


ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.


ಆಗ ಅರಸನು ತನ್ನ ಮುದ್ರೆಯುಂಗುರವನ್ನು ಬೆರಳಿನಿಂದ ತೆಗೆದು ಹಾಮಾನನಿಗೆ ಕೊಟ್ಟನು. ಹಾಮಾನನು ಅಗಾಗನ ವಂಶದವನಾದ ಹಮ್ಮೆದಾತನ ಮಗನು. ಈ ಹಾಮಾನನು ಯೆಹೂದ್ಯರ ಕಡುವೈರಿಯಾಗಿದ್ದನು.


ನಯವಾದ ನಾರುಮಡಿಯನ್ನು ವಧುವಿಗೆ ಧರಿಸಲು ನೀಡಲಾಗಿತ್ತು. ಆ ನಾರುಮಡಿಯು ಪ್ರಕಾಶಮಾನವಾಗಿತ್ತು ಹಾಗೂ ಶುಭ್ರವಾಗಿತ್ತು.” (ನಯವಾದ ನಾರುಮಡಿಯೆಂದರೆ ದೇವರ ಪರಿಶುದ್ಧ ಜನರು ಮಾಡಿದ ಒಳ್ಳೆಯ ಕಾರ್ಯಗಳು ಎಂದರ್ಥ.)


ಬಳಿಕ ನಾನು ನೋಡಿದಾಗ, ಜನರ ಮಹಾಸಮೂಹವನ್ನು ಕಂಡೆನು. ಅವರು ಎಣಿಸಲಾಗದಷ್ಟು ಅಸಂಖ್ಯಾತರಾಗಿದ್ದರು. ಅವರಲ್ಲಿ ಸಕಲ ಜನಾಂಗ, ಕುಲ, ಪ್ರಜೆಗಳವರೂ ಲೋಕದ ಸಕಲ ಭಾಷೆಗಳನ್ನಾಡುವವರೂ ಇದ್ದರು. ಈ ಜನರು ಸಿಂಹಾಸನದ ಮುಂದೆ ಮತ್ತು ಕುರಿಮರಿಯ (ಯೇಸು) ಮುಂದೆ ನಿಂತಿದ್ದರು. ಅವರೆಲ್ಲರೂ ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡು ಖರ್ಜೂರದ ಗರಿಗಳನ್ನು ತಮ್ಮ ಕೈಗಳಲ್ಲಿ ಹಿಡಿದಿದ್ದರು.


ನಾವು ಹೊಂದಿಕೊಂಡಿರುವ ಆತ್ಮನು ನಮ್ಮನ್ನು ಮತ್ತೆ ಗುಲಾಮರನ್ನಾಗಿ ಮಾಡುವವನಲ್ಲ ಮತ್ತು ನಮ್ಮಲ್ಲಿ ಭಯವನ್ನು ಹುಟ್ಟಿಸುವವನಲ್ಲ. ನಾವು ಹೊಂದಿರುವ ಪವಿತ್ರಾತ್ಮನು ನಮ್ಮನ್ನು ದೇವರ ಮಕ್ಕಳನ್ನಾಗಿ ಮಾಡುತ್ತಾನೆ. ಈ ಆತ್ಮನ ಮೂಲಕವಾಗಿ ನಾವು, “ಅಪ್ಪಾ ತಂದೆಯೇ” ಎಂದು ಹೇಳುತ್ತೇವೆ.


“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.


ಪ್ರಭುವಾದ ಯೇಸು ಕ್ರಿಸ್ತನನ್ನೇ ಧರಿಸಿಕೊಳ್ಳಿರಿ. ನಿಮ್ಮ ಪಾಪಸ್ವಭಾವವನ್ನು ಹೇಗೆ ತೃಪ್ತಿಗೊಳಿಸಬೇಕೆಂದಾಗಲಿ ಕೆಟ್ಟಕಾರ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಹೇಗೆ ಪೂರೈಸಿಕೊಳ್ಳಬೇಕೆಂದಾಗಲಿ ಆಲೋಚಿಸಬೇಡಿ.


ರಾಜಕುಮಾರಿಯೇ, ಪಾದರಕ್ಷೆಗಳಲ್ಲಿರುವ ನಿನ್ನ ಪಾದಗಳು ಎಷ್ಟೋ ಸುಂದರವಾಗಿವೆ. ನಿನ್ನ ದುಂಡಾದ ತೊಡೆಗಳು ಶಿಲ್ಪಿಯು ಮಾಡಿದ ಆಭರಣಗಳಂತಿವೆ.


ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಧರಿಸಿಕೊಂಡಿದ್ದಾರೆ. ನಿನ್ನ ಭಕ್ತರು ಉಲ್ಲಾಸಿಸಲಿ.


ಅಂತಃಪುರದಲ್ಲಿ ರಾಜಕುಮಾರಿಯು ವೈಭವದಿಂದಿರುವಳು; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.


ಆತನು ನನ್ನ ಪಾದಗಳನ್ನು ಜಿಂಕೆಯಂತೆ ವೇಗಗೊಳಿಸುವನು. ಆತನು ನನ್ನನ್ನು ಸ್ಥಿರಗೊಳಿಸುವನು; ಎತ್ತರವಾದ ಸ್ಥಳಗಳಲ್ಲಿ ಬೀಳದಂತೆ ದೃಢಪಡಿಸುವನು.


ಬೆಂಕಿಯಲ್ಲಿ ಪುಟಹಾಕಿದ ಅಪ್ಪಟ ಚಿನ್ನವನ್ನು ನೀನು ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ಸಲಹೆ ನೀಡುತ್ತೇನೆ. ಆಗ ನೀನು ನಿಜವಾಗಿಯೂ ಶ್ರೀಮಂತನಾಗಲು ಸಾಧ್ಯ. ನಾನು ನಿನಗೆ ಹೇಳುವುದೇನೆಂದರೆ: ಬಿಳಿವಸ್ತ್ರಗಳನ್ನು ಕೊಂಡುಕೊ. ಆಗ ನೀನು ನಾಚಿಕೆಕರವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಸಾಧ್ಯವಾಗುವುದು. ನೀನು ನಿನ್ನ ಕಣ್ಣುಗಳಿಗೆ ಹಚ್ಚಲು ಔಷಧಿಯನ್ನು ಕೊಂಡುಕೊಳ್ಳಬೇಕೆಂತಲೂ ನಾನು ನಿನಗೆ ಹೇಳುತ್ತೇನೆ. ಆಗ ನಿನಗೆ ನಿಜವಾಗಿಯೂ ದೃಷ್ಟಿ ಬರುವುದು.


ಸಮಾಧಾನದ ಸುವಾರ್ತೆಯೆಂಬ ಪಾದರಕ್ಷೆಯನ್ನು ಹಾಕಿಕೊಂಡು ದೃಢವಾಗಿ ನಿಂತುಕೊಳ್ಳಿರಿ.


ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ.


ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು. ನನ್ನ ಭಕ್ತರು ಉಲ್ಲಾಸಿಸುವರು.


ನಿನ್ನ ಬಾಗಿಲುಗಳಲ್ಲಿ ಬೀಗವಿರುವುದು. ಅವು ಕಬ್ಬಿಣದಿಂದಲೂ ಹಿತ್ತಾಳೆಯಿಂದಲೂ ಮಾಡಲ್ಪಟ್ಟಿವೆ. ನಿನ್ನ ಜೀವಮಾನ ಕಾಲವೆಲ್ಲಾ ನೀನು ಬಲಶಾಲಿಯಾಗಿರುವೆ.”


ಮಗನು ತನ್ನ ತಂದೆಗೆ, ‘ಅಪ್ಪಾ, ನಾನು ದೇವರಿಗೆ ವಿರೋಧವಾಗಿಯೂ ನಿನಗೆ ವಿರೋಧವಾಗಿಯೂ ಪಾಪಮಾಡಿದ್ದೇನೆ. ನಿನ್ನ ಮಗನೆಂದು ಕರೆಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.


ಕೊಬ್ಬಿದ ಕರುವನ್ನು ಕೊಯ್ದು ಉಲ್ಲಾಸಪಡೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು