ಲೂಕ 16:1 - ಪರಿಶುದ್ದ ಬೈಬಲ್1 ಯೇಸು ತನ್ನ ಶಿಷ್ಯರಿಗೆ ಹೀಗೆಂದನು: “ಒಂದಾನೊಂದು ಕಾಲದಲ್ಲಿ ಒಬ್ಬ ಐಶ್ವರ್ಯವಂತನಿದ್ದನು. ಈ ಐಶ್ವರ್ಯವಂತನು ತನ್ನ ವ್ಯಾಪಾರವನ್ನು ನೋಡಿಕೊಳ್ಳಲು ಒಬ್ಬ ಮೇಲ್ವಿಚಾರಕನನ್ನು ನೇಮಿಸಿದನು. ಸ್ವಲ್ಪಕಾಲದ ನಂತರ, ಆ ಮೇಲ್ವಿಚಾರಕನು ತನಗೆ ಮೋಸಮಾಡುತ್ತಿದ್ದಾನೆಂಬುದು ಐಶ್ವರ್ಯವಂತನಿಗೆ ತಿಳಿಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ, “ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಪಾರುಪಾತ್ಯಗಾರನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ, ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ ಇಂತೆಂದರು: “ಒಬ್ಬ ಧನಿಕನಿದ್ದ. ಅವನ ವ್ಯವಹಾರಗಳನ್ನು ನೋಡಿಕೊಳ್ಳಲು ಒಬ್ಬ ಮೇಸ್ತ್ರಿಯಿದ್ದ. ಇವನು ಧನಿಕನ ಆಸ್ತಿಯನ್ನು ಹಾಳುಮಾಡುತ್ತಿದ್ದಾನೆಂದು ದೂರು ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ - ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಮನೆವಾರ್ತೆಯವನಿದ್ದನು. ಇವನ ವಿಷಯವಾಗಿ ಯಜಮಾನನ ಬಳಿಯಲ್ಲಿ - ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೇಸು ತಮ್ಮ ಶಿಷ್ಯರಿಗೆ ಹೇಳಿದ್ದು: “ಒಬ್ಬ ಐಶ್ವರ್ಯವಂತನಿದ್ದನು, ಅವನಿಗಿದ್ದ ಒಬ್ಬ ನಿರ್ವಾಹಕನು ಅವನ ಸರಕುಗಳನ್ನು ಹಾಳು ಮಾಡುತ್ತಿದ್ದಾನೆಂದು ಅವನಿಗೆ ಯಾರೋ ದೂರು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಜೆಜುನ್ ಅಪ್ನಾಚ್ಯಾ ಶಿಸಾಕ್ನಿ “ಎಗ್ದಾ ಎಕ್ ಸಾವ್ಕಾರ್ ಮಾನುಸ್ ಹೊತ್ತೊ. ತೆಚೊ ಯಾವಾರ್ ಸಂಬಾಳ್ತಲೊ ಎಕ್ ಕಾರ್ಬಾರಿ ಹೊತ್ತೊ. ಸಾವ್ಕಾರಾಕ್, ತೊ ಕಾರ್ಬಾರಿ ಅಪ್ನಾಚೆ ಪಯ್ಸೆ ಹಾಳ್ ಕರುಕ್ ಲಾಗ್ಲಾ ಮನುನ್ ಸಾಂಗಟ್ಲ್ಯಾನಿ. ಅಧ್ಯಾಯವನ್ನು ನೋಡಿ |
ದಾವೀದನು ತನ್ನ ರಾಜ್ಯದಲ್ಲಿದ್ದ ಎಲ್ಲಾ ನಾಯಕರನ್ನು ಅಂದರೆ ಕುಲಪ್ರಧಾನರನ್ನು, ಪ್ರಧಾನಸೇನಾಧಿಪತಿಗಳನ್ನು, ಮಹಾಸೇನಾಧಿಪತಿಗಳನ್ನು ಮತ್ತು ಸೇನಾಧಿಪತಿಗಳನ್ನು, ರಾಜನಿಗೂ ಅವನ ಗಂಡುಮಕ್ಕಳಿಗೂ ಸೇರಿದ ಆಸ್ತಿಯನ್ನು ಮತ್ತು ಪಶುಗಳನ್ನು ನೋಡಿಕೊಳ್ಳುತ್ತಿದ್ದ ಅಧಿಕಾರಿಗಳನ್ನು; ರಾಜನ ಪ್ರಮುಖ ಅಧಿಕಾರಿಗಳನ್ನು; ಬಲಿಷ್ಠ ಯುದ್ಧವೀರರನ್ನು ಮತ್ತು ಧೈರ್ಯವಂತರಾದ ಸೈನಿಕರನ್ನು ಜೆರುಸಲೇಮಿಗೆ ಕರೆಸಿ ಸಭೆಸೇರಿಸಿದನು.