ಲೂಕ 16:13 - ಪರಿಶುದ್ದ ಬೈಬಲ್13 “ಯಾವ ಸೇವಕನೂ ಒಂದೇ ಸಮಯದಲ್ಲಿ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಇನ್ನೊಬ್ಬನನ್ನು ಪ್ರೀತಿಸುವನು ಅಥವಾ ಒಬ್ಬನಿಗೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುವನು. ನೀವು ಒಂದೇ ಸಮಯದಲ್ಲಿ ದೇವರ ಮತ್ತು ಹಣದ ಸೇವೆಮಾಡಲಾರಿರಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು, ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾಗದು; ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಯಾವ ಸೇವಕನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು. ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 “ಎಕ್ ಆಳಾನ್ ದೊನ್ ಧನಿಯಾಂಚಿ ಸೆವಾ ಕರುಕ್ ಹೊಯ್ನಾ; ತೊ ಆಳ್ ಎಕ್ಲ್ಯಾಚೊ ದ್ವೆಶ್ ಕರ್‍ತಾ, ಅನಿ ಎಕ್ಲ್ಯಾಚೊ ಪ್ರೆಮ್ ಕರ್‍ತಾ. ಎಕ್ಲ್ಯಾಕ್ ತೊ ವಿಶ್ವಾಸಾನ್ ರ್‍ಹಾತಾ,ಅನಿ ಎಕ್ಲ್ಯಾಕ್ ತೊ ವಿಶ್ವಾಸಾನ್ ರ್‍ಹಾಯ್ನಾ. “ತುಮಿ ದೆವಾಚಿಬಿ, ಪೈಸ್ಯಾಂಚಿಬಿ ಸೆವಾ ಕರುಕ್ ಹೊಯ್ನಾ” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |
“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.