ಲೂಕ 16:16 - ಪರಿಶುದ್ದ ಬೈಬಲ್16 “ಜನರು ಮೋಶೆಯ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಗ್ರಂಥಗಳಿಗೂ ಅನುಸಾರವಾಗಿ ಜೀವಿಸಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಸ್ನಾನಿಕನಾದ ಯೋಹಾನನು ಬಂದ ಕಾಲದಿಂದ ದೇವರ ರಾಜ್ಯದ ಸುವಾರ್ತೆಯು ತಿಳಿಸಲ್ಪಡುತ್ತಿದೆ. ಅನೇಕ ಜನರು ದೇವರ ರಾಜ್ಯದೊಳಗೆ ಹೋಗಲು ಬಹಳ ಪ್ರಯಾಸಪಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ಧರ್ಮಶಾಸ್ತ್ರವೂ ಪ್ರವಾದನೆಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯದ ಸುವಾರ್ತೆಯು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಧರ್ಮಶಾಸ್ತ್ರ ಹಾಗೂ ಪ್ರವಾದನೆಗಳ ಪರಿಣಾಮ ಯೊವಾನ್ನನ ಕಾಲದವರೆಗೆ ಮಾತ್ರ. ಅನಂತರ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರಲಾಗುತ್ತಿದೆ. ಸರ್ವರೂ ಈ ರಾಜ್ಯದೊಳಕ್ಕೆ ಒತ್ತರಿಸಿಕೊಂಡು ನುಗ್ಗುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಧರ್ಮಶಾಸ್ತ್ರವೂ ಪ್ರವಾದಿಗಳೂ ಯೋಹಾನನ ತನಕವೇ. ಈಚೆಗೆ ದೇವರ ರಾಜ್ಯವು ಸಾರಲ್ಪಡುತ್ತಾ ಇದೆ. ಅದರಲ್ಲಿ ಸಕಲರೂ ಬಲಾತ್ಕಾರವಾಗಿ ನುಗ್ಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಮೋಶೆಯ ನಿಯಮವೂ ಪ್ರವಾದನೆಗಳೂ ಯೋಹಾನನವರೆಗೆ ಇದ್ದವು. ಅಂದಿನಿಂದ, ದೇವರ ರಾಜ್ಯವು ಸಾರಲಾಗಿದೆ. ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 “ಜುವಾಂವ್ ಬಾವ್ತಿಸಾಚ್ಯಾ ಕಾಲ್ ಸಗೊಳ್, ಮೊಯ್ಜೆಚೆ ಖಾಯ್ದೆ, ಅನಿ ಪ್ರವಾದ್ಯಾನಿ ಲಿವಲ್ಲ್ಯಾ ಗೊಸ್ಟಿಯಾಂಚ್ಯಾ ಪರ್‍ಕಾರ್ ಚಲ್ತಲೆ ಮನುನ್ ಹೊತ್ತೆ; ಖರೆ ಥೈತ್ನಾ ಹಿಕ್ಡಿನ್, ದೆವಾಚ್ಯಾ ರಾಜಾಚಿ ಬರಿ ಖಬರ್ ಸಾಂಗುನ್ ಹೊವ್ಲಾ, ಅನಿ ಸಗ್ಳೆ ಜಾನಾ ತ್ಯಾತುರ್ ಗುಸುಕ್ ಖಟ್‍ಪಟುಲ್ಯಾತ್”. ಅಧ್ಯಾಯವನ್ನು ನೋಡಿ |