ಲೂಕ 16:22 - ಪರಿಶುದ್ದ ಬೈಬಲ್22 “ಸ್ವಲ್ಪ ಸಮಯದ ನಂತರ ಲಾಜರನು ಸತ್ತನು. ದೇವದೂತರು ಲಾಜರನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಒಂದು ದಿನ ಐಶ್ವರ್ಯವಂತನೂ ಸತ್ತನು. ಅವನಿಗೆ ಸಮಾಧಿ ಮಾಡಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಒಂದು ದಿನ ಆ ಭಿಕಾರಿ ಸತ್ತುಹೋದ. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಸ್ವರ್ಗಸೌಭಾಗ್ಯದಲ್ಲಿದ್ದ ಅಬ್ರಹಾಮನ ಪಕ್ಕದಲ್ಲೇ ಕೂರಿಸಿದರು. ಧನಿಕನು ಕೂಡ ಸತ್ತುಹೋದ. ಅವನ ಶವಸಂಸ್ಕಾರವೂ ಮುಗಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಹೀಗಿರುವಲ್ಲಿ ಸ್ವಲ್ಪ ಕಾಲದ ಮೇಲೆ ಆ ಭಿಕ್ಷಗಾರನು ಸತ್ತನು; ದೇವದೂತರು ಅವನನ್ನು ತೆಗೆದುಕೊಂಡುಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು; ಅವನಿಗೆ ಉತ್ತರಕ್ರಿಯೆಗಳು ಆದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ಒಂದು ದಿನ ಆ ಭಿಕ್ಷುಕನು ಸತ್ತುಹೋದನು. ದೇವದೂತರು ಅವನನ್ನು ಅಬ್ರಹಾಮನ ಬಳಿಗೆ ತೆಗೆದುಕೊಂಡು ಹೋದರು. ಧನವಂತನು ಸಹ ಸತ್ತುಹೋದನು. ಅವನಿಗೆ ಶವಸಂಸ್ಕಾರವಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತೊ ಗರಿಬ್ ಮಾನುಸ್ ಮರ್‍ಲೊ, ಅನಿ ತೆಕಾ ಸರ್‍ಗಾ ವೈಲ್ಯಾ ದುತಾನಿ, ಉಕ್ಲುನ್ ನ್ಹೆವ್ನ್ ಸರ್‍ಗಾ ವೈಲ್ಯಾ ಸನಾಚ್ಯಾ ಜೆವ್ನಾಕ್, ಅಬ್ರಾಹಾಮಾಚ್ಯಾ ಬಾಜುಕುಚ್ ನ್ಹೆವ್ನ್ ಬಸ್ವುಲ್ಯಾನಿ. ತೊ ಸಾವ್ಕಾರ್ ಮಾನುಸ್‍ಬಿ ಮರ್‍ಲೊ, ಅನಿ ತೆಕಾ ಮಾಟಿ ದಿಲ್ಯಾನಿ. ಅಧ್ಯಾಯವನ್ನು ನೋಡಿ |