Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:21 - ಪರಿಶುದ್ದ ಬೈಬಲ್‌

21 ‘ಇಗೋ, ದೇವರ ರಾಜ್ಯವು ಇಲ್ಲಿದೆ!’ ‘ಅಗೋ ಅಲ್ಲಿದೆ!’ ಎಂದು ಜನರು ಹೇಳುವಂತಿಲ್ಲ. ದೇವರ ರಾಜ್ಯವು ನಿಮ್ಮೊಳಗೇ ಇದೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ‘ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ’ ಎಂದು ಹೇಳುವುದಕ್ಕಾಗದು. ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಎಂದು ತಿಳಿದುಕೊಳ್ಳಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ‘ಇಗೋ, ಅದು ಇಲ್ಲಿದೆ ಅಥವಾ ಅಲ್ಲಿದೆ,’ ಎಂದು ಹೇಳುವಂತಿಲ್ಲ. ಏಕೆಂದರೆ, ದೇವರ ಸಾಮ್ರಾಜ್ಯವು ನಿಮ್ಮೊಳಗೇ ಇದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ ಎಂದು ಹೇಳುವದಕ್ಕಾಗದು; ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಅಂತ ತಿಳುಕೊಳ್ಳಿರಿ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ‘ಇಗೋ ಇಲ್ಲಿದೆ,’ ಇಲ್ಲವೆ ‘ಅಗೋ ಅಲ್ಲಿದೆ,’ ಎಂದು ಹೇಳುವುದಕ್ಕಾಗುವುದಿಲ್ಲ ಏಕೆಂದರೆ ದೇವರ ರಾಜ್ಯವು ನಿಮ್ಮ ನಡುವೆ ಇದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಕೊನ್ಬಿ ಅಬಕ್ ,ಹಿತ್ತೆ ಹಾಯ್! ಥೈ ಹಾಯ್! ಮನುನ್ ಸಾಂಗುಕ್ ಹೊಯ್ನಾ, ಕಶ್ಯಾಕ್ ಮಟ್ಲ್ಯಾರ್, ದೆವಾಚೆ ರಾಜ್ ತುಮ್ಚ್ಯಾ ಭುತ್ತುರುಚ್ ಹಾಯ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:21
10 ತಿಳಿವುಗಳ ಹೋಲಿಕೆ  

ಆದರೆ ನಾನು ದೇವರಾತ್ಮನ ಶಕ್ತಿಯ ಮೂಲಕ ದೆವ್ವಗಳನ್ನು ಬಿಡಿಸುತ್ತೇನೆ. ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆ ಎಂಬುದನ್ನು ಇದು ತೋರ್ಪಡಿಸುತ್ತದೆ.


ದೇವರ ರಾಜ್ಯದಲ್ಲಿ ತಿನ್ನುವುದಾಗಲಿ ಕುಡಿಯುವುದಾಗಲಿ ಮುಖ್ಯವಲ್ಲ. ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಅಲ್ಲಿ ಮುಖ್ಯವಾಗಿವೆ.


“ಆ ಸಮಯದಲ್ಲಿ, ಯಾರಾದರೂ ನಿಮಗೆ ‘ಕ್ರಿಸ್ತನು ಅಲ್ಲಿದ್ದಾನೆ, ನೋಡು’ ಎನ್ನಬಹುದು. ಅಥವಾ ಇನ್ನೊಬ್ಬನು, ‘ಆತನು ಇಲ್ಲಿದ್ದಾನೆ’ ಎನ್ನಬಹುದು. ಆದರೆ ಅವರನ್ನು ನಂಬಬೇಡಿ.


ಮಹಿಮಾತಿಶಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲು ದೇವರು ತೀರ್ಮಾನಿಸಿದನು. ಈ ಮಹಾಸತ್ಯವು ಎಲ್ಲಾ ಜನರಿಗಾಗಿ ಪ್ರಕಟವಾಯಿತು. ನಿಮ್ಮಲ್ಲಿರುವ ಕ್ರಿಸ್ತನೇ ಆ ಸತ್ಯವಾಗಿದ್ದಾನೆ. ದೇವರ ಮಹಿಮೆಯಲ್ಲಿ ಪಾಲುಹೊಂದಲು ಆತನೇ ನಮಗಿರುವ ಏಕೈಕ ನಿರೀಕ್ಷೆ.


ಯೇಸು ಅವರಿಗೆ, “ಎಚ್ಚರಿಕೆಯಾಗಿರಿ! ಮೋಸ ಹೋಗಬೇಡಿರಿ. ನನ್ನ ಹೆಸರನ್ನು ಹೇಳುತ್ತಾ ಅನೇಕರು ಬರುವರು. ಅವರು, ‘ನಾನೇ ಕ್ರಿಸ್ತನು’ ಎಂದೂ, ‘ಸರಿಯಾದ ಸಮಯ ಬಂದಿದೆ’ ಎಂದೂ ಹೇಳುವರು. ಆದರೆ ಅವರನ್ನು ಹಿಂಬಾಲಿಸಬೇಡಿರಿ.


ಜನರು ನಿಮಗೆ, ‘ಅಗೋ, ಅಲ್ಲಿದ್ದಾನೆ, ಇಗೋ, ಇಲ್ಲಿದ್ದಾನೆ!’ ಎಂದು ಹೇಳುವರು. ನೀವು ಇದ್ದಲ್ಲಿಯೇ ಇರಿ. ಅವರನ್ನು ಹಿಂಬಾಲಿಸಿ ಹೋಗಿ ಹುಡುಕಬೇಡಿ.


ಯೋಹಾನನು, “ನಾನು ಜನರಿಗೆ ನೀರಿನಿಂದ ದೀಕ್ಷಾಸ್ನಾನ ಮಾಡಿಸುವೆನು. ಆದರೆ ನಿಮಗೆ ಗೊತ್ತಿಲ್ಲದ ಒಬ್ಬನು ಇಲ್ಲಿದ್ದಾನೆ.


ಯೇಸು, “ನನ್ನ ರಾಜ್ಯವು ಈ ಲೋಕಕ್ಕೆ ಸೇರಿದ್ದಲ್ಲ. ಅದು ಈ ಲೋಕಕ್ಕೆ ಸೇರಿದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಸಿಗದಂತೆ ನನ್ನ ಸೇವಕರು ಹೋರಾಡುತ್ತಿದ್ದರು. ಆದರೆ ನನ್ನ ರಾಜ್ಯವು ಮತ್ತೊಂದು ಸ್ಥಳದ್ದು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು