ಲೂಕ 17:29 - ಪರಿಶುದ್ದ ಬೈಬಲ್29 ಲೋಟನು ಆ ಪಟ್ಟಣವನ್ನು ಬಿಟ್ಟು ಹೊರಟ ದಿನದಲ್ಲಿಯೂ ಜನರು ಹಾಗೆಯೇ ಮಾಡುತ್ತಿದ್ದರು. ಆಗ ಆಕಾಶದಿಂದ ಬೆಂಕಿಯ ಸುರಿಮಳೆಯಾಗಿ ಅವರೆಲ್ಲರನ್ನೂ ನಾಶಮಾಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿನದಲ್ಲಿ, ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಲೋತನು ಸೊದೋಮ್ ಊರನ್ನು ಬಿಟ್ಟು ತೆರಳಿದ ದಿನದಂದೇ ಆಕಾಶದಿಂದ ಅಗ್ನಿ ಮತ್ತು ಗಂಧಕದ ಮಳೆ ಸುರಿದು ಎಲ್ಲರನ್ನು ನಾಶಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿವಸದಲ್ಲಿ ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆದರೆ ಲೋಟನು ಸೊದೋಮಿನಿಂದ ತೆರಳಿದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಮಾಡಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಖರೆ ಲೊಟ್ ಸೊದೊಮಾತ್ನಾ ಭಾಯ್ರ್ ಪಡಲ್ಲ್ಯಾ ತನ್ನಾ, ಮಳ್ಬಾ ವೈನಾ ಆಗ್ ಅನಿ ಆಗಿಚ್ಯಾ ಇಂಗ್ಳ್ಯಾಂಚೊ ಪಾವ್ಸ್ ಯೆಲೊ, ಅನಿ ತೆಂಕಾ ಸಗ್ಳ್ಯಾಕ್ನಿ ಜಿವಾನಿಚ್ ಮಾರುನ್ ಸೊಡ್ಲ್ಯಾನ್. ಅಧ್ಯಾಯವನ್ನು ನೋಡಿ |
ನನ್ನ ಜೀವದಾಣೆ, ಮೋವಾಬ್ಯರೂ ಅಮ್ಮೋನ್ಯರೂ ಸೊದೋಮ್ ಗೊಮೋರದವರಂತೆ ನಾಶವಾಗುವರು. ನಾನು ಸರ್ವಶಕ್ತನಾದ ಇಸ್ರೇಲರ ದೇವರಾಗಿರುವೆನು. ನಾನು ವಾಗ್ದಾನ ಮಾಡುವದೇನೆಂದರೆ, ಆ ರಾಜ್ಯಗಳು ಸಂಪೂರ್ಣವಾಗಿ ನಾಶವಾಗುವವು. ಅವರ ಭೂಮಿಯು ಕಳೆಗಳಿಂದ ತುಂಬಿಹೋಗುವದು. ಅದು ಮೃತ್ಯುಸಮುದ್ರದ ಉಪ್ಪಿನಿಂದ ತುಂಬಿಹೋದಂತಿರುವದು. ನನ್ನ ಜನರಲ್ಲಿ ಉಳಿದವರು ಅವರ ದೇಶವನ್ನೂ ಅಲ್ಲಿ ಉಳಿದಿರುವ ವಸ್ತುಗಳನ್ನೂ ತಮ್ಮ ವಶಮಾಡಿಕೊಳ್ಳುವರು.”
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.