Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:30 - ಪರಿಶುದ್ದ ಬೈಬಲ್‌

30 ಮನುಷ್ಯಕುಮಾರನು ತಿರುಗಿ ಬರುವಾಗ ಲೋಕದ ಸ್ಥಿತಿ ಅದೇ ರೀತಿಯಲ್ಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಮನುಷ್ಯಕುಮಾರನು ಪ್ರತ್ಯಕ್ಷವಾಗುವ ದಿನದಲ್ಲಿ ಅದೇ ರೀತಿಯಾಗಿ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನರಪುತ್ರನು ಪ್ರತ್ಯಕ್ಷನಾಗುವ ದಿನದಲ್ಲೂ ಹಾಗೆಯೇ ನಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಮನುಷ್ಯಕುಮಾರನು ಪ್ರತ್ಯಕ್ಷವಾಗುವ ದಿವಸದಲ್ಲಿ ಅದೇ ರೀತಿಯಾಗಿ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ಮನುಷ್ಯಪುತ್ರನಾದ ನನ್ನ ಪ್ರತ್ಯಕ್ಷತೆಯ ದಿನದಲ್ಲಿಯೂ ಹಾಗೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಮಾನ್ಸಾಚೊ ಲೆಕ್, ಯೆತಾನಾಬಿ ತಸೆಚ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:30
22 ತಿಳಿವುಗಳ ಹೋಲಿಕೆ  

ಇಗೋ, ಯೇಸು ಮೋಡಗಳ ಸಂಗಡ ಬರುತ್ತಿದ್ದಾನೆ. ಪ್ರತಿಯೊಬ್ಬರು ಆತನನ್ನು ನೋಡುವರು, ಆತನನ್ನು ಇರಿದವರು ಸಹ ನೋಡುವರು. ಆತನನ್ನು ಕಂಡು ಲೋಕದ ಜನರೆಲ್ಲರೂ ಎದೆಬಡಿದುಕೊಂಡು ಗೋಳಾಡುವರು. ಹೌದು, ಇದು ಸಂಭವಿಸುತ್ತದೆ! ಆಮೆನ್.


ತೊಂದರೆಗೆ ಒಳಗಾಗಿರುವ ನಿಮಗೆ ದೇವರು ಶಾಂತಿಯನ್ನು ನೀಡುತ್ತಾನೆ. ಆತನು ನಮಗೂ ಶಾಂತಿಯನ್ನು ನೀಡುವನು. ಪ್ರಭುವಾದ ಯೇಸು ತನ್ನ ಶಕ್ತಿಶಾಲಿಗಳಾದ ದೂತರೊಂದಿಗೆ ಪರಲೋಕದಿಂದ ಪ್ರತ್ಯಕ್ಷನಾದಾಗ ಈ ಶಾಂತಿಯನ್ನು ದಯಪಾಲಿಸುತ್ತಾನೆ.


ಹೀಗಿರಲು, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಪುನರಾಗಮನವನ್ನು ಎದುರುನೋಡುತ್ತಿರುವ ನೀವು ದೇವರಿಂದ ಬರುವ ಪ್ರತಿಯೊಂದು ವರವನ್ನು ಹೊಂದಿದವರಾಗಿದ್ದೀರಿ.


ಆದ್ದರಿಂದ ನೀವು ನಿಮ್ಮ ಮನಸ್ಸುಗಳನ್ನು ಸೇವೆಗಾಗಿ ಸಿದ್ಧಪಡಿಸಿರಿ. ಅಲ್ಲದೆ ನಿಮ್ಮನ್ನು ಹತೋಟಿಯಲ್ಲಿಟ್ಟುಕೊಂಡಿರಿ. ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರೆಯುವ ಕೃಪಾವರದ ಮೇಲೆಯೇ ನಿಮ್ಮ ನಿರೀಕ್ಷೆಯೆಲ್ಲಾ ಇರಬೇಕು.


ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.


ಆಗ ಮನುಷ್ಯಕುಮಾರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ನೋಡುವರು.


ಬಳಿಕ ಯೇಸು ಆಲಿವ್ ಗುಡ್ಡದ ಮೇಲೆ ಕುಳಿತುಕೊಂಡಿದ್ದಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ! ನೀನು ಈ ಲೋಕಕ್ಕೆ ಮತ್ತೊಮ್ಮೆ ಬರುವಾಗ ಮತ್ತು ಲೋಕದ ಸಮಾಪ್ತಿಯ ಸಮಯ ಬಂದಾಗ ಸೂಚನೆಗಾಗಿ ಏನು ಸಂಭವಿಸುವುದು? ನಮಗೆ ತಿಳಿಸು!” ಎಂದು ಕೇಳಿದರು.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು.


ಆದರೆ ನೀವು ಕ್ರಿಸ್ತನ ಸಂಕಟಗಳನ್ನು ಹಂಚಿಕೊಳ್ಳುತ್ತಿರುವುದರಿಂದ ಸಂತೋಷಿಸಿರಿ. ಕ್ರಿಸ್ತನು ತನ್ನ ಮಹಿಮೆಯನ್ನು ತೋರ್ಪಡಿಸುವಾಗ ನೀವು ಸಂತೋಷಪಡುವಿರಿ ಮತ್ತು ಆನಂದಿಸುವಿರಿ.


“ಆಗ ಮನುಷ್ಯಕುಮಾರನು ಅಧಿಕಾರದಿಂದಲೂ ಮಹಾಮಹಿಮೆಯೊಡನೆಯೂ ಮೇಘಗಳಲ್ಲಿ ಬರುವುದನ್ನು ಜನರು ನೋಡುತ್ತಾರೆ.


ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು. ಆದರೆ ನಿನಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೋಡಗಳ ಮೇಲೆ ಕುಳಿತು ಬರುವುದನ್ನೂ ನೀವು ಕಾಣುವಿರಿ” ಎಂದು ಹೇಳಿದನು.


ಏನು ಸಂಭವಿಸುತ್ತಿದೆ ಎಂಬುದು ಅವರಿಗೆ ತಿಳಿದಿರಲಿಲ್ಲ. ಆಗ ಜಲಪ್ರಳಯವು ಬಂದು ಆ ಜನರನ್ನೆಲ್ಲಾ ನಾಶಮಾಡಿತು. “ಮನುಷ್ಯಕುಮಾರನು ಬರುವಾಗಲೂ ಅದೇ ರೀತಿಯಾಗುವುದು.


“ನೋಹನ ಕಾಲದಲ್ಲಿ ಸಂಭವಿಸಿದಂತೆಯೇ ಮನುಷ್ಯಕುಮಾರನು ಬರುವಾಗಲೂ ಸಂಭವಿಸುತ್ತದೆ.


ದೇವರು ತನ್ನ ಜನರನ್ನು ಶಿಕ್ಷಿಸುವ ಕಾಲದ ಬಗ್ಗೆ ಪ್ರವಾದಿಗಳು ಬರೆದಿರುವ ಸಂಗತಿಗಳೆಲ್ಲಾ ಆಗ ನೆರವೇರುತ್ತದೆ.


“ಮನುಷ್ಯಕುಮಾರನು ಬಂದಾಗ ನಿಮಗೇ ಗೊತ್ತಾಗುವುದು. ಆಕಾಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ಹೊಳೆಯುವ ಮಿಂಚಿನಂತೆ ಆತನು ಬರುವನು.


ಲೋಟನು ಆ ಪಟ್ಟಣವನ್ನು ಬಿಟ್ಟು ಹೊರಟ ದಿನದಲ್ಲಿಯೂ ಜನರು ಹಾಗೆಯೇ ಮಾಡುತ್ತಿದ್ದರು. ಆಗ ಆಕಾಶದಿಂದ ಬೆಂಕಿಯ ಸುರಿಮಳೆಯಾಗಿ ಅವರೆಲ್ಲರನ್ನೂ ನಾಶಮಾಡಿತು.


ಯೇಸುವು ನಿಮ್ಮನ್ನು ಕೊನೆಯವರೆಗೂ ದೃಢಪಡಿಸಿ ಕಾಪಾಡುವನು. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನೀವು ನಿರ್ದೋಷಿಗಳಾಗಿರುವಿರಿ.


ಕ್ರಿಸ್ತನೇ ನಿಮ್ಮ ಜೀವ, ಆತನು ಮರಳಿ ಪ್ರತ್ಯಕ್ಷನಾದಾಗ, ನೀವೂ ಆತನ ಪ್ರಭಾವದೊಂದಿಗೆ ಪ್ರತ್ಯಕ್ಷರಾಗುವಿರಿ.


ಹೌದು, ನನ್ನ ಪ್ರಿಯ ಮಕ್ಕಳೇ, ಆತನಲ್ಲಿಯೇ ನೆಲೆಗೊಂಡಿರೋಣ. ನಾವು ಹೀಗೆ ಮಾಡಿದರೆ, ಕ್ರಿಸ್ತನು ಮರಳಿ ಬರುವ ದಿನದಂದು ನಾವು ಭಯಪಡಬೇಕಾಗಿಲ್ಲ; ಅಡಗಿಕೊಳ್ಳುವ ಅಗತ್ಯವಿರುವುದಿಲ್ಲ; ನಾಚಿಕೆಪಡುವ ಅಗತ್ಯವೂ ಇರುವುದಿಲ್ಲ.


ಪ್ರಿಯ ಸ್ನೇಹಿತರೇ, ಈಗ ನಾವು ದೇವರ ಮಕ್ಕಳಾಗಿದ್ದೇವೆ. ನಾವು ಮುಂದೆ ಏನಾಗುವೆವೆಂಬುದನ್ನು ನಮಗಿನ್ನೂ ತೋರ್ಪಡಿಸಿಲ್ಲ. ಆದರೆ ಕ್ರಿಸ್ತನು ಮರಳಿ ಬಂದಾಗ ಅದನ್ನು ತಿಳಿದುಕೊಳ್ಳುತ್ತೇವೆ. ನಾವು ಆತನಂತಾಗುವೆವು. ನಾವು ಆತನ ನಿಜಸ್ವರೂಪವನ್ನೇ ನೋಡುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು