Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:7 - ಪರಿಶುದ್ದ ಬೈಬಲ್‌

7 “ನಿಮ್ಮಲ್ಲಿ ಒಬ್ಬನಿಗೆ ಹೊಲದಲ್ಲಿ ಕೆಲಸ ಮಾಡುವಂಥ ಒಬ್ಬ ಸೇವಕನಿದ್ದಾನೆಂದು ಭಾವಿಸಿಕೊಳ್ಳೋಣ. ಆ ಸೇವಕನು ಭೂಮಿಯನ್ನು ಉಳುತ್ತಿರುತ್ತಾನೆ ಅಥವಾ ಕುರಿಗಳನ್ನು ಮೇಯಿಸುತ್ತಿರುತ್ತಾನೆ. ಆ ಸೇವಕನು ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ಬಂದಾಗ ನೀನು ಅವನಿಗೆ ಏನು ಹೇಳುವೆ? ‘ಒಳಗೆ ಬಾ! ಊಟಕ್ಕೆ ಕುಳಿತುಕೊ’ ಎಂದು ಹೇಳುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ನಿಮ್ಮಲ್ಲಿ ಯಾವನಿಗಾದರೂ ವ್ಯವಸಾಯ ಮಾಡುವ ಅಥವಾ ಕುರಿಮೇಯಿಸುವ ಆಳಿರಲಾಗಿ, ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ, ‘ನೀನು ತಟ್ಟನೆ ಬಂದು ಊಟಕ್ಕೆ ಕುಳಿತುಕೋ’ ಎಂದು ಹೇಳುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ನಿಮಗೆ ಒಬ್ಬ ಆಳಿದ್ದಾನೆಂದು ಭಾವಿಸೋಣ. ಅವನು ಹೊಲ ಉತ್ತೋ, ಕುರಿ ಮೇಯಿಸಿಯೋ ಮನೆಗೆ ಬರುತ್ತಾನೆ. ಬಂದಾಕ್ಷಣವೇ, ‘ಬಾ, ನನ್ನೊಂದಿಗೆ ಊಟಮಾಡು,’ ಎಂದು ನಿಮ್ಮಲ್ಲಿ ಯಾರಾದರೂ ಅವನಿಗೆ ಹೇಳುತ್ತಾರೆಯೇ? ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮಲ್ಲಿ ಯಾವನಿಗಾದರೂ ಉಳುವ ಅಥವಾ ಕುರಿಮೇಯಿಸುವ ಆಳಿರಲಾಗಿ ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ - ನೀನು ತಟ್ಟನೆ ಬಂದು ಊಟಕ್ಕೆ ಕೂತುಕೋ ಎಂದು ಹೇಳಾನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಕೆಲಸದವನಿರಲಾಗಿ, ಅವನು ಹೊಲದ ಕೆಲಸ ಅಥವಾ ಕುರಿ ಮೇಯಿಸಿ ಮನೆಗೆ ಬಂದ ಕೂಡಲೇ ಯಜಮಾನನು ಕೆಲಸದವನಿಗೆ, ‘ಬಾ ಊಟಕ್ಕೆ ಕುಳಿತುಕೋ,’ ಎಂದು ಹೇಳುವುದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 “ತುಮ್ಚೊ ಎಕ್ ಆಳ್ ಮನುನ್ ಚಿಂತುವಾ, ಅನಿ ತೊ ಶೆತಾತ್ ನಾಂಗ್ರುಕ್ ನಾಹೊಲ್ಯಾರ್, ಬಕ್ರ್ಯಾಕ್ನಿ ರಾಕುಕ್ ಜಾತಾ, ತೊ ಶೆತಾಕ್ನಾ ಯೆಲ್ಲ್ಯಾ ತನ್ನಾ ತೆಕಾ ತುಮಿ ಲಗ್ಗುನಾ ಯೆ, ಅನಿ ಜೆವಾನ್ ಕರ್ ಮನ್ತ್ಯಾಶಿ ಕಾಯ್?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:7
6 ತಿಳಿವುಗಳ ಹೋಲಿಕೆ  

ಯೇಸು, “ನಿಮ್ಮಲ್ಲಿ ಯಾರ ಬಳಿಯಾದರೂ ಒಂದು ಕುರಿಯಿದ್ದು, ಆ ಕುರಿಯು ಸಬ್ಬತ್ ದಿನದಂದು ಕುಣಿಯೊಳಕ್ಕೆ ಬಿದ್ದರೆ, ನೀವು ಆ ಕುರಿಯನ್ನು ಕುಣಿಯಿಂದ ಮೇಲಕ್ಕೆ ಎತ್ತುವಿರಿ.


ಅದಕ್ಕೆ ಪ್ರಭುವು (ಯೇಸು), “ನೀವು ಕಪಟಿಗಳು! ನೀವೆಲ್ಲರೂ ನಿಮ್ಮ ದುಡಿಮೆಯ ಪಶುಗಳನ್ನು ಪ್ರತಿದಿನ ಬಿಚ್ಚಿ ನೀರು ಕುಡಿಸಲು ಕರೆದೊಯ್ಯುತೀರಿ. ಸಬ್ಬತ್‌ದಿನದಲ್ಲಿಯೂ ನೀವು ಹಾಗೆಯೇ ಮಾಡುತ್ತೀರಿ!


ಯೇಸು ಫರಿಸಾಯರಿಗೂ ಧರ್ಮೋಪದೇಶಕರಿಗೂ, “ಸಬ್ಬತ್ ದಿನದಲ್ಲಿ ನಿಮ್ಮ ಮಗನಾಗಲಿ ನಿಮ್ಮ ದುಡಿಯುವ ಪಶುವಾಗಲಿ ಬಾವಿಗೆ ಬಿದ್ದರೆ, ಆ ಕೂಡಲೇ ನೀವು ಬಾವಿಯಿಂದ ಮೇಲಕ್ಕೆ ಎತ್ತಿ ಬದುಕಿಸುತ್ತೀರಿ ಎಂಬುದು ನಿಮಗೆ ಗೊತ್ತೇ ಇದೆ” ಎಂದು ಹೇಳಿದನು.


ಪ್ರಭುವು ಅವರಿಗೆ ಹೀಗೆಂದನು: “ನಿಮ್ಮ ನಂಬಿಕೆ ಸಾಸಿವೆ ಕಾಳಷ್ಟು ದೊಡ್ಡದಾಗಿದ್ದರೆ, ನೀವು ಈ ಅತ್ತಿಮರಕ್ಕೆ, ‘ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿದರೂ ಅದು ನಿಮಗೆ ವಿಧೇಯವಾಗುತ್ತದೆ.


ಇಲ್ಲ! ನೀನು ಅವನಿಗೆ, ‘ನನಗೋಸ್ಕರ ಅಡಿಗೆ ಮಾಡು. ಬಳಿಕ ಶುಭ್ರವಾದ ಬಟ್ಟೆಯನ್ನು ಧರಿಸಿಕೊಂಡು ಬಂದು ನನಗೆ ಊಟಬಡಿಸು. ನಾನು ತಿಂದು ಕುಡಿದ ಮೇಲೆ ನೀನು ಊಟಮಾಡು’ ಎಂದು ಹೇಳುವೆಯಷ್ಟೇ.


“ಮನುಷ್ಯಕುಮಾರನು ತಿರುಗಿ ಬರುವ ದಿವಸಗಳಲ್ಲಿ ಈ ಲೋಕದ ಸ್ಥಿತಿಯು ನೋಹನ ಕಾಲದ ಸ್ಥಿತಿಯಂತೆಯೇ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು