ಲೂಕ 18:13 - ಪರಿಶುದ್ದ ಬೈಬಲ್13 “ಸುಂಕವಸೂಲಿಗಾರನು ಅಲ್ಲಿ ಒಬ್ಬಂಟಿಗನಾಗಿಯೇ ನಿಂತುಕೊಂಡಿದ್ದನು. ಅವನು ಆಕಾಶದ ಕಡೆಗೆ ಕಣ್ಣೆತ್ತಿ ನೋಡದೇ, ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು, ‘ದೇವರೇ, ನನಗೆ ಕರುಣೆತೋರು; ನಾನು ಪಾಪಿಯಾಗಿದ್ದೇನೆ’ ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ಎದೆಯನ್ನು ಬಡುಕೊಳ್ಳುತ್ತಾ - ದೇವರೇ, ಪಾಪಿಯಾದ ನನ್ನನ್ನು ಕರುಣಿಸು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಆದರೆ ಸುಂಕದವನು ದೂರದಲ್ಲಿ ನಿಂತು, ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಧೈರ್ಯಗೊಳ್ಳದೇ ತನ್ನ ಎದೆಯನ್ನು ಬಡಿದುಕೊಳ್ಳುತ್ತಾ, ‘ದೇವರೇ ಪಾಪಿಯಾದವನು ನಾನೇ ನನ್ನನ್ನು ಕರುಣಿಸು,’ ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಖರೆ, ತೊ ತೆರ್‍ಗಿ ವಸುಲ್ ಕರ್‍ತಲೊ, ಪಾಪಿ ಮಾನುಸ್, ಧುರುಚ್ ಇಬೆ ರ್‍ಹಾಲೊ, ತೆನಿ ಟಕ್ಲೆ ವೈರ್ ಕರುನ್ ಅಪ್ನಾಚೆ ಡೊಳೆ ಸೈತ್ ಸರ್‍ಗಾಕ್ ಲಾವುಕ್ನಾ, ಅಪ್ನಾಚೆ ಹಿರ್‍ದೆ ಬಡ್ವುನ್ ಘೆಟ್ಲ್ಯಾನ್, ಅನಿ “ದೆವಾ ಮಿಯಾ ಎಕ್ ಪಾಪಿ ಮಾನುಸ್, ಮಾಜಿ ದಯಾ ಕರ್!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ನೀವು ಯಾವ ದುಃಖವನ್ನು ಹೊಂದಿರಬೇಕೆಂದು ದೇವರು ಬಯಸಿದ್ದನೋ ಅದೇ ದುಃಖವನ್ನು ನೀವು ಹೊಂದಿದ್ದೀರಿ. ಆ ದುಃಖವು ನಿಮ್ಮನ್ನು ಬಹು ಆಸಕ್ತಿಯುಳ್ಳವರನ್ನಾಗಿ ಮಾಡಿತು; ನೀವು ತಪ್ಪಿತಸ್ಥರಾಗಿರಲಿಲ್ಲವೆಂದು ನಿರೂಪಿಸಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನಿಮ್ಮನ್ನು ಕೋಪಗೊಳಿಸಿತು ಮತ್ತು ಭಯಗೊಳಿಸಿತು; ನನ್ನನ್ನು ನೋಡಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನನ್ನ ಬಗ್ಗೆ ಚಿಂತಿಸುವಂತೆ ಮಾಡಿತು; ತಪ್ಪಿತಸ್ಥರನ್ನು ದಂಡಿಸಬೇಕೆಂಬ ಬಯಕೆಯನ್ನು ಉಂಟು ಮಾಡಿತು. ಆ ಸಮಸ್ಯೆಯ ಯಾವ ವಿಷಯದಲ್ಲಿಯೂ ನೀವು ಅಪರಾಧಿಗಳಾಗಿರಲಿಲ್ಲವೆಂದು ನಿರೂಪಿಸಿದಿರಿ.
ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ.