Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:22 - ಪರಿಶುದ್ದ ಬೈಬಲ್‌

22 ಆಗ ಯೇಸು ಅವನಿಗೆ, “ನೀನು ಮಾಡಬೇಕಾದ ಇನ್ನೊಂದು ಕಾರ್ಯವಿದೆ. ನಿನ್ನ ಆಸ್ತಿಯನ್ನೆಲ್ಲಾ ಮಾರಿ ಅದರಿಂದ ಬಂದ ಹಣವನ್ನು ಬಡ ಜನರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ದೊರೆಯುವುದು. ನೀನಾದರೋ ಬಂದು ನನ್ನನ್ನು ಹಿಂಬಾಲಿಸು!” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೇಸು ಅದನ್ನು ಕೇಳಿ ಅವನಿಗೆ, “ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇದನ್ನು ಕೇಳಿದ ಯೇಸು, “ನೀನು ಮಾಡಬೇಕಾದ ಕಾರ್ಯ ಇನ್ನೂ ಒಂದು ಉಳಿದಿದೆ; ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೇಸು ಅದನ್ನು ಕೇಳಿ ಅವನಿಗೆ - ಇನ್ನೂ ನಿನಗೆ ಒಂದು ಕಡಿಮೆಯಾಗಿದೆ; ನಿನ್ನ ಬದುಕನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೇಸು ಇವುಗಳನ್ನು ಕೇಳಿ ಅವನಿಗೆ, “ಆದರೂ ನಿನಗೆ ಒಂದು ಕೊರತೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಹೆ ಆಯ್ಕಲ್ಲ್ಯಾ ತನ್ನಾ, ಜೆಜುನ್ ತೆಕಾ “ಖಾಲಿ ಎಕ್ ಕಾಮ್ ತಿಯಾ ಕರ್‍ತಲೆ ಹುರ್‍ಲಾ; ತುಜೆ ಮನುನ್ ಹೊತ್ತೆ ಸಗ್ಳೆ ಇಕ್, ಅನಿ ಯೆಲ್ಲೆ ಪಯ್ಸೆ ಗರಿಬಾಕ್ನಿ ದಿ, ಅನಿ ಸರ್‍ಗಾರ್ ತುಕಾ ಸಾವ್ಕಾರ್ಕಿ ತಯಾರ್ ಕರುನ್ ಥವಲ್ಲಿ ರ್‍ಹಾತಾ, ಮಾನಾ ಯೆವ್ನ್ ಮಾಜ್ಯಾ ಫಾಟ್ನಾ ಯೆ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:22
16 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿರುವ ಆಸ್ತಿಯನ್ನು ಮಾರಿ, ಬಂದ ಹಣವನ್ನು ಕೊರತೆಯಲ್ಲಿರುವ ಜನರಿಗೆ ಕೊಡಿರಿ. ಈ ಲೋಕದ ಐಶ್ವರ್ಯ ಶಾಶ್ವತವಲ್ಲ. ಆದ್ದರಿಂದ ಶಾಶ್ವತವಾದ ಐಶ್ವರ್ಯವನ್ನು ಗಳಿಸಿಕೊಳ್ಳಿರಿ. ಲಯವಾಗದ ಸಂಪತ್ತನ್ನು ಪರಲೋಕದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಆ ಭಂಡಾರವನ್ನು ಕಳ್ಳರು ಕದಿಯಲಾಗುವುದಿಲ್ಲ ಮತ್ತು ಹುಳಗಳು ನಾಶಮಾಡಲಾಗುವುದಿಲ್ಲ.


ಯೇಸು, “ನೀನು ಸಂಪೂರ್ಣನಾಗಬೇಕೆಂದಿದ್ದರೆ ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ಆಗ ನಿನಗೆ ಪರಲೋಕದಲ್ಲಿ ದೊಡ್ಡ ಭಂಡಾರ ಇರುವುದು. ನಂತರ ಬಂದು ನನ್ನನ್ನು ಹಿಂಬಾಲಿಸು!” ಎಂದು ಉತ್ತರಕೊಟ್ಟನು.


“ಈ ಲೋಕದಲ್ಲಿ ನೀವು ಹೊಂದಿರುವಂಥವುಗಳಿಂದ ದೇವರಿಗೆ ಸ್ನೇಹಿತರನ್ನು ಮಾಡಿಕೊಡಿರಿ. ನೀವು ಹೀಗೆ ಮಾಡಿದರೆ, ಈ ಲೋಕದವುಗಳು ನಿಮ್ಮ ಕೈಬಿಟ್ಟು ಹೋದಾಗ ನಿಮ್ಮನ್ನು ಶಾಶ್ವತವಾದ ಮನೆಗೆ ಸ್ವೀಕರಿಸಿಕೊಳ್ಳಲಾಗುವುದು.


ಒಂದೇ ಒಂದು ಮುಖ್ಯವಾದದ್ದು. ಮರಿಯಳು ಮಾಡಿದ ಆಯ್ಕೆ ಸರಿಯಾದದ್ದು. ಆಕೆಯಿಂದ ಅದು ಎಂದಿಗೂ ತೆಗೆಯಲ್ಪಡುವುದಿಲ್ಲ” ಎಂದನು.


ಆದರೆ ಪ್ರಿಯ ಸ್ನೇಹಿತರೇ, ಇದೊಂದನ್ನು ಮಾತ್ರ ಮರೆಯದಿರಿ. ಪ್ರಭುವಿಗೆ ಒಂದು ದಿನವು ಸಾವಿರ ವರ್ಷಗಳಂತಿದೆ ಮತ್ತು ಸಾವಿರ ವರ್ಷಗಳು ಒಂದು ದಿನದಂತಿದೆ.


ಸಹೋದರ ಸಹೋದರಿಯರೇ, ನಾನಿನ್ನೂ ಆ ಗುರಿಯನ್ನು ಮುಟ್ಟಿಲ್ಲವೆಂಬುದು ನನಗೆ ಗೊತ್ತಿದೆ. ಆದರೆ ನಾನು ಯಾವಾಗಲೂ ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ನನ್ನ ಮುಂದಿರುವ ಗುರಿಯನ್ನು ಮುಟ್ಟಲು ನನ್ನಿಂದಾದಷ್ಟರ ಮಟ್ಟಿಗೆ ಓಡುತ್ತಿದ್ದೇನೆ.


ಯೇಸು ತನ್ನ ಮಾತನ್ನು ಮುಂದುವರಿಸಿ ಅವರೆಲ್ಲರಿಗೆ ಹೇಳಿದ್ದೇನೆಂದರೆ: “ನನ್ನ ಹಿಂಬಾಲಕನಾಗಬಯಸುವವನು ತನ್ನನ್ನು ನಿರಾಕರಿಸಿ, ಪ್ರತಿದಿನ ತನ್ನ ಶಿಲುಬೆಯನ್ನು (ತನಗಾಗುವ ಹಿಂಸೆಯನ್ನು) ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲಿ ವಾಸಿಸುತ್ತಾ ಆತನ ಪ್ರಸನ್ನತೆಯನ್ನು ವೀಕ್ಷಿಸುತ್ತಾ ಆತನ ಮಾರ್ಗದರ್ಶನವನ್ನು ಎದುರುನೋಡುತ್ತಾ ಇರಬೇಕೆಂಬ ಒಂದೇ ಒಂದು ಕೋರಿಕೆಯನ್ನು ಯೆಹೋವನಲ್ಲಿ ಕೇಳಿಕೊಂಡು ಅದನ್ನೇ ಎದುರುನೋಡುತ್ತಿದ್ದೇನೆ.


ಅದಕ್ಕೆ ಅವನು, “ನಾನು ಚಿಕ್ಕಂದಿನಿಂದಲೂ ಆ ಆಜ್ಞೆಗಳಿಗೆಲ್ಲಾ ವಿಧೇಯನಾಗಿದ್ದೇನೆ!” ಎಂದು ಹೇಳಿದನು.


ಯೇಸುವಿನ ಈ ಮಾತುಗಳನ್ನು ಕೇಳಿದಾಗ ಅವನಿಗೆ ಬಹಳ ದುಃಖವಾಯಿತು. ಏಕೆಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು