Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:3 - ಪರಿಶುದ್ದ ಬೈಬಲ್‌

3 ಅದೇ ಊರಿನಲ್ಲಿ ಒಬ್ಬ ವಿಧವೆಯಿದ್ದಳು. ಆಕೆಯು ಅನೇಕ ಸಲ ನ್ಯಾಯಾಧೀಶನ ಬಳಿಗೆ ಬಂದು, ‘ಇಲ್ಲಿ ನನಗೊಬ್ಬನು ತೊಂದರೆ ಕೊಡುತ್ತಿದ್ದಾನೆ. ದಯವಿಟ್ಟು ನನಗೆ ನ್ಯಾಯವನ್ನು ದೊರಕಿಸಿಕೊಡಿ!’ ಎಂದು ಬೇಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದೇ ಊರಿನಲ್ಲಿ ಒಬ್ಬ ವಿಧವೆ ಇದ್ದಳು. ಆಕೆಯು ಅವನ ಬಳಿಗೆ ಬಂದು, ‘ನ್ಯಾಯವಿಚಾರಣೆಮಾಡಿ ನನ್ನ ವಿರೋಧಿಯಿಂದ ನನ್ನನ್ನು ಬಿಡಿಸು’ ಎಂದು ಕೇಳಿಕೊಳ್ಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದೇ ಊರಿನಲ್ಲಿ ಒಬ್ಬ ವಿಧವೆಯಿದ್ದಳು. ಅವಳು ಪದೇಪದೇ ಅವನ ಬಳಿಗೆ ಬಂದು, ‘ನನ್ನ ವಿರೋಧಿ ಅನ್ಯಾಯಮಾಡಿದ್ದಾನೆ; ನನಗೆ ನ್ಯಾಯ ದೊರಕಿಸಿಕೊಡಿ,’ ಎಂದು ಕೇಳಿಕೊಳ್ಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದೇ ಊರಿನಲ್ಲಿ ಒಬ್ಬ ವಿಧವೆ ಇದ್ದಳು. ಆಕೆಯು ಅವನ ಬಳಿಗೆ ಬಂದು - ನ್ಯಾಯ ವಿಚಾರಣೆಮಾಡಿ ನನ್ನ ವಿರೋಧಿಯಿಂದ ನನ್ನನ್ನು ಬಿಡಿಸು ಎಂದು ಹೇಳಿಕೊಳ್ಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅದೇ ಪಟ್ಟಣದಲ್ಲಿ ಒಬ್ಬ ವಿಧವೆಯಿದ್ದಳು. ಆಕೆ ಪದೇಪದೇ ಅವನ ಬಳಿಗೆ ಬಂದು, ‘ನನ್ನ ವಿರೋಧಿಯ ಎದುರಾಗಿ ನನಗೆ ನ್ಯಾಯ ದೊರಕಿಸಿಕೊಡು,’ ಎಂದು ಕೇಳಿಕೊಳ್ಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ತ್ಯಾಚ್ ಗಾಂವಾತ್ ಅಪ್ನಾಕ್ ನ್ಯಾಯ್ ನಿರ್‍ನಯ್ ಕರುನ್ ದಿವ್‍ಸಾಟಿ ಮನುನ್ ತ್ಯಾ ನ್ಯಾಯ್ ಕರ್‍ತಲ್ಯಾಕ್ಡೆ ಸದ್ದಿಚ್ ಯೆವ್ನಗೆತ್ ಎಕ್ ಘೊಮರಲ್ಲಿ ಬಾಯ್ಕೊಮನುಸ್ ಹೊತ್ತಿ. ಅನಿ ತೆಕಾ ತಿ, “ಮಾಜ್ಯಾ ವಿರೊದ್ಯಾಚ್ಯಾಕ್ನಾ ಮಾಕಾ ನ್ಯಾಯ್‍ ನಿರ್‍ನಯ್ ಕರುನ್ ದಿ” ಮನುನ್ ಸಾಂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:3
13 ತಿಳಿವುಗಳ ಹೋಲಿಕೆ  

ಒಳ್ಳೆಯದನ್ನೇ ಮಾಡಲು ಅಭ್ಯಾಸಮಾಡಿಕೊಳ್ಳಿರಿ. ಬೇರೆಯವರೊಂದಿಗೆ ನ್ಯಾಯವಂತರಾಗಿರಿ; ಕೆಡುಕರಿಗೆ ದಂಡನೆ ವಿಧಿಸಿರಿ; ಅನಾಥರಿಗೆ ಸಹಾಯಮಾಡಿರಿ; ವಿಧವೆಯರಿಗೂ ಸಹಾಯಮಾಡಿರಿ.”


“ಲೇವಿಯರು, ‘ಪರದೇಶಸ್ಥರಿಗೆ, ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯವಾದ ತೀರ್ಪನ್ನು ಕೊಡದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ಅವರು ಮಾಡಿದ ದುಷ್ಕೃತ್ಯಗಳಿಂದ ಅವರು ಬೆಳೆದಿದ್ದಾರೆ, ಕೊಬ್ಬಿದ್ದಾರೆ. ಅವರು ಮಾಡುವ ದುಷ್ಕೃತ್ಯಗಳಿಗೆ ಕೊನೆಯೇ ಇಲ್ಲ. ಅವರು ಅನಾಥ ಮಕ್ಕಳ ಪಕ್ಷವಹಿಸಿ ಮಾತನಾಡುವದಿಲ್ಲ. ಅವರು ಅನಾಥರಿಗೆ ಸಹಾಯ ಮಾಡುವದಿಲ್ಲ. ಅವರು ದಿಕ್ಕಿಲ್ಲದವರಿಗೆ ನ್ಯಾಯ ದೊರೆಯದಂತೆ ಮಾಡುವರು.


ಜನರು ತಮ್ಮ ಸಾವಿನ ಗಳಿಗೆಯಲ್ಲೂ ನನ್ನನ್ನು ಆಶೀರ್ವದಿಸಿದರು. ಕಷ್ಟದಲ್ಲಿದ್ದ ವಿಧವೆಯರಿಗೆ ನನ್ನಿಂದ ಆನಂದವಾಯಿತು.


ಆದರೆ ವಿಧವೆಯರಿಗೆ ದಾನಮಾಡದೆ ಅವರನ್ನು ನೀನು ಕಳುಹಿಸಿಬಿಟ್ಟಿರಬಹುದು. ಒಂದುವೇಳೆ ನೀನು ಅನಾಥರಿಗೆ ಮೋಸಮಾಡಿರಬಹುದು.


“ನಿಮ್ಮ ವಿರೋಧಿಯು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆದೊಯ್ಯುವಾಗ ಬೇಗನೆ ಅವನೊಂದಿಗೆ ಸ್ನೇಹಿತರಾಗಿ. ನೀವು ನ್ಯಾಯಾಲಯಕ್ಕೆ ಹೋಗುವ ಮೊದಲೇ ಇದನ್ನು ಮಾಡಬೇಕು. ನೀವು ಅವನ ಸ್ನೇಹಿತರಾಗದಿದ್ದರೆ, ಅವನು ನಿಮ್ಮನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿಯು ನಿಮ್ಮನ್ನು ಸೆರೆಮನೆಗೆ ಹಾಕಲು ಕಾವಲುಗಾರನಿಗೆ ಒಪ್ಪಿಸಬಹುದು.


“ಒಂದು ಊರಿನಲ್ಲಿ ಒಬ್ಬ ನ್ಯಾಯಾಧೀಶನಿದ್ದನು. ಅವನಿಗೆ ದೇವರಲ್ಲಿ ಭಯಭಕ್ತಿಯಿರಲಿಲ್ಲ. ಜನರು ತನ್ನ ಬಗ್ಗೆ ಏನು ಯೋಚಿಸುತ್ತಾರೆ ಎಂಬುದರ ಬಗ್ಗೆ ಅವನು ಗಮನ ಕೊಡಲಿಲ್ಲ.


ಆದರೆ ನ್ಯಾಯಾಧೀಶನು ಆ ಸ್ತ್ರೀಗೆ ಸಹಾಯಮಾಡಲು ಬಯಸಲಿಲ್ಲ. ಬಹಳ ಸಮಯದ ನಂತರ ಆ ನ್ಯಾಯಾಧೀಶನು ತನ್ನೊಳಗೆ, ‘ನನಗಂತೂ ದೇವರಲ್ಲಿ ಭಯಭಕ್ತಿಯಿಲ್ಲ. ಜನರು ನನ್ನ ಬಗ್ಗೆ ಏನು ಯೋಚಿಸುತ್ತಾರೆಂಬುದರ ಬಗ್ಗೆಯೂ ಗಮನವಿಲ್ಲ.


ಆದರೆ ಈ ಸ್ತ್ರೀ ಬಂದುಬಂದು ನನ್ನನ್ನು ಕುಗ್ಗಿಸಿಬಿಡುತ್ತಾಳೆ. ಈಕೆಗೆ ನಾನು ನ್ಯಾಯವನ್ನು ದೊರಕಿಸಿಕೊಟ್ಟರೆ, ಈಕೆ ನನ್ನನ್ನು ಕಾಡಿಸುವುದಿಲ್ಲ. ಇಲ್ಲವಾದರೆ, ಈಕೆಯು ನನ್ನನ್ನು ಕಾಡಿಸುತ್ತಲೇ ಇರುವಳು’ ಎಂದುಕೊಂಡನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು