ಲೂಕ 18:30 - ಪರಿಶುದ್ದ ಬೈಬಲ್30 ಅವನು ಈ ಜೀವನದಲ್ಲಿಯೇ ಅವುಗಳಿಗಿಂತ ಅನೇಕ ಪಾಲು ಹೆಚ್ಚಾದವುಗಳನ್ನು ಪಡೆಯುವನು ಮತ್ತು ತನ್ನ ಮುಂದಿನ ಲೋಕದಲ್ಲಿ ದೇವರೊಂದಿಗೆ ಸದಾಕಾಲ ಜೀವಿಸುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅವನಿಗೆ ಈ ಲೋಕದಲ್ಲಿ ಅನೇಕ ಪಾಲು ಹೆಚ್ಚಾಗಿ ಸಿಕ್ಕೇ ಸಿಕ್ಕುತ್ತವೇ. ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅವನು ಈ ಕಾಲದಲ್ಲಿ ಅದಕ್ಕಿಂತಲೂ ಮಿಗಿಲಾದುದನ್ನೂ ಮುಂದಿನ ಲೋಕದಲ್ಲಿ ಅಮರಜೀವವನ್ನೂ ಪಡೆಯುವನು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅವನಿಗೆ ಈಗಿನ ಕಾಲದಲ್ಲಿ ಅನೇಕ ಪಾಲು ಹೆಚ್ಚಾದವುಗಳು ಸಿಕ್ಕೇ ಸಿಕ್ಕುತ್ತವೆ; ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಕಾಲದಲ್ಲಿ ನಿತ್ಯಜೀವವನ್ನೂ ಹೊಂದುವನು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ತೊ ತೆಚ್ಯಾ ಜಿವನಾತ್, ತೆಚೆನ್ಕಿ ಜಾಸ್ತಿಚೆ ಘೆತಾ. ಅನಿ ಆಕ್ರಿಚ್ಯಾ ಕಾಲಾತ್ ಕನ್ನಾಚ್ ಮರಾನ್ ನಸ್ತಾನಾ ಝಿತ್ತೊ ರ್‍ಹಾತಲೆ ಭಾಗ್‍ಬಿ ತೆಕಾ ಗಾವ್ತಾ”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.
ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.