Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:7 - ಪರಿಶುದ್ದ ಬೈಬಲ್‌

7 ದೇವಜನರು ದೇವರಿಗೆ ಹಗಲಿರುಳು ಮೊರೆಯಿಡಬೇಕು. ದೇವರು ತನ್ನ ಜನರಿಗೆ ಸರಿಯಾದದ್ದನ್ನೇ ಯಾವಾಗಲೂ ಕೊಡುತ್ತಾನೆ. ತನ್ನ ಜನರಿಗೆ ಉತ್ತರ ಕೊಡುವುದರಲ್ಲಿ ದೇವರು ತಡಮಾಡುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲುರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ? ತಡಮಾಡಿಯಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇವರಾದುಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡುವಲ್ಲಿ ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯ ತೀರಿಸುವನೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರಾದುಕೊಂಡವರು ದೇವರಿಗೆ ಹಗಲುರಾತ್ರಿ ಮೊರೆಯಿಡುವಾಗ, ದೇವರು ಅವರ ವಿಷಯದಲ್ಲಿ ಅವರಿಗೆ ನ್ಯಾಯವನ್ನು ಕೊಡದೆ ಇರುವರೋ? ದೇವರು ನ್ಯಾಯ ಕೊಡಲು ತಡಮಾಡುವರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತರ್ ಅತ್ತಾ, ದೆವ್ ಅಪ್ನಾಕ್ಡೆ ದಿಸ್ -ರಾತ್ ಮಾಗ್ತಲ್ಯಾ ಅಪ್ನಾಚ್ಯಾ ಲೊಕಾಕ್ನಿ ನ್ಯಾಯ್ ಕರುನ್ ದಿ ನಾ ಕಾಯ್? ತೊ ಲಗ್ಗುನಾಚ್ ತೆಂಕಾ ತೆನಿ ಮಾಗಲ್ಲೆ ದಿ,ನಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:7
31 ತಿಳಿವುಗಳ ಹೋಲಿಕೆ  

ಕೆಲವು ಜನರು ತಿಳಿದುಕೊಂಡಿರುವಂತೆ, ಪ್ರಭುವು ತಾನು ವಾಗ್ದಾನ ಮಾಡಿದ್ದನ್ನು ತಡವಾಗಿ ನೆರವೇರಿಸುವುದಿಲ್ಲ. ದೇವರು ನಿಮ್ಮ ವಿಷಯದಲ್ಲಿ ಇನ್ನೂ ತಾಳ್ಮೆಯಿಂದಿದ್ದಾನಷ್ಟೆ. ಯಾವ ವ್ಯಕ್ತಿಯೂ ಕಳೆದುಹೋಗಬಾರದೆಂಬುದು ದೇವರ ಅಪೇಕ್ಷೆಯಾಗಿದೆ. ಪ್ರತಿಯೊಬ್ಬರೂ ತಮ್ಮ ಹೃದಯಗಳನ್ನು ಪರಿವರ್ತಿಸಿಕೊಂಡು, ಪಾಪ ಮಾಡುವುದನ್ನು ನಿಲ್ಲಿಸಬೇಕೆಂಬುದು ದೇವರ ಅಪೇಕ್ಷೆ.


ನೀವು ಇತರ ಜನರಂತೆ ಕೆಟ್ಟವರಾಗಿದ್ದೀರಿ. ಆದರೆ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡುತ್ತೀರಿ. ಅದೇ ರೀತಿಯಲ್ಲಿ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ತನ್ನನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮನನ್ನು ಖಂಡಿತವಾಗಿ ಕೊಡುತ್ತಾನೆ” ಎಂದು ಹೇಳಿದನು.


ಒಬ್ಬ ವಿಧವೆಯು ನಿಜವಾಗಿಯೂ ಸಹಾಯಕರಿಲ್ಲದೆ ಒಬ್ಬಂಟಿಗಳಾಗಿದ್ದರೆ, ಆಗ ಆಕೆಯು ತನ್ನ ರಕ್ಷಣೆಗಾಗಿ ದೇವರ ಮೇಲೆ ಭರವಸೆ ಇಡುವಳು. ಆ ಸ್ತ್ರೀಯು ಹಗಲು ರಾತ್ರಿಯೆಲ್ಲ ಪ್ರಾರ್ಥಿಸುವಳು. ಅವಳು ದೇವರ ಸಹಾಯವನ್ನು ಬೇಡುವಳು.


ಈ ಆತ್ಮಗಳು, “ಪವಿತ್ರನಾದ ಮತ್ತು ಸತ್ಯವಂತನಾದ ಪ್ರಭುವೇ, ನಮ್ಮನ್ನು ಕೊಂದ ಜನರಿಗೆ ತೀರ್ಪು ನೀಡಲು ಮತ್ತು ಅವರನ್ನು ದಂಡಿಸಲು ನೀನು ಎಷ್ಟು ಕಾಲ ತೆಗೆದುಕೊಳ್ಳುವೆ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದವು.


ದೇವರು ಯೋಗ್ಯವಾದುದ್ದನ್ನೇ ಮಾಡುತ್ತಾನೆ. ನಿಮಗೆ ತೊಂದರೆ ಕೊಡುವ ಜನರಿಗೆ ದೇವರು ತೊಂದರೆ ಕೊಡುತ್ತಾನೆ.


ತನ್ನ ಉಳಿದ ಜೀವಮಾನವೆಲ್ಲಾ ವಿಧವೆಯಾಗಿದ್ದ ಆಕೆಗೆ ಈಗ ಎಂಭತ್ತನಾಲ್ಕು ವರ್ಷ ವಯಸ್ಸಾಗಿತ್ತು. ಅನ್ನಳು ಯಾವಾಗಲೂ ದೇವಾಲಯದಲ್ಲಿಯೇ ಇದ್ದಳು. ಆಕೆ ಬೇರೆಲ್ಲಿಗೂ ಹೋಗುತ್ತಿರಲಿಲ್ಲ. ಆಕೆ ಉಪವಾಸ ಮಾಡುತ್ತಾ ಮತ್ತು ಹಗಲಿರುಳು ಪ್ರಾರ್ಥಿಸುತ್ತಾ ದೇವರನ್ನು ಆರಾಧಿಸುತ್ತಿದ್ದಳು.


ನೀವು ದೇವರಂತೆ ಒಳ್ಳೆಯವರಲ್ಲ, ಕೆಟ್ಟವರು. ಆದರೂ ನಿಮ್ಮ ಮಕ್ಕಳಿಗೆ ಒಳ್ಳೆಯ ವಸ್ತುಗಳನ್ನು ಕೊಡಬೇಕೆಂಬುದು ನಿಮಗೆ ತಿಳಿದಿದೆ. ಹೀಗಿರಲಾಗಿ ಪರಲೋಕದ ನಿಮ್ಮ ತಂದೆಯು ಸಹ ತನ್ನನ್ನು ಕೇಳುವವರಿಗೆ ಒಳ್ಳೆಯ ವಸ್ತುಗಳನ್ನು ನಿಶ್ಚಯವಾಗಿಯೂ ಕೊಡುತ್ತಾನೆ.


ಯೆಹೋವ ದೇವರೇ, ನೀನೇ ನನ್ನ ರಕ್ಷಕನು. ಹಗಲಿರುಳು ನಿನಗೆ ಪ್ರಾರ್ಥಿಸುತ್ತಿದ್ದೇನೆ.


ಭವಿಷ್ಯದ ಒಂದು ವಿಶೇಷ ಸಮಯದ ಕುರಿತಾಗಿ ಈ ಸಂದೇಶ. ಈ ಸಂದೇಶವು ಅಂತ್ಯದ ವಿಷಯವಾಗಿ ಇದೆ. ಇದು ಖಂಡಿತವಾಗಿಯೂ ನೆರವೇರುತ್ತದೆ. ಆ ಸಮಯವು ಎಂದಿಗೂ ಬರುವುದಿಲ್ಲ ಎಂಬಂತೆ ಕಾಣಬಹುದು. ಆದರೆ ತಾಳ್ಮೆಯಿಂದಿರು; ಅದನ್ನು ನಿರೀಕ್ಷಿಸುತ್ತಾ ಇರು. ಆ ಸಮಯವು ಬರುವದು. ಅದು ತಡವಾಗುವುದಿಲ್ಲ.


ಪರಲೋಕವೇ, ಇದರಿಂದ ನೀನೂ ಸಂತೋಷಪಡು! ದೇವರ ಪರಿಶುದ್ಧ ಜನರೇ, ಅಪೊಸ್ತಲರೇ, ಪ್ರವಾದಿಗಳೇ, ನೀವೂ ಸಂತೋಷಪಡಿರಿ! ಅವಳು ನಿಮಗೆ ಮಾಡಿದ ಕೇಡುಗಳಿಗಾಗಿ ದೇವರು ಅವಳನ್ನು ದಂಡಿಸಿದನು.’”


ಹಗಲಿರುಳು ನಿಮ್ಮ ವಿಷಯದಲ್ಲಿ ಬಹಳವಾಗಿ ಪ್ರಾರ್ಥನೆ ಮಾಡುತ್ತಿದ್ದೇವೆ. ನಿಮ್ಮನ್ನು ಕಣ್ಣಾರೆ ಕಂಡು ನಿಮ್ಮ ನಂಬಿಕೆಯಲ್ಲಿರುವ ಕುಂದುಕೊರತೆಗಳನ್ನು ನಿವಾರಿಸಬೇಕೆಂದು ದೇವರಲ್ಲಿ ಹಗಲಿರುಳು ಪ್ರಾರ್ಥಿಸುತ್ತಿದ್ದೇವೆ.


ದೇವರು ನಿಮ್ಮನ್ನು ಆರಿಸಿಕೊಂಡಿದ್ದಾನೆ ಮತ್ತು ನಿಮ್ಮನ್ನು ತನ್ನ ಪವಿತ್ರ ಜನರನ್ನಾಗಿಸಿದ್ದಾನೆ. ಆತನು ನಿಮ್ಮನ್ನು ಪ್ರೀತಿಸುತ್ತಾನೆ. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


ದೇವರು ಆರಿಸಿಕೊಂಡಿರುವ ಜನರ ಮೇಲೆ ಯಾರು ದೋಷಾರೋಪಣೆ ಮಾಡಬಲ್ಲರು? ಯಾರೂ ಇಲ್ಲ! ಅವರನ್ನು ನೀತಿವಂತರನ್ನಾಗಿ ಮಾಡುವಾತನು ದೇವರೇ.


ಆದ್ದರಿಂದ ಈ ಜನರು ಈಗ ದೇವರ ಸಿಂಹಾಸನದ ಮುಂದೆ ಇದ್ದಾರೆ. ಅವರು ದೇವರನ್ನು ಆತನ ಆಲಯದಲ್ಲಿ ಹಗಲಿರುಳು ಆರಾಧಿಸುತ್ತಾರೆ. ಸಿಂಹಾಸನದ ಮೇಲೆ ಕುಳಿತಿರುವಾತನು ಅವರನ್ನು ಸಂರಕ್ಷಿಸುತ್ತಾನೆ.


ದೇವರ ಸೇವಕನಾದ ಮತ್ತು ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಬರೆಯುವ ಪತ್ರ. ದೇವರು ಆರಿಸಿಕೊಂಡ ಜನರ ನಂಬಿಕೆಯನ್ನು ವೃದ್ಧಿಗೊಳಿಸುವುದಕ್ಕಾಗಿ ಮತ್ತು ಅವರಿಗೆ ಸತ್ಯವನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಲಾಯಿತು. ದೇವರ ಸೇವೆಯನ್ನು ಹೇಗೆ ಮಾಡಬೇಕೆಂಬುದನ್ನು ಆ ಸತ್ಯವು ತೋರ್ಪಡಿಸುತ್ತಿದೆ.


ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ತಪ್ಪದೆ ನಿನ್ನನ್ನು ಜ್ಞಾಪಿಸಿಕೊಂಡು ನಿನ್ನ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇನೆ. ನನ್ನ ಪೂರ್ವಿಕರು ಸೇವೆ ಸಲ್ಲಿಸಿದ್ದು ಆತನಿಗೇ. ಯೋಗ್ಯವಾದದ್ದೆಂದು ನನಗೆ ತಿಳಿದಿರುವುದನ್ನೇ ಮಾಡುತ್ತಾ ಆತನ ಸೇವೆ ಮಾಡುತ್ತಿದ್ದೇನೆ.


ಆತನು ಭೂನಿವಾಸಿಗಳಿಗೆಲ್ಲಾ ನ್ಯಾಯವಾಗಿ ತೀರ್ಪುಮಾಡುವನು. ಆತನು ಜನಾಂಗಗಳಿಗೆಲ್ಲಾ ಯಥಾರ್ಥವಾಗಿ ತೀರ್ಪುಮಾಡುವನು.


ನೀವು ಆ ವಿಧವೆಯರಿಗೆ ಅಥವಾ ಅನಾಥರಿಗೆ ಕೇಡುಮಾಡಿದರೆ, ನಾನು ಅವರ ಗೋಳಾಟವನ್ನು ಕೇಳಿ,


ಯಾಕೋಬೇ, ಇದು ಸತ್ಯ! ಇಸ್ರೇಲೇ, ನೀನದನ್ನು ನಂಬಬೇಕು. ಹೀಗಿರಲು ನೀನು, “ಯೆಹೋವನು ನನ್ನ ನಡತೆಯನ್ನು ಗಮನಿಸುವದಿಲ್ಲ. ನನ್ನನ್ನು ಕಂಡುಹಿಡಿದು ಶಿಕ್ಷಿಸುವದಿಲ್ಲ” ಎಂದು ಹೇಳುವೆ.


“ದೇವರು ಭಯಂಕರವಾದ ಆ ಸಮಯವನ್ನು ಕಡಿಮೆಗೊಳಿಸಲು ತೀರ್ಮಾನಿಸಿದ್ದಾನೆ. ಇಲ್ಲವಾದರೆ, ಜೀವದಿಂದ ಉಳಿಯಲು ಯಾರಿಗೂ ಸಾಧ್ಯವಿಲ್ಲ. ತಾನು ಆರಿಸಿಕೊಂಡ ಜನರ ನಿಮಿತ್ತ ದೇವರು ಆ ಸಮಯವನ್ನು ಕಡಿಮೆ ಮಾಡಿದ್ದಾನೆ.


ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ದೇವರು ಆರಿಸಿಕೊಂಡಿರುವ ಜನರನ್ನು ಮೋಸಗೊಳಿಸುವುದಕ್ಕಾಗಿ ಮಹತ್ಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವರು.


ಈ ಸಂಗತಿಗಳು ಸಂಭವಿಸುವುದಕ್ಕೆ ತೊಡಗುವಾಗ ಭಯಪಡಬೇಡಿರಿ. ಮೇಲೆ ನೋಡಿ ಸಂತೋಷಪಡಿರಿ! ಚಿಂತೆಮಾಡಬೇಡಿರಿ. ಸಂತೋಷಪಡಿರಿ, ಏಕೆಂದರೆ ದೇವರು ನಿಮ್ಮನ್ನು ಬಿಡುಗಡೆಗೊಳಿಸುವ ಕಾಲ ಸಮೀಪವಾಗಿದೆ ಎಂಬುದಕ್ಕೆ ಅವು ಸೂಚನೆಯಾಗಿವೆ.”


ಆದ್ದರಿಂದ ನಾನು ತಾಳ್ಮೆಯಿಂದಲೇ ಈ ತೊಂದರೆಗಳನ್ನು ಅಂಗೀಕರಿಸಿದ್ದೇನೆ. ಏಕೆಂದರೆ ದೇವರು ಆರಿಸಿರುವ ಜನರೆಲ್ಲರಿಗೂ ಸಹಾಯ ಮಾಡಬೇಕೆಂಬುದು ನನ್ನ ಅಪೇಕ್ಷೆಯಾಗಿದೆ. ಆ ಜನರು ಕ್ರಿಸ್ತ ಯೇಸುವಿನಲ್ಲಿ ರಕ್ಷಣೆ ಪಡೆಯಲೆಂದು ನಾನು ಈ ತೊಂದರೆಗಳನ್ನೆಲ್ಲ ಸ್ವೀಕರಿಸಿಕೊಂಡಿದ್ದೇನೆ. ಈ ರಕ್ಷಣೆಯೊಂದಿಗೆ ನಿತ್ಯಪ್ರಭಾವವು ದೊರೆಯುತ್ತದೆ.


ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು, ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನಿಯ ಎಂಬ ಪ್ರದೇಶಗಳಲ್ಲಿ ಚದರಿಹೋಗಿ ಪ್ರವಾಸಿಗಳಾದ ದೇವಜನರಿಗೆ ಬರೆಯುವ ಪತ್ರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು