ಲೂಕ 18:9 - ಪರಿಶುದ್ದ ಬೈಬಲ್9 ಅಲ್ಲಿ ಕೆಲವರು ತಾವೇ ಬಹಳ ಒಳ್ಳೆಯವರೆಂದು ಭಾವಿಸಿಕೊಂಡಿದ್ದರು. ಈ ಜನರು ತಾವು ಬೇರೆಯವರಿಗಿಂತ ಉತ್ತಮರೋ ಎಂಬಂತೆ ವರ್ತಿಸುತ್ತಿದ್ದರು. ಯೇಸು ಅವರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕೆಲವರು ತಾವೇ ಸತ್ಪುರುಷರು ಎಂದುಕೊಂಡು ಇತರರನ್ನು ತುಚ್ಛವಾಗಿ ಕಾಣುತ್ತಿದ್ದರು. ಅಂಥವರನ್ನು ಉದ್ದೇಶಿಸಿ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ಉದಾಸೀನಮಾಡುವಂಥ ಕೆಲವರಿಗೆ ಒಂದು ಸಾಮ್ಯವನ್ನು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸೆಯನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ, ಯೇಸು ಈ ಸಾಮ್ಯವನ್ನು ಹೇಳಿದರು: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಅಪ್ನಿ ಬರೆ, ಅನಿ ಹುರಲ್ಲಿ ಸಗ್ಳಿ ಲೊಕಾ ವಾಯ್ಟ್ ಮನುನ್ ಯವ್ಜುನ್ಗೆತ್ ರ್‍ಹಾತಲ್ಯಾ ಲೊಕಾಕ್ನಿ ಜೆಜುನ್, ಹಿ, ಕಾನಿ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”