Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:11 - ಪರಿಶುದ್ದ ಬೈಬಲ್‌

11 ಯೇಸು ಪ್ರಯಾಣ ಮಾಡುತ್ತಾ ಜೆರುಸಲೇಮಿನ ಸಮೀಪಕ್ಕೆ ಬಂದನು. ಕೆಲವು ಜನರು ದೇವರ ರಾಜ್ಯವು ಬೇಗನೆ ಬರಲಿದೆ ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದರಿಂದಲೂ ಇನ್ನೂ ಒಂದು ಸಾಮ್ಯವನ್ನು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯೇಸುಸ್ವಾಮಿ ಈಗ ಜೆರುಸಲೇಮಿಗೆ ಸಮೀಪದಲ್ಲೇ ಇದ್ದರು. ಅವರ ಮಾತುಗಳನ್ನು ಕೇಳುತ್ತಿದ್ದ ಜನರು ದೇವರ ಸಾಮ್ರಾಜ್ಯ ಇದೀಗಲೇ ಪ್ರತ್ಯಕ್ಷವಾಗುವುದೆಂದು ಭಾವಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇವಿುಗೆ ಸಮೀಪವಾಗಿದ್ದದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದದರಿಂದಲೂ ಇನ್ನೂ ಒಂದು ಸಾಮ್ಯವನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ, ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದುದರಿಂದಲೂ ದೇವರ ರಾಜ್ಯವು ಕೂಡಲೇ ಪ್ರತ್ಯಕ್ಷವಾಗುವುದೆಂದು ಅವರು ಭಾವಿಸಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಲೊಕಾ ಹೆ ಸಗ್ಳೆ ಆಯ್ಕುಲಾಗಲ್ಲಿ, ತನ್ನಾ ಜೆಜುನ್ ತೆಂಕಾ ಎಕ್ ಕಾನಿ ಸಾಂಗ್ಲ್ಯಾನ್ ಅತ್ತಾ ತೊ ಜೆರುಜಲೆಮಾಚ್ಯಾ ಎಗ್ದಮ್ ಜಗ್ಗೊಳ್ ಪಾವಲ್ಲೊ, ಅನಿ ತೆನಿ, ದೆವಾಚೆ ರಾಜ್ ಅತ್ತಾ ದಿಸುಕ್ ಜಗ್ಗೊಳ್ ಯೆಲಾ ಮನುನ್ ಯವ್ಜುನ್ ಘೆವ್ನ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:11
4 ತಿಳಿವುಗಳ ಹೋಲಿಕೆ  

ಫರಿಸಾಯರಲ್ಲಿ ಕೆಲವರು ಯೇಸುವನ್ನು, “ದೇವರ ರಾಜ್ಯವು ಯಾವಾಗ ಬರುವುದು?” ಎಂದು ಕೇಳಿದರು. ಯೇಸು ಅವರಿಗೆ, “ದೇವರ ರಾಜ್ಯವು ಬರುತ್ತಿದೆ, ಆದರೆ ನಿಮ್ಮ ಕಣ್ಣುಗಳಿಗೆ ಕಾಣಿಸುವಂತೆ ಅದು ಬರುವುದಿಲ್ಲ.


ಅಪೊಸ್ತಲರು ಒಟ್ಟಾಗಿ ಸೇರಿದ್ದಾಗ, ಅವರು ಯೇಸುವಿಗೆ, “ಪ್ರಭುವೇ, ನೀನು ಯೆಹೂದ್ಯರಿಗೆ ಮತ್ತೆ ಅವರ ರಾಜ್ಯವನ್ನು ಕೊಡುವಂಥದ್ದು ಈ ಕಾಲದಲ್ಲೋ?” ಎಂದು ಕೇಳಿದರು.


ಯೇಸು ಮತ್ತೆ ಪರಲೋಕಕ್ಕೆ ಹಿಂತಿರುಗುವ ಸಮಯ ಹತ್ತಿರವಾಗುತ್ತಿತ್ತು. ಆದ್ದರಿಂದ ಆತನು ಜೆರುಸಲೇಮಿಗೆ ಹೋಗಲು ತೀರ್ಮಾನಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು