Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:29 - ಪರಿಶುದ್ದ ಬೈಬಲ್‌

29 ಯೇಸು ಬೇತ್ಛಗೆ ಮತ್ತು ಬೆಥಾನಿಯ ಎಂಬ ಊರುಗಳ ಸಮೀಪಕ್ಕೆ ಬಂದನು. ಈ ಊರುಗಳು ಆಲಿವ್ ಮರಗಳ ಬೆಟ್ಟ ಎಂದು ಕರೆಯಲ್ಪಟ್ಟ ಗುಡ್ಡದ ಹತ್ತಿರವಿತ್ತು. ಯೇಸು ಇಬ್ಬರು ಶಿಷ್ಯರನ್ನು ಕರೆದು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅನಂತರ ಆತನು ಎಣ್ಣೆಮರಗಳ ಗುಡ್ಡ ಎನಿಸಿಕೊಳ್ಳುವ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ ಶಿಷ್ಯರಲ್ಲಿ ಇಬ್ಬರನ್ನು ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಓಲಿವ್ ತೋಪಿನ ಗುಡ್ಡದ ಬಳಿಯಿರುವ ಬೆತ್ಫಗೆ ಮತ್ತು ಬೆಥಾನಿಯ ಎಂಬ ಊರುಗಳನ್ನು ಸಮೀಪಿಸಿದಾಗ ತಮ್ಮ ಇಬ್ಬರು ಶಿಷ್ಯರನ್ನು ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಮೇಲೆ ಆತನು ಎಣ್ಣೇಮರಗಳ ಗುಡ್ಡ ಎನಿಸಿಕೊಳ್ಳುವ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ ಶಿಷ್ಯರಲ್ಲಿ ಇಬ್ಬರನ್ನು ಕರೆದು - ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಇದಾದ ಮೇಲೆ ಅವರು ಓಲಿವ್ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ, ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತೊ ಓಲಿವ್ ಮಡ್ಡಿವೈಲ್ಯಾ ಬೆತ್ಫಗೆ, ಅನಿ ಬೆಥನಿಚ್ಯಾ ಜಗ್ಗೊಳ್ ಯೆವ್ನ್ ಪಾವಲ್ಲ್ಯಾ ತನ್ನಾ ತೆನಿ ಅಪ್ನಾಚ್ಯಾ ದೊಗೆ ಜಾನಾ ಶಿಸಾಕ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:29
11 ತಿಳಿವುಗಳ ಹೋಲಿಕೆ  

ಬಳಿಕ ಆತನು ಆ ಸ್ಥಳವನ್ನು ಬಿಟ್ಟು ಬೆಥಾನಿ ಪಟ್ಟಣಕ್ಕೆ ಹೊರಟುಹೋದನು. ಯೇಸು ಆ ರಾತ್ರಿ ಅಲ್ಲಿಯೇ ತಂಗಿದನು.


ಬಳಿಕ ಅಪೊಸ್ತಲರು ಆಲಿವ್ ಮರಗಳ ಗುಡ್ಡದಿಂದ ಜೆರುಸಲೇಮಿಗೆ ಹಿಂತಿರುಗಿಹೋದರು. (ಈ ಗುಡ್ಡಕ್ಕೂ ಜೆರುಸಲೇಮಿಗೂ ಸುಮಾರು ಅರ್ಧ ಮೈಲಿ ಅಂತರವಿದೆ.)


ಅದೇ ಸಮಯದಲ್ಲಿ ಜೆರುಸಲೇಮಿಗೆ ಪೂರ್ವದಲ್ಲಿರುವ ಆಲೀವ್ ಮರಗಳ ಬೆಟ್ಟದ ಮೇಲೆ ನಿಂತುಕೊಳ್ಳುವನು. ಆ ಬೆಟ್ಟವು ಇಬ್ಭಾಗವಾಗುವದು. ಅದರ ಒಂದು ಭಾಗವು ಉತ್ತರಕ್ಕೆ ಹೋಗುವದು, ಇನ್ನೊಂದು ಭಾಗವು ದಕ್ಷಿಣದ ಕಡೆಗೆ ಹೋಗುವದು.


ಯೇಸು ತನ್ನ ಶಿಷ್ಯರನ್ನು ಜೆರುಸಲೇಮಿನ ಹೊರಗೆ ಬೆಥಾನಿಯದ ಸಮೀಪಕ್ಕೆ ಕರೆದುಕೊಂಡು ಹೋದನು. ಯೇಸು ತನ್ನ ಕೈಗಳನ್ನು ಎತ್ತಿ ಶಿಷ್ಯರನ್ನು ಆಶೀರ್ವದಿಸಿದನು.


ಯೇಸು ಪಟ್ಟಣದಿಂದ (ಜೆರುಸಲೇಮ್) ಆಲಿವ್ ಮರಗಳ ಗುಡ್ಡಕ್ಕೆ ಹೋದನು.


ಯೇಸು ಹಗಲೆಲ್ಲಾ ದೇವಾಲಯದಲ್ಲಿ ಜನರಿಗೆ ಉಪದೇಶಿಸುತ್ತಿದ್ದನು. ರಾತ್ರಿಯಲ್ಲಾದರೋ ಪಟ್ಟಣದ ಹೊರಗಿದ್ದ ಆಲಿವ್ ಮರಗಳ ಗುಡ್ಡದ ಮೇಲೆ ಇರುತ್ತಿದ್ದನು.


ಯೇಸು ಜೆರುಸಲೇಮಿಗೆ ಸಮೀಪಿಸಿ ಆಲಿವ್ ಮರಗಳ ಗುಡ್ಡದ ಬಳಿಗೆ ಬಂದನು. ಆತನನ್ನು ಹಿಂಬಾಲಿಸುತ್ತಿದ್ದ ಶಿಷ್ಯ ಸಮೂಹದಲ್ಲಿದ್ದವರೆಲ್ಲರೂ ಸಂತೋಷಪಡುತ್ತಾ ತಾವು ನೋಡಿದ ಎಲ್ಲಾ ಮಹತ್ಕಾರ್ಯಗಳಿಗಾಗಿ ದೇವರನ್ನು ಸ್ತುತಿಸಿದರು.


“ಅಲ್ಲಿ ಕಾಣುವ ಊರಿಗೆ ಹೋಗಿರಿ. ನೀವು ಆ ಊರನ್ನು ಪ್ರವೇಶಿಸಿದಾಗ ಕಟ್ಟಿಹಾಕಿರುವ ಒಂದು ಪ್ರಾಯದ ಕತ್ತೆಯನ್ನು ಕಾಣುವಿರಿ. ಆ ಕತ್ತೆಯ ಮೇಲೆ ಯಾರೂ ಇದುವರೆಗೆ ಸವಾರಿಮಾಡಿಲ್ಲ. ಆ ಕತ್ತೆಯನ್ನು ಬಿಚ್ಚಿಕೊಂಡು ಇಲ್ಲಿಗೆ ಕರೆತನ್ನಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು