Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:41 - ಪರಿಶುದ್ದ ಬೈಬಲ್‌

41 ಯೇಸು ಜೆರುಸಲೇಮಿನ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯದಲ್ಲಿ ಕಣ್ಣೀರಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಯೇಸುಸ್ವಾಮಿ ಜೆರುಸಲೇಮ್ ಪಟ್ಟಣಕ್ಕೆ ಇನ್ನೂ ಹತ್ತಿರವಾಗಿ ಬಂದು ಅದನ್ನು ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ತರುವಾಯ ಆತನು ಸಮೀಪಕ್ಕೆ ಬಂದಾಗ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಅತ್ತು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ತರುವಾಯ ಯೇಸು ಯೆರೂಸಲೇಮ ಪಟ್ಟಣವನ್ನೂ ಅದರ ಸ್ಥಿತಿಯನ್ನೂ ಕಂಡು, ಅದರ ಸಲುವಾಗಿ ಅತ್ತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಜೆಜು ಜೆರುಜಲೆಮ್ ಶಾರಾಚ್ಯಾ ಜಗ್ಗೊಳ್ ಯೆಲೊ, ಅನಿ ತ್ಯಾ ಶಾರಾಕ್ ಬಗಟ್ಲ್ಯಾನ್, ಅನಿ ತೊ ತ್ಯಾ ಶಾರಾಸಾಟಿ ರಡ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:41
14 ತಿಳಿವುಗಳ ಹೋಲಿಕೆ  

ಯೇಸು ಕಣ್ಣೀರಿಟ್ಟನು.


ಯೆಹೋವನೇ, ನಾನು ನಿನ್ನನ್ನು ಬಿಟ್ಟು ಓಡಿಹೋಗಲಿಲ್ಲ, ನಾನು ನಿನ್ನನ್ನು ಅನುಸರಿಸಿದೆನು. ನೀನು ಹೇಳಿದಂತೆ ನಾನು ಕುರುಬನಾದೆ. ಆ ಭಯಂಕರ ದಿನವು ಬರಲೆಂದು ನಾನು ಬಯಸಲಿಲ್ಲ. ಯೆಹೋವನೇ, ನಾನು ಹೇಳಿದ್ದೆಲ್ಲ ನಿನಗೆ ಗೊತ್ತಿದೆ. ಈಗ ನಡೆಯುತ್ತಿರುವುದನ್ನೆಲ್ಲಾ ನೀನು ನೋಡುತ್ತಿರುವೆ.


ನಿನ್ನ ವಾಕ್ಯಕ್ಕೆ ವಿಧೇಯರಾಗದ ಆ ದ್ರೋಹಿಗಳನ್ನು ನೋಡಿದರೆ ನನಗೆ ಅಸಹ್ಯವಾಗುತ್ತದೆ.


ಜನರು ನಿನ್ನ ಉಪದೇಶಗಳಿಗೆ ವಿಧೇಯರಾಗದಿರುವುದರಿಂದ ನನ್ನ ಕಣ್ಣೀರು ಗೋಳಾಟದಿಂದ ನದಿಯಾಗಿ ಹರಿಯುತ್ತಿದೆ.


ಯೆಹೂದದ ಜನರಾದ ನೀವು ಯೆಹೋವನ ಮಾತನ್ನು ಕೇಳದಿದ್ದರೆ, ನಾನು ಗುಟ್ಟಾದ ಸ್ಥಳದಲ್ಲಿ ಅಳುವೆನು. ನಿಮ್ಮ ಅಹಂಕಾರವು ನನ್ನನ್ನು ಅಳುವ ಹಾಗೆ ಮಾಡುವುದು. ನಾನು ಬಹಳ ಗಟ್ಟಿಯಾಗಿ ಅಳುವೆನು, ನನ್ನ ಕಣ್ಣುಗಳಿಂದ ಕಣ್ಣೀರು ಹೊರಸೂಸುವುದು. ಏಕೆಂದರೆ ಯೆಹೋವನ ಮಂದೆಯು ಸೆರೆಹಿಡಿಯಲ್ಪಡುವುದು.


ನನ್ನ ತಲೆಯಲ್ಲೆಲ್ಲ ನೀರು ತುಂಬಿಕೊಂಡಿದ್ದು, ನನ್ನ ಕಣ್ಣುಗಳು ನೀರಿನ ಬುಗ್ಗೆಗಳಾಗಿದ್ದರೆ, ನಾಶಮಾಡಲ್ಪಟ್ಟ ನನ್ನ ಜನರಿಗಾಗಿ ಹಗಲಿರುಳು ಗೋಳಾಡುತ್ತಿದ್ದೆ.


ನಿನ್ನ ಉಪದೇಶಗಳನ್ನು ಅನುಸರಿಸದ ದುಷ್ಟರನ್ನು ನಾನು ಕಾಣುವಾಗ ಬಹುಕೋಪಗೊಳ್ಳುವೆ.


“ಎಫ್ರಾಯೀಮೇ, ನಿನ್ನನ್ನು ಬಿಟ್ಟುಬಿಡಲು ನನಗೆ ಇಷ್ಟವಿಲ್ಲ. ಇಸ್ರೇಲೇ, ನಿನ್ನನ್ನು ಸಂರಕ್ಷಿಸಲು ನನಗೆ ಇಷ್ಟ. ನಿನ್ನನ್ನು ಅದ್ಮದಂತೆ ಮಾಡಲು ನನಗೆ ಮನಸ್ಸಿಲ್ಲ. ನಿನ್ನನ್ನು ಜೆಬೊಯೀಮಿನಂತೆ ಮಾಡಲು ನನಗೆ ಮನಸ್ಸಿಲ್ಲ. ನಾನು ನನ್ನ ನಿರ್ಧಾರವನ್ನು ಬದಲಾಯಿಸುತ್ತಿದ್ದೇನೆ. ನಿನ್ನ ಮೇಲಿರುವ ನನ್ನ ಪ್ರೀತಿಯು ಆಳವಾಗಿದೆ.


ಹಜಾಯೇಲನು ನಾಚಿಕೊಳ್ಳುವ ತನಕ ಎಲೀಷನು ಅವನನ್ನು ಒಂದೇ ಸಮನೆ ನೋಡಿದನು. ನಂತರ ದೇವಮನುಷ್ಯನು ಅಳತೊಡಗಿದನು.


ಆದ್ದರಿಂದ ನಾನು ಹೇಳುವುದೇನೆಂದರೆ: “ನೀವು ನನ್ನ ಕಡೆಗೆ ನೋಡಬೇಡಿ! ನನ್ನನ್ನು ಅಳಲು ಬಿಡಿರಿ! ಜೆರುಸಲೇಮಿನ ನಾಶನದ ಕುರಿತಾಗಿ ನನ್ನನ್ನು ಕೂಡಲೇ ಸಂತೈಸಬೇಡಿರಿ.”


ಪೆರಾಚೀಮ್ ಬೆಟ್ಟದ ಮೇಲೆ ಯೆಹೋವನು ಯುದ್ಧ ಮಾಡಿದಂತೆಯೇ ಆತನು ಯುದ್ಧಮಾಡುವನು. ಗಿಬ್ಯೋನ್ ಕಣಿವೆಯಲ್ಲಿ ಯೆಹೋವನು ಕೋಪಗೊಂಡಿದ್ದಂತೆಯೇ ಕೋಪಗೊಳ್ಳುವನು. ಆಗ ಆತನು ಮಾಡಬೇಕಾದ ಕಾರ್ಯಗಳನ್ನು ಮಾಡುವನು. ಯೆಹೋವನು ಕೆಲವು ಅಪರಿಚಿತವಾದ ಸಂಗತಿಗಳನ್ನು ಮಾಡುವನು. ಆದರೆ ಆತನು ತನ್ನ ಕಾರ್ಯವನ್ನು ಮಾಡಿಮುಗಿಸುವನು. ಆ ಕೆಲಸವು ಒಬ್ಬ ಪರಿಚಯವಿಲ್ಲದವನ ಕೆಲಸವಾಗಿದೆ.


ಜೆರುಸಲೇಮಿಗೆ, “ನಿನಗೆ ಯಾವುದರಿಂದ ಸಮಾಧಾನವಾಗುತ್ತದೆ ಎಂಬುದನ್ನು ನೀನು ಇಂದೇ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದಾಗಿತ್ತು! ಆದರೆ ನೀನು ಅದನ್ನು ತಿಳಿಯಲಾರೆ, ಏಕೆಂದರೆ ಅದು ನಿನಗೆ ಮರೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು