ಲೂಕ 19:44 - ಪರಿಶುದ್ದ ಬೈಬಲ್44 ನಿನ್ನನ್ನೂ ನಿನ್ನ ಜನರೆಲ್ಲರನ್ನೂ ನಾಶಮಾಡುವರು. ನಿನ್ನ ಕಟ್ಟಡಗಳಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ದೇವರು ನಿನ್ನನ್ನು ರಕ್ಷಿಸುವುದಕ್ಕೆ ಬಂದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ ಇದೆಲ್ಲಾ ನಿನಗೆ ಸಂಭವಿಸುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ನಿನ್ನನ್ನೂ ನಿನ್ನೊಳಗಿನ ಜನರನ್ನೂ ಧ್ವಂಸಮಾಡುವರು; ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ, ದೇವರು ನಿನ್ನನ್ನು ಅರಸಿ ಬಂದ ಕಾಲವನ್ನು ನೀನು ಅರಿತುಕೊಳ್ಳದೆಹೋದೆ,” ಎಂದು ಅದರ ಸಲುವಾಗಿ ಕಣ್ಣೀರಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಇದಲ್ಲದೆ ಅವರು ಗೋಡೆಯೊಳಗಿನ ನಿನ್ನನ್ನೂ ನಿನ್ನ ಮಕ್ಕಳನ್ನೂ ನೆಲಕ್ಕೆ ಬಡಿಯುವರು. ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ ದೇವರು ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ಅನಿ ತೆನಿ ತುಜ್ಯಾ ಭುತ್ತುರ್ ಹೊತ್ತ್ಯಾ ಸಗ್ಳ್ಯಾ ಲೊಕಾಕ್ನಿ ನಾಸ್ ಕರ್‍ತ್ಯಾತ್; ತುಜ್ಯಾ ಭೊತ್ಯಾನ್ಲ್ಯಾ ಭಿತ್ತಿಚೊ ಎಕ್ ಗುಂಡ್ಯಾರ್ ಗುಂಡೊ ಸೈತ್ ಥೈನಸ್ತಾನಾ ಕೊಸ್ಳುನ್ ಘಾಲ್ತ್ಯಾತ್, ಕಶ್ಯಾಕ್ ಮಟ್ಲ್ಯಾರ್, ದೆವ್ ತುಕಾ ಬಚಾವ್ ಕರುಕ್ ಮನುನ್ ಯೆಲ್ಲೊ ಎಳ್ ತಿಯಾ ವಳ್ಕುಕ್ ನೈ! ಅಧ್ಯಾಯವನ್ನು ನೋಡಿ |
“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.