ಲೂಕ 19:8 - ಪರಿಶುದ್ದ ಬೈಬಲ್8 ಜಕ್ಕಾಯನು ಪ್ರಭುವಿಗೆ (ಯೇಸುವಿಗೆ), “ನಾನು ಜನರಿಗೆ ಉಪಕಾರ ಮಾಡಬೇಕೆಂದಿದ್ದೇನೆ. ನಾನು ನನ್ನ ಹಣದಲ್ಲಿ ಅರ್ಧವನ್ನು ಬಡವರಿಗೆ ಕೊಡುವೆನು. ನಾನು ಯಾರಿಗಾದರೂ ಮೋಸಮಾಡಿದ್ದರೆ, ಆ ವ್ಯಕ್ತಿಗೆ ಅದರ ನಾಲ್ಕರಷ್ಟು ಹೆಚ್ಚಾಗಿ ಕೊಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಜಕ್ಕಾಯನು ನೆರೆದಿದ್ದ ಜನರ ಮುಂದೆ ಎದ್ದುನಿಂತು ಯೇಸುವಿಗೆ, “ಪ್ರಭುವೇ, ನನ್ನ ಆಸ್ತಿಪಾಸ್ತಿಯಲ್ಲಿ ಅರ್ಧಭಾಗವನ್ನು ಬಡಬಗ್ಗರಿಗೆ ಕೊಟ್ಟುಬಿಡುತ್ತೇನೆ. ಯಾರಿಗಾದರೂ ಮೋಸಮಾಡಿ ಅವರಿಂದೇನಾದರೂ ನಾನು ಕಸಿದುಕೊಂಡಿದ್ದರೆ ಅದಕ್ಕೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದರೆ ಜಕ್ಕಾಯನು ನಿಂತುಕೊಂಡು ಸ್ವಾವಿುಗೆ - ಸ್ವಾಮೀ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಎಳಕೊಂಡದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಜಕ್ಕಾಯನು ನಿಂತುಕೊಂಡು ಕರ್ತದೇವರಿಗೆ, “ಸ್ವಾಮೀ, ಇಗೋ, ನನ್ನ ಸ್ವತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಟ್ಟುಬಿಡುತ್ತೇನೆ. ನಾನು ಯಾರಿಗಾದರೂ ಏನಾದರೂ ಮೋಸಮಾಡಿ ಅವರಿಂದ ತೆಗೆದುಕೊಂಡಿದ್ದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಜಾಕ್ಕೆವ್ಸ್ ಉಟುನ್ ಇಬೆ ರ್‍ಹಾಲೊ, ಅನಿ ಧನಿಯಾಕ್ “ಗುರುಜಿ ಆಯ್ಕಾ! ಮಾಜೆ ಮನುನ್ ಹೊತ್ತ್ಯಾತ್ಲೆ ಅರ್ದ್ಯಾಕ್ ಅರ್‍ದೆ, ಮಿಯಾ ಗರಿಬಾಕ್ನಿ ದಿತಾ, ಅನಿ ಕೊನಾಕ್-ಕೊನಾಕ್ ಮಿಯಾ ಪಸ್ವುಲಾ,ತೆಂಕಾ ತೆಚ್ಯಾ ಚಾರ್ ಪಟ್ ಪರ್ತುನ್ ದಿತಾ”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲಿ ಕತ್ತೆಯನ್ನಾಗಲಿ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.