Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:21 - ಪರಿಶುದ್ದ ಬೈಬಲ್‌

21 ಮಗುವಿಗೆ ಎಂಟು ದಿನವಾದಾಗ ಸುನ್ನತಿ ಆಯಿತು ಮತ್ತು ಆತನಿಗೆ “ಯೇಸು” ಎಂದು ಹೆಸರಿಡಲಾಯಿತು. ಮರಿಯಳ ಗರ್ಭದಲ್ಲಿ ಮಗುವು ಬೆಳೆಯುವುದಕ್ಕೆ ಪ್ರಾರಂಭಿಸುವ ಮೊದಲೇ ದೇವದೂತನು ಈ ಹೆಸರನ್ನೇ ಕೊಡಬೇಕೆಂದು ಸೂಚಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ಕೂಸಿಗೆ ಸುನ್ನತಿಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಅವರು ಅದಕ್ಕೆ ಯೇಸು ಎಂದು ಹೆಸರಿಟ್ಟರು. ಆ ಕೂಸನ್ನು ಗರ್ಭಧರಿಸುವುದಕ್ಕಿಂತ ಮೊದಲೇ ದೇವದೂತನು ಅದೇ ಹೆಸರನ್ನು ಸೂಚಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಎಂಟನೆಯ ದಿನ ಶಿಶುವಿಗೆ ಸುನ್ನತಿ ಮಾಡಬೇಕಾಗಿದ್ದ ಸಂದರ್ಭದಲ್ಲಿ ಅದಕ್ಕೆ ‘ಯೇಸು’ ಎಂಬ ಹೆಸರನ್ನಿಟ್ಟು ನಾಮಕರಣ ಮಾಡಿದರು. ಈ ಹೆಸರನ್ನು ಮರಿಯಳು ಗರ್ಭಿಣಿಯಾಗುವುದಕ್ಕೆ ಮುಂಚೆಯೇ ದೂತನು ಸೂಚಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆ ಕೂಸಿಗೆ ಸುನ್ನತಿಮಾಡುವದಕ್ಕೆ ಕಳೆಯಬೇಕಾದ ಎಂಟು ದಿವಸಗಳು ತುಂಬಿದ ಮೇಲೆ ಅದಕ್ಕೆ ಯೇಸುವೆಂದು ಹೆಸರಿಟ್ಟರು. ಅದು ಗರ್ಭದಲ್ಲಿ ಮೂಡುವದಕ್ಕಿಂತ ಮೊದಲು ದೇವದೂತನು ಅದೇ ಹೆಸರನ್ನು ಸೂಚಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಶಿಶುವಿಗೆ ಸುನ್ನತಿ ಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಮರಿಯಳು ಗರ್ಭಿಣಿಯಾಗುವುದಕ್ಕೆ ಮುಂಚೆಯೇ ದೂತನು ಸೂಚಿಸಿದ್ದಂತೆ “ಯೇಸು” ಎಂದು ನಾಮಕರಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಆಟ್ವ್ಯಾ ದಿಸಿ ಪೊರಾಕ್ ಸುನ್ನತ್ ಕರ್‍ತಲ್ಯಾ ಎಳಾರ್, ತೆಕಾ “ಜೆಜು” ಮನುನ್ ನಾವ್ ಥವ್ಲ್ಯಾನಿ. ಮರಿ ಗರ್‍ವಾರ್ ಹೊವ್ಚ್ಯಾ ಅದ್ದಿಚ್ ದೆವಾಚ್ಯಾ ದುತಾನ್ ಹೆ ನಾವ್ ತೆಕಾ ದಿಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:21
9 ತಿಳಿವುಗಳ ಹೋಲಿಕೆ  

ಎಂಟನೆಯ ದಿನದಲ್ಲಿ ಆ ಗಂಡುಮಗುವಿಗೆ ಸುನ್ನತಿ ಮಾಡಬೇಕು.


ಮಗುವಿಗೆ ಎಂಟು ದಿನವಾದಾಗ ಅವರು ಸುನ್ನತಿ ಮಾಡಿಸುವುದಕ್ಕಾಗಿ ಬಂದರು. ಅವರು ಆ ಮಗುವಿಗೆ “ಜಕರೀಯ” ಎಂಬ ಹೆಸರು ಇಡಬೇಕೆಂದಿದ್ದರು. ಏಕೆಂದರೆ ಅದು ಮಗುವಿನ ತಂದೆಯ ಹೆಸರಾಗಿತ್ತು.


ಕೇಳು! ನೀನು ಗರ್ಭಿಣಿಯಾಗಿ ಒಂದು ಗಂಡುಮಗುವನ್ನು ಹೆರುವೆ. ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು.


ಆತನು ಮನುಷ್ಯನಾಗಿ ಜೀವಿಸುತ್ತಿದ್ದಾಗ ತನ್ನನ್ನು ತಗ್ಗಿಸಿಕೊಂಡು ಮರಣವನ್ನೂ ಕಡೆಗಣಿಸಿ ದೇವರಿಗೆ ಸಂಪೂರ್ಣ ವಿಧೇಯನಾಗಿ, ಶಿಲುಬೆಯ ಮೇಲೆ ಪ್ರಾಣವನ್ನೇ ಕೊಟ್ಟನು.


ಯೇಸು, “ಸದ್ಯಕ್ಕೆ ಒಪ್ಪಿಕೊ. ನಾವು ಯೋಗ್ಯವಾದ ಕಾರ್ಯಗಳನ್ನೆಲ್ಲ ಮಾಡಬೇಕು” ಎಂದು ಉತ್ತರಕೊಟ್ಟನು. ಆಗ ಯೋಹಾನನು ಯೇಸುವಿಗೆ ದೀಕ್ಷಾಸ್ನಾನ ಮಾಡಿಸಲು ಒಪ್ಪಿಕೊಂಡನು.


ಆದರೆ ಮರಿಯಳು ಮಗನನ್ನು ಹೆರುವ ತನಕ ಯೋಸೇಫನು ಅವಳೊಂದಿಗೆ ಶರೀರ ಸಂಬಂಧವಿಲ್ಲದೆ ಇದ್ದನು. ಯೋಸೇಫನು ಆ ಮಗುವಿಗೆ “ಯೇಸು” ಎಂದು ಹೆಸರಿಟ್ಟನು.


ಆಕೆ ಒಬ್ಬ ಮಗನನ್ನು ಹೆರುವಳು. ನೀನು ಆ ಮಗುವಿಗೆ ಯೇಸು ಎಂದು ಹೆಸರಿಡುವೆ. ನೀನು ಆತನಿಗೆ ಆ ಹೆಸರನ್ನೇ ಇಡು; ಏಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು